ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ಸಚಿವ ಬೇಗ್ ಕರೆ
ರಾಜ್ಯ ಮುಸ್ಲಿಮ್ ಮಹಿಳಾ ಆಂದೋಲನದ ಸಮಾವೇಶ

ಬೆಂಗಳೂರು, ಜೂ.1: ಸಮಾಜದ ಪ್ರಗತಿಗಾಗಿ ಹೆಣ್ಣುಮಕ್ಕಳು ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸಬಲರಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಪೋಷಕರು ಮುಂದಾಗಬೇಕು ಎಂದು ಮೂಲಸೌಲಭ್ಯ ಅಭಿವೃದ್ಧಿ, ವಾರ್ತಾ ಮತ್ತು ಹಜ್ ಸಚಿವ ಆರ್.ರೋಷನ್‌ಬೇಗ್ ಕರೆ ನೀಡಿದ್ದಾರೆ.
ಬುಧವಾರ ಶಾಸಕರ ಭವನದಲ್ಲಿ ರಾಜ್ಯ ಮುಸ್ಲಿಮ್ ಮಹಿಳಾ ಆಂದೋಲನದ ಎರಡನೆ ವಾರ್ಷಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಜನಸಂಖ್ಯೆಯಲ್ಲಿ ಶೇ.50ರಷ್ಟಿರುವ ಮಹಿಳೆಯರು, ಹೆಣ್ಣು ಮಕ್ಕಳು ಶೈಕ್ಷಣಿಕ, ಆರ್ಥಿಕವಾಗಿ ಸಬಲರಾಗದೆ ಸಮಾಜದ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.ಂಡೋನೇಶಿಯಾ, ಮಲೇಶಿಯಾ ಸೇರಿದಂತೆ ಇನ್ನಿತರ ಮುಸ್ಲಿಮ್ ರಾಷ್ಟ್ರಗಳಲ್ಲಿ ಬಹುಪಾಲು ಮಹಿಳೆಯರು ಶಿಕ್ಷಣವನ್ನು ಪಡೆದು ಉದ್ಯೋಗದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನಮ್ಮ ದೇಶದಲ್ಲೂ ಇದೇ ರೀತಿಯಲ್ಲಿ ಹೆಣ್ಣುಮಕ್ಕಳು ಆರ್ಥಿಕವಾಗಿ ಸಶಕ್ತರಾಗಬೇಕು ಎಂದು ಅವರು ಹೇಳಿದರು.
ಮಹಿಳೆಯರು ಆರ್ಥಿಕವಾಗಿ ಸಬಲರಾದರೆ ಕುಟುಂಬದ ನಿರ್ವಹಣೆಗೆ ನೆರವಾಗುತ್ತದೆ. ಇಂದಿನ ಸಮಾಜದಲ್ಲಿರುವ ವಾಸ್ತವಿಕ ಪರಿಸ್ಥಿತಿ ಅವರ ಗಮನಕ್ಕೂ ಬಂದರೆ, ಕುಟುಂಬದಲ್ಲಿ ಸಣ್ಣಪುಟ್ಟ ವಿಷಯಗಳಿಗೆ ನಡೆಯುವಂತಹ ವೈಮನಸ್ಸುಗಳು ದೂರವಾಗುತ್ತದೆ ಎಂದು ರೋಷನ್‌ಬೇಗ್ ಅಭಿಪ್ರಾಯಪಟ್ಟರು.
