Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಆಡಳಿತ ಯಂತ್ರ ಸಂಪೂರ್ಣ...

ಶಿವಮೊಗ್ಗ: ಆಡಳಿತ ಯಂತ್ರ ಸಂಪೂರ್ಣ ಸ್ತಬ್ಧ

<ರಾಜ್ಯ ಸರಕಾರಿ ನೌಕರರ ಮುಷ್ಕರಕ್ಕೆ ಅಭೂತಪೂರ್ವ ಬೆಂಬಲ, ಫಲ ನೀಡದ ಎಚ್ಚ ರಿಕೆಯ ಸಂದೇಶ

ವಾರ್ತಾಭಾರತಿವಾರ್ತಾಭಾರತಿ2 Jun 2016 10:31 PM IST
share
ಶಿವಮೊಗ್ಗ: ಆಡಳಿತ ಯಂತ್ರ ಸಂಪೂರ್ಣ ಸ್ತಬ್ಧ

 ಶಿವಮೊಗ್ಗ, ಜೂ. 2: ಬಿಕೋ ಎನ್ನುತ್ತಿದ್ದ ಸರಕಾರಿ ಕಚೇರಿಗಳು, ವಿದ್ಯಾರ್ಥಿಗಳಿಲ್ಲದೆ ಬಣಗುಡುತ್ತಿದ್ದ ಶಾಲಾ-ಕಾಲೇಜುಗಳು, ಕಚೇರಿ ಬಾಗಿಲಿಗೆ ಹಾಕಿದ್ದ ಬೀಗ ಕೂಡ ತೆರೆಯದ ಸಿಬ್ಬಂದಿ, ಪರದಾಡಿದ ಸಾರ್ವಜನಿಕರು, ಬೀದಿಗಿಳಿದು ಶಕ್ತಿ ಪ್ರದರ್ಶನ ತೋರಿದ ನೌಕರರು.

ಇದು ಗುರುವಾರ ಶಿವಮೊಗ್ಗ ನಗರದಲ್ಲಿ ಕಂಡುಬಂದ ದೃಶ್ಯಾವಳಿಗಳು. ಕೇಂದ್ರ ಸರಕಾರಿ ನೌಕರರಿಗೆ ಸರಿಸಮಾನವಾಗಿ ರಾಜ್ಯ ಸರಕಾರಿ ನೌಕರರಿಗೆ ವೇತನ-ಭತ್ತೆ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ, ರಾಜ್ಯ ಸರಕಾರಿ ನೌಕರರ ಸಂಘ ಕರೆ ನೀಡಿದ್ದ ಕರ್ತವ್ಯ ಬಹಿಷ್ಕಾರಕ್ಕೆ ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಅಕ್ಷರಶಃ ಆಡಳಿತ ಯಂತ್ರ ಸ್ತಬ್ಧವಾಗಿತ್ತು.

ಶಿವಮೊಗ್ಗ ನಗರ ಮಾತ್ರವಲ್ಲದೆ ಜಿಲ್ಲೆಯ ಎಲ್ಲೆಡೆ ಸರಕಾರಿ ಕಚೇರಿಗಳು ಬಾಗಿಲು ಮುಚ್ಚಿದ್ದವು. ಬಹುತೇಕ ಸಿಬ್ಬಂದಿ ಸಂಘದ ಕರೆಗೆ ಓಗೊಟ್ಟು ಕರ್ತವ್ಯಕ್ಕೆ ಗೈರು ಹಾಜರಾಗಿದ್ದರು. ಪ್ರತಿಭಟನಾ ರ್ಯಾಲಿ ನಡೆಸಿದರು. ಬಲ ಪ್ರದರ್ಶನದ ಮೂಲಕ ರಾಜ್ಯ ಸರಕಾರದ ಗಮನ ಸೆಳೆಯುವ ಕೆಲಸ ಮಾಡಿದರು. ಪ್ರತಿಭಟನೆ ನಡೆಸಿದರೆ ಶಿಸ್ತುಕ್ರಮ ಜರಗಿಸುವ ಸರಕಾರದ ಎಚ್ಚರಿಕೆಗೆ ನೌಕರರು ಸ್ಪಂದಿಸಲಿಲ್ಲ.

