Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಲ್ಲೆಯ ಚರಂಡಿಗಳನ್ನು ಸ್ವಚ್ಛಗೊಳಿಸಲು...

ಜಿಲ್ಲೆಯ ಚರಂಡಿಗಳನ್ನು ಸ್ವಚ್ಛಗೊಳಿಸಲು ಜಿ.ಪಂ. ಸಿಇಒ ಸೂಚನೆ

ಸಾಂಕ್ರಾಮಿಕ ರೋಗ ನಿಯಂತ್ರಣ ಕಾರ್ಯಕ್ರಮಗಳ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ2 Jun 2016 5:59 PM IST
share

ಮಂಗಳೂರು,ಜೂ 2: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಜಿಲ್ಲೆಯ ಎಲ್ಲಾ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಚರಂಡಿಗಳಲ್ಲಿರುವ ತ್ಯಾಜ್ಯ ಮತ್ತು ಕಸಕಡ್ಡಿಗಳನ್ನು ಸ್ವಚ್ಛಗೊಳಿಸಲು ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀದ್ಯಾ ಸೂಚಿಸಿದ್ದಾರೆ.

ಅವರು ಜಿ.ಪಂ. ಮಿನಿ ಸಭಾಂಗಣದಲ್ಲಿ ಬುಧವಾರ ಸಂಜೆ ನಡೆದ ಸಾಂಕ್ರಾಮಿಕ ರೋಗ ನಿಯಂತ್ರಣ ಕಾರ್ಯಕ್ರಮಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯದೆ, ಅಲ್ಲಲ್ಲಿ ನಿಂತುಕೊಳ್ಳುವುದರಿಂದಲೇ ಮಲೇರಿಯಾ, ಡೆಂಗ್ಯೂ ಮತ್ತಿತರ ಸಾಂಕ್ರಾಮಿಕ ರೋಗಗಳಿಗೆ ಮೂಲ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಮಂಗಳೂರು ಮಹಾನಗರಪಾಲಿಕೆ, ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಕೂಡಲೇ ತಮ್ಮ ವ್ಯಾಪ್ತಿಯ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತಾಗಲು, ಸ್ವಚ್ಛತೆ ನಡೆಸಬೇಕು. ಈಗಾಗಲೇ ಗ್ರಾಮ ಪಂಚಾಯತ್‌ಗಳಿಗೆ ಈ ಸಂಬಂಧ ಸುತ್ತೋಲೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದರು.

ಮಲೇರಿಯಾ, ಡೆಂಗ್ ಮತ್ತಿತರ ಪ್ರಕರಣಗಳು ಕಂಡುಬಂದ ಕೂಡಲೇ ಆರೋಗ್ಯ ಇಲಾಖೆಯವರು ಆ ರೋಗಿಯ ಮೇಲೆ ಹಾಗೂ ಅಲ್ಲಿನ ಪರಿಸರದ ಮೇಲೆ ವಿಶೇಷ ಗಮನಹರಿಸಬೇಕು. ಈ ಬಗೆ ದೈನಂದಿನ ಮಾಹಿತಿ ಪಡೆದುಕೊಳ್ಳಬೇಕು. ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಂದ ರೋಗ ಪೀಡಿತರ ಬಗ್ಗೆ ಬರುವ ವರದಿಗಳ ಬಗ್ಗೆ ಹೆಚ್ಚು ಒತ್ತು ನೀಡಬೇಕು. ಆಶಾ ಕಾರ್ಯಕರ್ತೆಯರು ಆರೋಗ್ಯ ಜಾಗೃತಿಯನ್ನು ಹೆಚ್ಚು ಪರಿಣಾಮಕಾರಿಯಾಗಿ ನಡೆಸಬೇಕು. ಸರಕಾರಿ ಕಚೇರಿಗಳು ತಮ್ಮ ಪರಿಸರ ಮತ್ತು ಕಚೇರಿ ವಠಾರವನ್ನು ಶುಚಿಯಾಗಿರಿಸಬೇಕು. ಶಾಲೆಗಳಲ್ಲಿ ಸ್ವಚ್ಛತೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು.

ಅಂಗಡಿ, ಗೂಡಂಗಡಿಗಳಲ್ಲಿ ಗ್ರಾಹಕರು ಎಳನೀರು ಕುಡಿದ ಬಳಿಕ ಅದರ ತ್ಯಾಜ್ಯಗಳನ್ನು ಪಕ್ಕದಲ್ಲಿಯೇ ಅದನ್ನು ರಾತ್ರಿಯವರೆಗೂ ಇಟ್ಟು, ರಾತ್ರಿ ಗೋಣಿ ಚೀಲದಲ್ಲಿ ಶೇಖರಿಸುವ ಬದಲು ಗ್ರಾಹಕರು ಬೊಂಡ ಕುಡಿದ ತಕ್ಷಣ ಅದರ ತ್ಯಾಜ್ಯಗಳನ್ನು ಗೋಣಿಗಳಲ್ಲಿ ಶೇಖರಿಸಬೇಕು. ಇದೇ ರೀತಿ ಖಾಲಿ ಸೋಡಾ ಬಾಟಲಿಗಳನ್ನು ಅಂಗಡಿ ವಠಾರದಲ್ಲಿಡುವುದನ್ನು ತಪ್ಪಿಸಬೇಕು. ಗುಜರಿ ಅಂಗಡಿಗಳಲ್ಲಿ ಹಳೇ ಟಯರುಗಳನ್ನು ತೆರೆದ ಪ್ರದೇಶಗಳಲ್ಲಿ ಇಡಲು ಅವಕಾಶ ನೀಡಬಾರದು. ಪರಿಸರ ಸ್ವಚ್ಛ ಇಡಲು ಅಂಗಡಿ ಮಾಲಕರು ನಿರಾಕರಿಸಿದ್ದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲು ಸೂಚಿಸಿದರು.

 ಮಂಗಳೂರು ಮಹಾನಗರಪಾಲಿಕೆಯು ಮಲೇರಿಯಾ ನಿಯಂತ್ರಣ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಬೇಕು. ವಿಶೇಷವಾಗಿ ಕಟ್ಟಡ ಕಾರ್ಮಿಕರಲ್ಲಿ ಮಲೇರಿಯಾ ರೋಗ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿರುವುದರಿಂದ ನಿರ್ಮಾಣ ಹಂತದ ಕಟ್ಟಡಗಳ ಮೇಲೆ ನಿಗಾ ಇಡಲು ಅವರು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
  ಮಲೇರಿಯಾ ನಿಯಂತ್ರಣ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಇನ್ನಷ್ಟು ಪರಿಣಾಮಕಾರಿ ಕಾರ್ಯಕ್ರಮ ನಡೆಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಅರುಣ್ ಕುಮಾರ್, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X