ಸರಕಾರಿ ಉದ್ಯೋಗಗಳನ್ನು ನಂಬಿಕೊಂಡು ಕೂರುವ ಪರಿಸ್ಥಿತಿ ಈಗಿಲ್ಲ. ಖಾಸಗಿ ವಲಯದಲ್ಲಿ ಸಾಕಷ್ಟು ಅವಕಾಶಗಳು ಇಂದಿನ ಯುವ ಜನಾಂಗಕ್ಕೆ ಲಭ್ಯವಾಗುತ್ತಿವೆ. ಆದುದರಿಂದ, ಯುವಕ, ಯುವತಿಯರು ಈ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ಅವರು ಹೇಳಿದರು.ೌನ್ಸಿಲಿಂಗ್ ಕೇಂದ್ರ ಆರಂಭಿಸಿ: ವಿವಾಹ ವಾಗುವಂತಹ ಯುವಕರು ತಮ್ಮ ಭವಿಷ್ಯವನ್ನು ಯಾವ ರೀತಿಯಲ್ಲಿ ರೂಪಿಸಿಕೊಳ್ಳಬೇಕು ಎಂಬುದರ ಕುರಿತು ತಾಲೂಕು ಮಟ್ಟದಲ್ಲಿ ಕೌನ್ಸಿಲಿಂಗ್ ಕೇಂದ್ರಗಳನ್ನು ಆರಂಭಿಸಬೇಕು. ಇದರಲ್ಲಿ ನವ ವಿವಾಹಿತರಿಗೆ ತಮ್ಮ ವೈವಾಹಿಕ ಜೀವನವನ್ನು ಯಾವ ರೀತಿಯಲ್ಲಿ ನಿರ್ವಹಿಸಬೇಕು ಎಂಬುದರ ಕುರಿತು ಮಾರ್ಗದರ್ಶನ ಮಾಡಬೇಕು ಎಂದು ರೋಷನ್‌ಬೇಗ್ ತಿಳಿಸಿದರು.
ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಮಸೂದ್ ಫೌಜ್ದಾರ್ ಮಾತನಾಡಿ, ‘ಅರಿವು’ ಯೋಜನೆ(ಶಿಕ್ಷಣಕ್ಕಾಗಿ ನೀಡುವ ಸಾಲ)ಯಡಿ ಕಳೆದ ವರ್ಷ 35 ಸಾವಿರ ವಿದ್ಯಾರ್ಥಿಗಳಿಗೆ 56 ಕೋಟಿ ರೂ.ಗಳನ್ನು ವಿತರಿಸಲಾಗಿದೆ. ಇದರಲ್ಲಿ 4 ಸಾವಿರ ಇಂಜಿನಿಯರಿಂಗ್, 125 ವೈದ್ಯಕೀಯ ವಿದ್ಯಾರ್ಥಿಗಳು ಸೇರಿದ್ದಾರೆ ಎಂದರು.
ಮುಂದಿನ ಶೈಕ್ಷಣಿಕ ಸಾಲಿನಲ್ಲಿ 63 ಕೋಟಿ ರೂ. ಖರ್ಚು ಮಾಡುವ ಗುರಿ ಹೊಂದಿದ್ದು, ಇದರಲ್ಲಿ 5 ಸಾವಿರ ಇಂಜಿನಿಯರಿಂಗ್, 200 ವೈದ್ಯಕೀಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡಬೇಕು ಎಂದು ನಿರ್ಧರಿಸಲಾಗಿದೆ. ಇದೇ ಮೊದಲ ಬಾರಿಗೆ ಬಿಎ, ಬಿ.ಕಾಂಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ನೀಡಲಾಗುವುದು ಎಂದು ಅವರು ಹೇಳಿದರು.ಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಕಳೆದ ವರ್ಷ ವಿವಿಧ ಯೋಜನೆಗಳಡಿಯಲ್ಲಿ 53 ಸಾವಿರ ಫಲಾನು ಭವಿಗಳಿಗೆ 213 ಕೋಟಿ ರೂ. ವಿತರಿಸಲಾಗಿದೆ. ನಿಗಮದಲ್ಲಿದ್ದ ಮಧ್ಯವರ್ತಿಗಳ ಹಾವಳಿಯನ್ನು ಶೇ.80ರಷ್ಟು ಕಡಿವಾಣ ಹಾಕಲಾಗಿದೆ. ಇದಕ್ಕಾಗಿ ಸಾರ್ವಜನಿಕರ ಸಹಕಾರವು ಅತ್ಯಗತ್ಯ ಎಂದು ಮಸೂದ್ ಫೌಜ್ದಾರ್ ತಿಳಿಸಿದರು.
ಸಮಾವೇಶದಲ್ಲಿ ಕರ್ನಾಟಕ ಮುಸ್ಲಿಮ್ ಮಹಿಳಾ ಆಂದೋಲನದ ಅಧ್ಯಕ್ಷೆ ನಗ್ಮಾ ಶೇಖ್, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ವೈ.ಸಯೀದ್ ಅಹ್ಮದ್, ಬೆಂಗಳೂರು ವಿಭಾಗದ ಅಧ್ಯಕ್ಷ ಮುದಬ್ಬೀರ್‌ಅಹ್ಮದ್‌ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.





