ಅಧಿಕಾರಿಗಳಿಂದ ಹೃದಯ ಸ್ಪರ್ಷಿ ಬೀಳ್ಕೊಡುಗೆ : ಸಿಇಒ ಪ್ರಬಾರ ಜಿಲ್ಲಾಧಿಕಾರಿ
ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ನಿವೃತ್ತಿ

ಮಡಿಕೇರಿ, ಮೇ 31: ಕಳೆದ 11 ತಿಂಗಳಿನಿಂದ (2015 ರ ಜೂನ್ 22 ರಿಂದ 2016 ರ ಮೇ 31 ರವರೆಗೆ) ಕೊಡಗು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಮೀರ್ ಅನೀಸ್ ಅಹ್ಮದ್ ವಯೋ ನಿವೃತ್ತಿ ಹೊಂದಿದ್ದು, ಜಿಲ್ಲಾಡಳಿತ ವತಿಯಿಂದ ಹೃದಯ ಸ್ಪರ್ಷಿಯಾಗಿ ಬೀಳ್ಕೊಡಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿಯಲಿ
್ಲ ಮಂಗಳವಾರ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಮತ್ತು ಜಿಪಂನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಅವರಿಗೆ ಪುಷ್ಪಗುಚ್ಚ, ಶಾಲು, ಫಲ ತಾಂಬೂಲ ನೀಡಿ ಆತ್ಮೀಯವಾಗಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್, ಜನರ ಬವಣೆ ನಿವಾರಿಸಲು ಅಧಿಕಾರದ ಅವಕಾಶ ಸಿಕ್ಕಿರುತ್ತದೆ. ಅದರಂತೆ ಸಾರ್ವಜನಿಕರು, ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಬೇಕಿದೆ. ಆ ನಿಟ್ಟಿನಲ್ಲಿ 30 ವರ್ಷಗಳ ಸರಕಾರಿ ಸೇವಾವಧಿಯಲ್ಲಿ ಕಾರ್ಯನಿರ್ವಹಿಸಲು ಪ್ರಯತ್ನಿಸಿದ್ದೇನೆ ಎಂದು ಅವರು ಹೇಳಿದರು.
ಕಳೆದ 11 ತಿಂಗಳ ಅಧಿಕಾರವಧಿಯಲ್ಲಿ ವೀರ ಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ, ಮಹದೇವಪೇಟೆ ರಸ್ತೆ ಅಗಲೀಕರಣಕ್ಕೆ ಚಾಲನೆ, ಕಾವೇರಿ ನದಿ ಪಾತ್ರದ ಗ್ರಾಮಗಳಲ್ಲಿ ಸ್ವಚ್ಛತೆಗೆ ಕ್ರಮ, ಆ ದಿಸೆಯಲ್ಲಿ ಅಭಿಯಾನ, ದುಬಾರೆಯಲ್ಲಿ ರಿವರ್ ರ್ಯಾಫ್ಟಿಂಗ್ ಸುಧಾರಣೆಗೆ ಕ್ರಮ, ಹೀಗೆ ಹಲವು ಕಾಮಗಾರಿಗಳಿಗೆ ಚಾಲನೆ, ಸುಧಾರಣೆ ಮತ್ತು ಜಾಗೃತಿಗೆ ಹೆಚ್ಚಿನ ಒತ್ತು ನೀಡಲು ಪ್ರಯತ್ನಿಸಲಾಯಿತು ಎಂದು ಮೀರ್ ಅನೀಸ್ ಅಹ್ಮದ್ ಅವರು ತಿಳಿಸಿದರು. ಇಲ್ಲಿನ ಜನಪ್ರತಿನಿಧಿಗಳು, ಅಧಿಕಾರಿಗಳು ಪತ್ರಕರ್ತರು ಹಾಗೂ ಸಾರ್ವಜನಿಕರು ಹೀಗೆ ಎಲ್ಲರ ಸಹಕಾರದಿಂದ ಉತ್ತಮ ಆಡಳಿತ ನೀಡಲು ಸಹಕಾರಿಯಾಯಿತು ಎಂದು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಹೇಳಿದರು. ಜಿಪಂ ಸಿಇಒ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾತನಾಡಿ, ಉತ್ತಮ ಆಡಳಿತ ಅನುಭವ ಇದ್ದ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಅವರ ಸೇವೆ ಸಮಾಜಕ್ಕೆ ಇನ್ನಷ್ಟು ಅಗತ್ಯವಿತ್ತು ಎಂದು ಅವರು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಮಾತನಾಡಿ, ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಅವರ ಸಹನೆ, ತಾಳ್ಮೆ, ಸಂಯಮ ಮೆಚ್ಚುವಂತಹದ್ದು ಎಂದರು. ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಆರ್.ಬಸವರಾಜು, ಜಿಲ್ಲಾ ಸರ್ಜನ್ ಡಾ.ಮುತ್ತಪ್ಪ, ಐಟಿಡಿಪಿ ಇಲಾಖೆ ಅಧಿಕಾರಿ ಕೆ.ಎಚ್.ಸತೀಶ್, ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನ್ನಾಥ್, ಭೂಮಾಪನಾ ಇಲಾಖೆಯ ಸಹಾಯಕ ನಿರ್ದೇಶಕ ಸಂಶುದ್ದೀನ್ ಮತ್ತಿತರು ಜಿಲ್ಲಾಧಿಕಾರಿಯವರ ಕಾರ್ಯನಿರ್ವಹಣೆ, ಶ್ರದ್ದೆ, ಬದ್ಧತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಾನಾ ಇಲಾಖೆ ಅಧಿಕಾರಿಗಳು ಇದ್ದರು, ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ.ಸುರೇಶ್ ನಿರೂಪಿಸಿದರು, ರವಿ ಭೂತನಕಾಡು ಪ್ರಾರ್ಥಿಸಿದರು, ಮಣಜೂರು ಮಂಜುನಾಥ್ ವಂದಿಸಿದರು. ಜಿ.ಪಂ.ಸಿಇಒ ಚಾರುಲತಾ ಸೋಮಲ್ ಪ್ರಭಾರ ಜಿಲ್ಲಾಧಿಕಾರಿ:







