ಕೊಡಗು: ಜಿಲ್ಲಾ ನೂತನ ಎಸ್ಪಿಯಾಗಿ ಪಿ.ರಾಜೇಂದ್ರ ಪ್ರಸಾದ್

ಮಡಿಕೇರಿ, ಜೂ.1: ಕೊಡಗು ಜಿಲ್ಲಾ ನೂತನ ಎಸ್ಪಿಯಾಗಿ ಪಿ.ರಾಜೇಂದ್ರ ಪ್ರಸಾದ್ ನೇಮಕಗೊಂಡಿದ್ದಾರೆ. ಈ ಹಿಂದೆ ಜಿಲ್ಲೆಯಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸಿರುವ ರಾಜೇಂದ್ರ ಪ್ರಸಾದ್ ಅವರಿಗೆ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಸಂಪೂರ್ಣ ಮಾಹಿತಿ ಇದೆ. ಇವರು ಜೂ.2 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಹಿಂದಿನ ಎಸ್ಪಿ ವರ್ತಿಕಾ ಕಟಿಯಾರ್ ಅವರು ಬೆಂಗಳೂರು ವಿಭಾಗದ ಗುಪ್ತದಳ ಇಲಾಖೆಯ ಅಧಿಕಾರಿಯಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ನೂತನ ಎಸ್ಪಿಯಾಗಿ ಪಿ.ರಾಜೇಂದ್ರ ಪ್ರಸಾದ್ ಅವರನ್ನು ನಿಯುಕ್ತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
Next Story





