ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ

ಮಂಗಳೂರು, ಜೂ. 3: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6ನೆ ತರಗತಿಗೆ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 10 ಆಗಿದೆ. ಶಾರದಾ ಗಣಪತಿ ವಿದ್ಯಾಕೇಂದ್ರ, ಪದವಿ ಪೂರ್ವ ಕಾಲೇಜು, ಪುಣ್ಯಕೋಟಿ ನಗರ, ಕೈರಂಗಳ ಅಂಚೆ, ಬಂಟ್ವಾಳ, ಬಾಲವಿಕಾಸ, ಆಂಗ್ಲ ಮಾಧ್ಯಮ ಶಾಲೆ, ಮಾಣಿ, ಬಂಟ್ವಾಳ, ವಿಟ್ಲ ಜೆಸಿ ಆಂಗ್ಲ ಮಾಧ್ಯಮ ಶಾಲೆ, ಬಸವನ ಗುಡಿ, ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ, ವಿದ್ಯಾಗಿರಿ, ಬಂಟ್ವಾಳ ಶಾರದಾ ವಿದ್ಯಾಲಯ, ಕೊಡಿಯಾಲ್‌ಬೈಲ್, ಮಂಗಳೂರು.
ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಆಯಾ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಇಲ್ಲಿಗೆ ಸಲ್ಲಿಸತಕ್ಕದು. ನಿಗದಿಪಡಿಸಿದ ಅರ್ಜಿಗಳನ್ನು ಕಚೇರಿ ವೇಳೆಯಲ್ಲಿ ಆಯಾ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಇಲ್ಲಿಂದ ಪಡೆಯಬಹುದಾಗಿದೆ. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯವರು ಅರ್ಜಿಗಳನ್ನು ಪರಿಶೀಲನೆ ಮಾಡಿದ ಬಳಿಕ ಯೋಜನಾ ಸಮನ್ವಯಾಧಿಕಾರಿ, ಐ.ಟಿ.ಡಿ.ಪಿ. ಕಚೇರಿ, ಅಶೋಕನಗರ ಅಂಚೆ, ಮಂಗಳೂರು-575006 ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗಾಗಿ ಯೋಜನಾ ಸಮನ್ವಯಾಧಿಕಾರಿ, ಐ.ಟಿ.ಡಿ.ಪಿ. ಕಚೇರಿ, ಅಶೋಕನಗರ ಅಂಚೆ, ಮಂಗಳೂರು-575006 ದೂರವಾಣಿ ಸಂಖ್ಯೆ; 0824-2451269 ಸಂಪರ್ಕಿಸಲು ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಇವರ ಪ್ರಕಟನೆ ತಿಳಿಸಿದೆ.







