Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಂಡಾಜೆ: ಉದ್ದೇಶಿತ ತ್ಯಾಜ್ಯ ಘಟಕ...

ಮುಂಡಾಜೆ: ಉದ್ದೇಶಿತ ತ್ಯಾಜ್ಯ ಘಟಕ ಸ್ಥಳಕ್ಕೆ ಶಾಸಕರ ಭೇಟಿ

ವಾರ್ತಾಭಾರತಿವಾರ್ತಾಭಾರತಿ1 Jun 2016 5:56 PM IST
share
ಮುಂಡಾಜೆ: ಉದ್ದೇಶಿತ ತ್ಯಾಜ್ಯ ಘಟಕ ಸ್ಥಳಕ್ಕೆ ಶಾಸಕರ ಭೇಟಿ

ಬೆಳ್ತಂಗಡಿ, ಜೂ. 1: ಜನ ವಸತಿ ಇರುವ ಸ್ಥಳದಲ್ಲಿ ಮುಂಡಾಜೆ ಗ್ರಾ.ಪಂ.ನ ಕೋರಿಕೆಯಂತೆ ಕೂಳೂರು-ಕುರುಡ್ಯ ಪ್ರದೇಶದಲ್ಲಿ ತ್ಯಾಜ್ಯ ಘಟಕ ಸ್ಥಾಪನೆಗೆ ಸ್ಥಳೀಯರ ವಿರೋಧವಿದ್ದು, ಈ ವಿಚಾರ ಚರ್ಚೆಗೆ ಕಾರಣವಾಗಿತ್ತು. ಉದ್ದೇಶಿತ ಘಟಕ ಸ್ಥಳಕ್ಕೆ ಶಾಸಕ ಕೆ. ವಸಂತ ಬಂಗೇರ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂಬಂಧ ಕೂಳೂರು-ಕುರುಡ್ಯ ನಾಗರಿಕರು ಈ ಪ್ರದೇಶದಲ್ಲಿ ಜನ ವಸತಿ ಇದ್ದು ತ್ಯಾಜ್ಯ ಘಟಕ ನಿರ್ಮಾಣದಿಂದ ವಸತಿಗೆ ಅನನುಕೂಲವಾಗುವುದಾಗಿ ಮನವಿ ಮಾಡಿದರು.

ಸ್ಥಳವು ಜನವಾಸ ಪ್ರದೇಶಕ್ಕೆ ಬಹಳ ಹತ್ತಿರದಲ್ಲಿದ್ದು ನೂರಕ್ಕೂ ಅಧಿಕ ಮನೆಗಳಿವೆ. ಇಲ್ಲಿನವರು ಕುಡಿಯಲು ಉಪಯೋಗಿಸುವ ನೀರಿನ ಆಶ್ರಯವು ಉದ್ದೇಶಿತ ಸ್ಥಳದ ಬಳಿಯಲ್ಲಿಯೇ ಇದ್ದು ನೀರು ಕಲುಷಿತಗೊಂಡು ಮಾರಕ ರೋಗಗಳು ಹರಡುವ ಭೀತಿಯಿದೆ. ಜಿ.ಪಂ. ರಸ್ತೆಯು ಇದೇ ಪ್ರದೇಶದಲ್ಲಿದ್ದು ವಾಹನ ಸಂಚಾರ ಬಹಳಷ್ಟಿದೆ. ಬಸ್ ತಂಗುದಾಣವೂ ಹತ್ತಿರದಲ್ಲಿಯೇ ಇದ್ದು ಪಕ್ಕದಲ್ಲಿಯೇ ಅರೇಬಿಕ್ ಶಾಲೆ, ಮದರಸ, ದೇವಸ್ಥಾನವೂ ಇದೆ.

