ರಾಹುಲ್ ಗಾಂಧಿಗೆ ಶೀಘ್ರದಲ್ಲೇ ಎಐಸಿಸಿ ಅಧ್ಯಕ್ಷ ಪಟ್ಟ ...!
ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ಗೆ ಮೇಜರ್ ಸರ್ಜರಿ
ಹೊಸದಿಲ್ಲಿ, ಜೂ.1: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶೀಘ್ರದಲ್ಲೇ ಎಐಸಿಸಿ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ ಎಂದು ಎಐಸಿಸಿ ಮೂಲಗಳು ತಿಳಿಸಿದೆ.
ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರದ ಚುಕ್ಕಾಣಿ ಹಿಡಿಯುವ ಮೊದಲು ಕಾಂಗ್ರೆಸ್ನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಮಗ್ರ ಬದಲಾವಣೆ ನಡೆಯಲಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಮತ್ತು ರಾಜ್ಯ ಘಟಕಗಳ ಅಧ್ಯಕ್ಷರ ಬದಲಾವಣೆ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ನ ರಾಷ್ಟ್ರ ಮತ್ತು ರಾಜ್ಯ ಸಮಿತಿಗಳಲ್ಲಿ ಯುವಕರಿಗೆ ಮನ್ನಣೆಯ ಮಣೆ ಹಾಕಲು ರಾಹುಲ್ ಗಾಂಧಿ ಯೋಚಿಸುತ್ತಿದ್ದಾರೆ. ಆದರೆ ಈಗಾಗಲೇ ವಿವಿಧ ಹುದ್ದೆಗಳಲ್ಲಿ ಅಂಟಿಕೊಂಡಿರುವ ಹಿರಿಯ ಕಾಂಗ್ರೆಸ್ ನಾಯಕರನ್ನು ಅವರ ಸ್ಥಾನದಿಂದ ಇಳಿಸಲು ಸಮಸ್ಯೆ ಉಂಟಾಗಿದೆ. ಕಾಂಗ್ರೆಸ್ನಲ್ಲಿ ಹಿರಿಯರು ಮತ್ತು ಯುವ ನಾಯಕರ ನಡುವೆ ನಡೆಯುತ್ತಿರುವ ಅಧಿಕಾರದ ಸಂಘರ್ಷ ಸಮಸ್ಯೆಗೆ ಕಾರಣವಾಗಿದೆ.
Next Story