ದುಶ್ಚಟಗಳಿಂದ ಕುಟುಂಬ ಸಂಕಷ್ಟಕ್ಕೆ: ಮಧುಬಂಗಾರಪ್ಪ
ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಸೊರಬ, ಮೇ 31: ವ್ಯಕ್ತಿಯೋರ್ವ ದುಶ್ಚ ಟಗಳಿಗೆ ಬಲಿಯಾದರೇ, ಆತನ ಇಡೀ ಕುಟುಂಬವೇ ಸಂಕಷ್ಟಕ್ಕೆ ಒಳಗಾಗುತ್ತದೆ ಎಂದು ಶಾಸಕ ಮಧುಬಂಗಾರಪ್ಪ ಎಚ್ಚರಿಸಿದರು. ಮಂಗಳವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿ.ಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್‌ಸಿಡಿ ಘಟಕ, ಸಾರ್ವಜನಿಕ ಆಸ್ಪತ್ರೆ ಹಾಗೂ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಯುವ ಸಮುದಾಯ ದುಶ್ಚ ಟಗಳಿಗೆ ಬಲಿಯಾಗುತ್ತಿದೆ. ತಂಬಾಕು ಸೇವನೆ ಯಿಂದ ಅನೇಕ ಮಾರಣಾಂತಿಕ ಕಾಯಿಲೆ ಗಳಿಗೆ ತುತ್ತಾಗುತ್ತಿದ್ದಾರೆ. ದುಶ್ಚಟಗಳಿಂದ ವ್ಯಕ್ತಿಯೋರ್ವನ ಜೀವಕ್ಕೆ ಹಾನಿಯಾದರೆ ಇಡೀ ಕುಟುಂಬವೆ ಬೀದಿಗೆ ಬರುತ್ತದೆ. ಗ್ರಾಮೀಣ ಭಾಗದ ಜನರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸುವಲ್ಲಿ ಆಶಾ ಕಾರ್ಯಕರ್ತೆಯರು ಮುಂದಾಗಬೇಕು ಎಂದರು. ಸಾರ್ವಜನಿಕ ಸ್ಥಳ ಹಾಗೂ ಕಚೇರಿಗಳಲ್ಲಿ ತಂಬಾಕು ಸೇವನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಗುಟ್ಕಾ ಸೇರಿದಂತೆ ಇನ್ನಿತರ ವಸ್ತುಗಳನ್ನು ಎಲ್ಲೆಂದರಲ್ಲಿ ಉಗಿಯುವುದು ಹಾಗೂ ಧೂಮಪಾನ ಮಾಡುವುದರಿಂದ ಇತರರ ಮೇಲೂ ದುಷ್ಪರಿಣಾಮ ಬೀರುತ್ತದೆ. ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಕಾಯಿಲೆಗಳಿಗೂ ಸಹ ಕಡಿವಾಣ ಹಾಕಲು ಸಾಧ್ಯವಿದೆ ಎಂದರು. ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ವೈ.ಆರ್. ಲೋಕೇಶ್ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ತಂಬಾಕು ಉತ್ಪನ್ನಗಳನ್ನು ಸೇವಿಸುವುದರಿಂದ ಉಲ್ಲಾಸವುಂಟಾಗುತ್ತದೆ. ಆದರೆ, ನಂತರ ಆರೋಗ್ಯದ ಮೇಲೆ ವ್ಯತಿ ರಿಕ್ತ ಪರಿಣಾಮ ಬೀರುವುದರ ಜೊತೆಗೆ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗುತ್ತಾರೆ. ನಿರಂತರ ಧೂಮಪಾನ ಮಾಡುವುದರಿಂದ ಹಲವು ಕಾಯಿ ಲೆಗೆ ಒಳಗಾಗುತ್ತಾರೆ. ಮಹಿಳೆಯರು ಧೂಮ ಪಾನಿಗಳಾದರೆ ಬಂಜೆತನವನ್ನು ಎದು ರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ತಂಬಾಕಿ ನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವ ಕೆಲಸಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಹಾಗೂ ಇಂದಿನ ದಿನಕ್ಕೆ ಮಾತ್ರ ಸೀಮಿತವಾಗಬಾರದು ಎಂದರು. ಈ ಸಂದರ್ಭದಲ್ಲಿ ಪಪಂ ಸದಸ್ಯ ಮಂಚಿ ಹನುಮಂತಪ್ಪ, ಹರೀಶ್ ಗ್ರಾಪಂ ಸದಸ್ಯ ಉಮಾಪತಿ, ತಾಲೂಕು ಆರೋಗ್ಯಾಧಿಕಾರಿ ಡಾ. ಇ.ಕೆ. ಸತೀಶ್ ಕುಮಾರ್, ಅರುಂಧತಿ, ಇಂದೂಧರ ಪಾಟೀಲ್, ಎಚ್.ಗಣಪತಿ, ಎಂ.ಡಿ. ಶೇಖರ್, ಯು. ಫಯಾಝ್ ಅಹ್ಮದ್ ಮತ್ತಿತರರಿದ್ದರು.