ಗ್ರಾ.ಪಂ. ಸ್ಥಳ ಗುರುತಿಸುವ ಮೊದಲು ಪರಿಸರ ವಾಸಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವುದಿಲ್ಲ. ವಾರ್ಡ್‌ಸಭೆ, ಗ್ರಾಮಸಭೆಗಳಲ್ಲಿ ಆಕ್ಷೇಪಣೆ ವ್ಯಕ್ತವಾಗಿದ್ದರೂ ಗ್ರಾ.ಪಂ. ಆಡಳಿತವು ಯೋಜನೆಗೆ ಮುಂದಾಗಿದೆ. ಕಾಮಗಾರಿಗೆ ಟೆಂಡರ್ ಕರೆದಿರುವುದಿಲ್ಲ. ಪ್ರಕಟಣೆ ಮಾಡಿರುವುದಿಲ್ಲ. ಪ್ರಕ್ರಿಯೆ ಪಾರದರ್ಶಕವಾಗಿರುವುದಿಲ್ಲ. ಗ್ರಾ. ಪಂ. ವ್ಯಾಪ್ತಿಯಲ್ಲಿ ಪ್ರಕೃತ ಗುರುತಿಸಿದ ಸ್ಥಳದಿಂದ ಸೂಕ್ತ ಸ್ಥಳ ಬೇರೆ ಇದೆ. ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಆರೋಗ್ಯ ಇಲಾಖೆಯಿಂದ ಸೂಕ್ತ ಪರವಾನಿಗೆ ಅಥವಾ ಶಿಫಾರಸ್ಸುಗಳನ್ನು ಪಡೆದಿರುವುದಿಲ್ಲ ಎಂದು ಗ್ರಾಮಸ್ಥರು ಹೇಳಿದರು.

ಬದಲಿ ಜಾಗದ ಪರಿಶೀಲನೆಗಾಗಿ ಶಾಸಕರು ವಲಯ ಅರಣ್ಯ ಅಧಿಕಾರಿ ಸುಂದರ ಶೆಟ್ಟಿ ಹಾಗೂ ಗ್ರಾಮ ಕರಣಿಕ ರಾಘವೇಂದ್ರ ಅವರ ಜತೆಗೆ ದೂಂಬೆಟ್ಟು ಪ್ರದೇಶಕ್ಕೆ ತೆರಳಲಾಯಿತು. ಅಲ್ಲಿ ಡಿಸಿ ಮನ್ನಾ ಭೂಮಿ ಇದ್ದು ಅನೇಕರು ಮನೆ ನಿವೇಶನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಹಾಗಿದ್ದರೂ ಅಲ್ಲಿ 7 ಎಕರೆಯಷ್ಟು ಜಾಗ ಇದ್ದು ತ್ಯಾಜ್ಯ ವಿಲೇಗೆ ಜಾಗ ನೀಡಬಹುದು ಎಂದು ಪರಿಶೀಲಿಸಲಾಯಿತು.

ಈ ಸಂದರ್ಭದಲ್ಲಿ ಜಿ. ಪಂ. ಸದಸ್ಯೆ ನಮಿತಾ, ತಾ. ಪಂ. ಸದಸ್ಯ ಸೆಬಾಸ್ಟಿಯನ್, ಗ್ರಾ.ಪಂ. ಅಧ್ಯಕ್ಷೆ ಶಾಲಿನಿ, ಉಪಾಧ್ಯಕ್ಷೆ ವಸಂತಿ, ಸದಸ್ಯರಾದ ಚಂದ್ರಾವತಿ, ಸುಮನಾ ಗೋಖಲೆ, ಅಶ್ವಿನಿ ಹೆಬ್ಬಾರ್, ನಾರಾಯಣ ಗೌಡ, ಅಬ್ದುಲ್ ಅಜೀಜ್, ಸುರೇಶ್ ಹೆಗ್ಡೆ, ಗಣೇಶ್ ಬಂಗೇರ, ಪಿಡಿಒ ಸಂಜೀವ ನಾಯ್ಕ, ಮಾಜಿ ಉಪಾಧ್ಯಕ್ಷ ನಾಗರಾಜ ನಾಯ್ಕ, ಮುಖಂಡ ಶ್ರೆಧರ ಭಿಡೆ, ಸ್ಥಳೀಯರಾದ ನಾಮದೇವ ರಾವ್, ಎನ್. ಎಸ್. ಗೋಖಲೆ ಮುಂಡಾಜೆ, ಬಾಲಕೃಷ್ಣ ಶೆಟ್ಟಿ, ಕೆ. ಸತ್ಯನಾರಾಯಣ ಹೊಳ್ಳ ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X