ರಾಜ್ಯ ಸರಕಾರಿ ನೌಕರರ ಮುಷ್ಕರ ಯಶಸ್ವಿ

ತರೀಕೆರೆ, ಜೂ.2: ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ಸರಕಾರಿ ನೌಕರರ ಸಂಘ ಕರೆ ನೀಡಿದ್ದ ಒಂದು ದಿನದ ಮುಷ್ಕರ ಗುರುವಾರ ತಾಲೂಕಿನಲ್ಲಿ ಯಶ್ವಸಿಯಾಗಿ ನಡೆಯಿತು. ಸರಕಾರಿ ನೌಕರರು ಪಟ್ಟಣದ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಘಟಕದ ಕಚೇರಿಯಿಂದ ಮೆರವಣಿಗೆ ನಡೆಸಿ ಉಪವಿಭಾಗಾಧಿಕಾರಿ ಸಂಗಪ್ಪರವರಿಗೆ ಮನವಿ ಸಲ್ಲಿಸಿದರು.
ಸಮಾನ ಕೆಲಸಕ್ಕೆ ಸಮಾನ ವೇತನ ಭತ್ತೆಗಳನ್ನು ಮಂಜೂರು ಮಾಡಬೇಕು. 7ನೆ ವೇತನ ಆಯೋಗದ ವರದಿ ಜಾರಿಗೊಳಿಸಬೇಕು. 5ವರ್ಷಗಳಿಗೊಮ್ಮೆ ವೇತನ ಪರಿಷ್ಕರಿಸಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರಿ ನೌಕರರ ನಡುವಿನ ವೇತನ ತಾರತಮ್ಯವನ್ನು ಹೋಗಲಾಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಇತರೆ ರಾಜ್ಯಗಳಲ್ಲಿ ಸಮಾನ ವೇತನ ನೀಡಲಾಗುತ್ತಿದ್ದು, ರಾಜ್ಯ ಸರಕಾರ ಮಾತ್ರ ನೌಕರರ ಬೇಡಿಕೆಯನ್ನು ನಿರ್ಲಕ್ಷಿಸಿದೆ. ಆಯವ್ಯಯ ಮಂಡನೆ ಪೂರ್ವದಲ್ಲಿ ನಡೆದ ಚರ್ಚೆಯಲ್ಲಿ ನೌಕರರ ಸಂಘದ ನಿಯೋಗಕ್ಕೆ ನೀಡಿದ್ದ ಭರವಸೆಯನ್ನು ಈಡೇರಿಸಲು ಸರಕಾರ ಮುಂದಾಗಬೇಕು. ಸರಕಾರದ ಎಲ್ಲ ಯೋಜನೆಗಳನ್ನು ಸಮರ್ಪಕ ಜಾರಿಗೊಳಿಸುವಲ್ಲಿ ಸರಕಾರಿ ನೌಕರರ ಪಾತ್ರ ಮಹತ್ವದ್ದಾಗಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಸಂಘವು ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು
ಂ.ಬಿ.ರಾಮಚಂದ್ರಪ್ಪ, ಉಪಾಧ್ಯಕ್ಷ ಡಾ.ಪ್ರಭಾಕರ್, ಕಾರ್ಯದರ್ಶಿ ಕಾಂತರಾಜು, ಖಜಾಂಚಿ ಕೆಂಪರಂಗಯ್ಯ, ರಾಜ್ಯ ಪರಿಷತ್ ಸದಸ್ಯ ಶ್ರೀನಿವಾಸ್, ನೌಕರರ ಸೊಸೈಟಿ ಅಧ್ಯಕ್ಷ ಎಸ್.ಟಿ.ತಿಪ್ಪೇಶ್, ಶಿಕ್ಷಕರ ಸಂಘದ ಅಧ್ಯಕ್ಷ ಪರಮೇಶ್ವರಪ್ಪ, ಮುಖಂಡರಾದ ಶೋಭಾ, ಸತೀಶ್, ಜ್ಯೋತಿ, ಪುರಸಭೆ ನೌಕರರ ಸಂಘದ ಅಧ್ಯಕ್ಷೆ ಪುಷ್ಪಾ, ಡಿ.ಗ್ರೂಪ್ ನೌಕರರ ಸಂಘದ ಅಧ್ಯಕ್ಷ ಅಂತೋಣಿ, ವಾಹನ ಚಾಲಕರ ಸಂಘದ ಅಧ್ಯಕ್ಷ ಮೋಹನ್‌ಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.