ಬೆಂಬಲ: ಸರಕಾರಿ ನೌಕರರ ಸಂಘದ ಪ್ರತಿಭಟನೆಗೆ ಶಾಲಾ, ಕಾಲೇಜು ಶಿಕ್ಷಕರ ಸಂಘ, ವಾಹನ ಚಾಲಕರ ಸಂಘ, ಮಹಾನಗರ ಪಾಲಿಕೆ, ನಗರಸಭೆೆ ಸೇರಿದಂತೆ ಇತರೆ

ರಕಾರಿ ನೌಕರರಿಗೆ ಸಂಬಂಧಿಸಿದ ಸಂಘ-ಸಂಸ್ಥೆ ಬೆಂಬಲ ವ್ಯಕ್ತಪಡಿಸಿದ್ದವು ಇದರಿಂದ ನೌಕರರ ಮುಷ್ಕರ ಯಶಸ್ವಿಯಾಗಲು ಮುಖ್ಯ ಕಾರಣ ವಾಯಿತು. ಜಿಲ್ಲೆಯ ಆಡಳಿತ ಕೇಂದ್ರವಾದ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿಯು ಸಿಬ್ಬಂದಿ-ಸಾರ್ವಜನಿಕರಿಲ್ಲದೆ ಬಣಗುಡುತ್ತಿತ್ತು. ಜಿಲ್ಲಾಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಅವರ ವಿಭಾಗಕ್ಕೆ ಸಂಬಂಧಿಸಿದ ಮೂರ್ನಾಲ್ಕು ಸಿಬ್ಬಂದಿ ಹೊರತು ಪಡಿಸಿದರೆ ಕಚೇರಿಯ ಯಾವೊಬ್ಬ ಸಿಬ್ಬಂದಿಯೂ ಕರ್ತವ್ಯಕ್ಕೆ ಹಾಜರಾಗದಿದ್ದುದು ಕಂಡುಬಂದಿತು. ಉಳಿದಂತೆ ನೌಕರರು ಕಾರ್ಯನಿರ್ವಹಣೆ ಮಾಡುವ ಹಾಗೂ ಸದಾ ಜನಜಂಗುಳಿ ಯಿಂದ ತುಂಬಿ ತುಳುಕುವ ಮಹಾ ನಗರ ಪಾಲಿಕೆ ಕಚೇರಿ, ತಹಶೀಲ್ದಾರ್-ಉಪ ವಿಭಾಗಾ ಧಿಕಾರಿ, ಜಿಪಂ ಕಚೇರಿಗಳು ಜನರಿಲ್ಲದೆ ಬಣಗುಡುತ್ತಿದ್ದವು. ಮಹಾನಗರ ಪಾಲಿಕೆ ಸೇರಿದಂತೆ ಹಲವು ಸರಕಾರಿ ಕಚೇರಿಗಳಿಗೆ ಹಾಕಿದ್ದ ಬೀಗವನ್ನು ಕೂಡ ತೆರೆದಿರದಿದ್ದುದು ಕಂಡುಬಂದಿತು. ಪ್ರತಿಭಟನಾ ರ್ಯಾಲಿ:

 ಕರ್ತವ್ಯ ಬಹಿಷ್ಕರಿಸಿ ಸಂಘದ ಕಚೇರಿ ಆವರಣದಲ್ಲಿ ಜಮಾಯಿಸಿದ ಸಾವಿರಾರು ಸರಕಾರಿ ನೌಕರರು ಅಲ್ಲಿಂದ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಘೋಷಣೆ ಕೂಗಿದರು. ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ರ್ಯಾಲಿಯು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಂಪನ್ನಗೊಂಡಿತು. ಬಳಿಕ ಕಚೇರಿ ಆವರಣದಲ್ಲಿ ಸಾಂಕೇತಿಕವಾಗಿ ಧರಣಿ ಸತ್ಯಾಗ್ರಹ ನಡೆಸಿದ ಸಿಬ್ಬಂದಿ, ಜಿಲ್ಲಾಧಿಕಾರಿ ವಿ.ಪಿ. ಇಕ್ಕೇರಿಯವರ ಮೂಲಕ ರಾಜ್ಯ ಸರಕಾರಕ್ಕೆ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರ ಸಲ್ಲಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಕಚೇರಿಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ತಾಲೂಕುಗಳಲ್ಲಿಯೂ ಯಶಸ್ವಿ: ಜಿಲ್ಲೆಯ ಎಲ್ಲ ತಾಲೂಕು ಕೇಂದ್ರ ಹಾಗೂ ಪ್ರಮುಖ ಹೋಬಳಿ ಕೇಂದ್ರಗಳಲ್ಲಿಯೂ ನೌಕರರು ಕರ್ತವ್ಯ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಮಾಹಿತಿಗಳು ಬಂದಿವೆ. ಭದ್ರಾವತಿ, ಶಿಕಾರಿಪುರ, ಶಿರಾಳಕೊಪ್ಪ, ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರ, ರಿಪ್ಪನ್‌ಪೇಟೆ, ಹೊಳೆಹೊನ್ನೂರುಗಳಲ್ಲಿ ಬಹುತೇಕ ರಾಜ್ಯ ಸರಕಾರಿ ಕಚೇರಿಗಳ ಕಾರ್ಯನಿರ್ವಹಣೆ ಸ್ತಬ್ಧಗೊಮಡಿತ್ತು. ಕುಶಾಲನಗರ: ಕೇಂದ್ರ ಸರಕಾರಿ ನೌಕರರಿಗೆ ಸರಿ   ಮಾನವಾದ ವೇತನ ಮತ್ತು ಭತ್ತೆಗಳನ್ನು ರಾಜ್ಯ ಸರಕಾರಿ ನೌಕರರಿಗೂ ನೀಡಬೇಕು. ರಾಜ್ಯದಲ್ಲಿ 7 ನೆ ವೇತನ ಆಯೋಗ ವನ್ನು ರಚಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಜೂನ್ 2 ರಂದು ರಾಜ್ಯ ವ್ಯಾಪ್ತಿ ಕರೆ ನೀಡಿದ ಬಂದ್‌ಗೆ ಕುಶಾಲನಗರ ಹೋಬಳಿಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರಕಾರಿ ಫ್ರಾಥಮಿಕ ಶಾಲಾ ಶಿಕ್ಷಕರ ಸಂಘ. ಪ್ರೌಢ ಶಾಲಾ ಶಿಕ್ಷಕರ ಸಂಘ ದೈಹಿಕ ಶಿಕ್ಷಕರ ಸಂಘ, ಉಪನ್ಯಾಸಕರ ಸಂಘ ಜೊತೆಗೆ ಎಲ್ಲಾ ರಾಜ್ಯ ಸರಕಾರಿ ನೌಕರರು ಇಂದು ಒಂದು ದಿನ ರಜೆಯನ್ನು ಹಾಕಿ ಕಚೇರಿ ಹಾಗೂ ಶಾಲಾ ಕಾಲೇಜಿಗೆ ಗೈರು ಹಾಜರಾಗುವ ಮೂಲಕ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸಿದ ಸಾಂಕೇತಿಕ ಮುಷ್ಕರ ನಡೆಸಿದರು.

 ಪ್ರತಿಭಟನೆಯಲ್ಲಿ ಭಾಗವಹಿಸುವ ನೌಕರರ ವಿರುದ್ಧ 1 ವರ್ಷ ಸಜೆ 1,000 ರೂ. ದಂಡ ಸೆರಿದಂತೆ ವಾರಂಟ್ ಇಲ್ಲದೆ ಬಂದಿಸುವ ಎಚ್ಚರಿಕೆಯ ನಡುವೆಯೂ ರಾಜ್ಯಾಧ್ಯಂತ ಪಂಚಾಯತ್ ಕಚೇರಿ, ಸಬ್ ರಿಜಿಸ್ಟಾರ್ ಕಚೇರಿ, ಇಂಜಿನಿಯರಿಂಗ್ ಕಾಲೇಜು, ಸರಕಾರಿ ಶಾಲಾ ಕಾಲೇಜ್‌ಗಳಲ್ಲಿ ಕರ್ತವ್ಯ ನಿರ್ವಹಿಸದೆ, ಮುಷ್ಕರಕ್ಕೆ ಸಹಕಾರ ನೀಡಿದರೆ ಸರಕಾರಿ ಸಮುದಾಯ ಆಸ್ಪತ್ರೆಗಳಲ್ಲಿ ತುರ್ತು ಸೇವೆಗಳನ್ನು ಹೊರತು ಪಡಿಸಿ ಒಂದು ದಿನದ ಸಾಕೇತಿಕ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದಾವಣಗೆರೆ: ಕೇಂದ್ರ ಸರಕಾರಿ ನೌಕರರಿಗೆ ಸರಿ ಸಮಾನ ವೇತನ ಮತ್ತು ಭತ್ತೆಗಳನ್ನು ರಾಜ್ಯ ಸರಕಾರಿ ನೌಕರರಿಗೂ ನೀಡುವಂತೆ ಒತ್ತಾಯಿಸಿ ಗುರುವಾರ ಅಖಿಲ ಕರ್ನಾಟಕ ರಾಜ್ಯ ಸರಕಾರಿ ನೌಕರರ ಒಕ್ಕೂಟದ ನೇತೃತ್ವದಲ್ಲಿ ಕರೆ ನೀಡಿದ್ದ ಮುಷ್ಕರಕ್ಕೆ ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಮುಷ್ಕರದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 40ಕ್ಕೂ ಹೆಚ್ಚು ಇಲಾ ಖೆಗಳ ಸಾವಿರಾರು ನೌಕರರು ತಮ್ಮ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಮುಷ್ಕರದಲ್ಲಿ ಪಾಲ್ಗೊಂಡು ಕೇಂದ್ರ ಮತ್ತು ರಾಜ್ಯ ಸರಕಾರಿ ನೌಕರರ ಮಧ್ಯೆ ಇರುವ ವೇತನ ತಾರತಮ್ಯವನ್ನು ಖಂಡಿಸಿ, ಸಮಾನ ಕೆಲಸಕ್ಕೆ ಕೇಂದ್ರ ಸರಕಾರಿ ನೌಕರರ ಮಾದರಿಯಲ್ಲಿ ಸಮಾನ ವೇತನ ಕಲ್ಪಿಸಬೇಕೆಂದು ಆಗ್ರಹಿಸಿದರು. ನಗರದ ಪ್ರೌಢ ಶಾಲಾ ಮೈದಾನದಲ್ಲಿ ಜಮಾಯಿಸಿದ ನೌಕರರು, ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಎಸಿ ಕಚೇರಿಗೆ ತೆರಳಿ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ನೌಕರರ ಹೋರಾಟ.. ನಾಗರಿಕರ ಪರದಾಟ..

ರಾ

ಜ್ಯ ಸರಕಾರ ಹಾಗೂ ನೌಕರರ ನಡುವಿನ ಭಿನ್ನಾಭಿಪ್ರಾಯದಿಂದ ನಾಗರಿಕರು ಪರದಾಡುತ್ತಾ ತಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸುವಂತಾಯಿತು. ನಾನಾ ಕೆಲಸ ಕಾರ್ಯಗಳ ನಿಮಿತ್ತ ಸರಕಾರಿ ಕಚೇರಿಗಳಿಗೆ ಆಗಮಿಸಿದ್ದ ನಾಗರಿಕರು ಬೇಸರದಿಂದ ಹಿಂದಿರುಗುತ್ತಿದ್ದುದು ಕಂಡು ಬಂದಿತು. ಜಿಲ್ಲಾಡಳಿತ, ತಹಶೀಲ್ದಾರ್ ಕಚೇರಿ, ಮಹಾನಗರ ಪಾಲಿಕೆ ಸೇರಿದಂತೆ ಇತರ ರಾಜ್ಯ ಸರಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಹಾಗೂ ಸಿಬ್ಬಂದಿ ಗೈರು ಹಾಜರಾಗುವ ಮೂಲಕ ಮುಷ್ಕರದಲ್ಲಿ ಪಾಲ್ಗೊಂಡಿದ್ದರ ಪರಿಣಾಮ, ಮುಷ್ಕರ ಬಗ್ಗೆ ಮಾಹಿತಿ ಇಲ್ಲದೆ, ಸರಕಾರಿ ಕಚೇರಿಗಳಿಗೆ ತಮ್ಮ ಕೆಲಸ, ಕಾರ್ಯಗಳ ನಿಮಿತ್ತ ಬಂದಿದ್ದ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು

ಎಂದಿನಂತೆ ತುರ್ತು ಸೇವೆ ಆರೋಗ್ಯ ಇಲಾಖೆಯ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿಲ್ಲ. ಹೀಗಾಗಿ ತುರ್ತು ಸೇವೆಗಳಲ್ಲಿ ಯಾವುದೇ ವ್ಯತಾಯವಾಗಲಿಲ್ಲ. ಅಲ್ಲದೆ, ಕೆಸ್ಸಾರ್ಟಿಸಿ ನೌಕರರು ಹಾಗೂ ಸಿಬ್ಬಂದಿ ಮುಷ್ಕರದಿಂದ ದೂರ ಉಳಿದ ಕಾರಣ ಎಂದಿನಂತೆ ಬಸ್‌ಗಳು ರಸ್ತೆಗೆ ಇಳಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X