ಆ.15ರಂದು ದ.ಕ. ಬಾಲಕಾರ್ಮಿಕ ಮುಕ್ತ ಜಿಲ್ಲೆಯಾಗಿ ಘೋಷಣೆ: ಎ.ಬಿ.ಇಬ್ರಾಹೀಂ
ಮಂಗಳೂರು, ಜೂ.3: ರಾಜ್ಯದಲ್ಲೇ ಪ್ರಥಮ ಬಾರಿಗೆ ದ.ಕ.ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಲು ಜಿಲ್ಲೆಯ ಎಲ್ಲಾ ಇಲಾಖೆಗಳು ಕೈಜೋಡಿಸಿದಲ್ಲಿ ಇದೇ ಆಗಸ್ಟ್ 15ರಂದು ಜಿಲ್ಲೆಯನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ತಿಳಿಸಿದ್ದಾರೆ.
ಅವರು ಇಂದು ತಮ್ಮ ಕಚೇರಿಯಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಆಚರಿಸುವ ಕುರಿತ ಪೂರ್ವಭಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಜೂನ್ 12ರಂದು ಬಾಲಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಜಾಥಾ ಏರ್ಪಡಿಸುವಾಗ ಶಾಲಾ ಮಕ್ಕಳನ್ನು ಬಳಸಿಕೊಳ್ಳದೆ ಜಿಲ್ಲೆಯಲ್ಲಿರುವ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಸಕ್ರಿಯವಾಗಿ ಭಾಗವಹಿಸುವಂತೆ ಮನವೊಲಿಸಬೇಕೆಂದು ಜಿಲ್ಲಾಧಿಕಾರಿ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಸಹಾಯಕ ಕಾರ್ಮಿಕ ಆಯುಕ್ತ ನಾಗೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.
Next Story