Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೊಲೀಸರ ಮುಷ್ಕರ: ಶಿವಮೊಗ್ಗ ...

ಪೊಲೀಸರ ಮುಷ್ಕರ: ಶಿವಮೊಗ್ಗ ಜಿಲ್ಲೆಯಲ್ಲಿ ಏನಾಗಲಿದೆ?

ಸಾರ್ವಜನಿಕ ವಲಯದಲ್ಲಿ ಮನೆ ಮಾಡಿದೆ ಭಾರೀ ಕುತೂಹಲ

ವಾರ್ತಾಭಾರತಿವಾರ್ತಾಭಾರತಿ3 Jun 2016 10:17 PM IST
share

ಶಿವಮೊಗ್ಗ, ಜೂ. 3: ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿ ಸಾಮೂಹಿಕ ರಜೆ ಹಾಕುವ ಮೂಲಕ ಪರೋಕ್ಷ ಪ್ರತಿಭಟನೆ ನಡೆಸಲಿದ್ದಾರಾ, ಇಲ್ಲವೇ ಎಂದಿನಂತೆ ಕರ್ತ ವ್ಯಕ್ಕೆ ಹಾಜರಾಗಲಿದ್ದಾರಾ, ಪೊಲೀಸರ ಮುಷ್ಕರ ಬೆಂಬಲಿಸಿ ಪ್ರತಿಭಟ ನೆಗಿಳಿಯುವ ಸಂಘಟ ನೆಗಳ್ಯಾವುವು, ಒಂದು ವೇಳೆ ಪೊಲೀಸ್ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದಿದ್ದರೆ ಯಾವ ಸ್ಥಿತಿ ನಿರ್ಮಾಣವಾಗಲಿದೆ.

ಇದು, ನಾಗರಿಕ ವಲಯದಲ್ಲಿ ಮೂಡಿರುವ ಕುತೂಹಲಭರಿತ ಪ್ರಶ್ನೆಗಳು. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೂ. 4ರಂದು ರಾಜ್ಯಾದ್ಯಂತ ಪೊಲೀಸ್ ಸಿಬ್ಬಂದಿ ಸಾಮೂಹಿಕ ರಜೆ ಹಾಕುವ ಅಥವಾ ಕರ್ತವ್ಯ ಬಹಿಷ್ಕರಿಸಿ ನಡೆಸಲು ಉದ್ದೇಶಿಸಿರುವ ಮುಷ್ಕರ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಜಿಲ್ಲೆಯಾದ್ಯಂತ ಪೊಲೀಸರ ಮುಷ್ಕರದ ಬಗ್ಗೆ ಬಿಸಿ, ಬಿಸಿ ಚರ್ಚೆಯಾಗುತ್ತಿದೆ. ಶನಿವಾರ ಏನಾಗಲಿದೆ ಎಂಬುವುದರತ್ತ ಚಿತ್ತ ನೆಟ್ಟಿದ್ದು, ಜಿಲ್ಲೆಯಲ್ಲಿ ಮುಷ್ಕರ ಯಶಸ್ವಿಯಾಗಲಿದೆಯಾ ಇಲ್ಲವೇ ಎಂಬುವುದು ಕುತೂಹಲ ಕೆರಳುವಂತೆ ಮಾಡಿದೆ.

ಯೂ ಟರ್ನ್: ಕಳೆದ ಕೆಲ ದಿನಗಳ ಹಿಂದೆ ಜಿಲ್ಲೆಯ ಸಿವಿಲ್, ಡಿಎಆರ್‌ನ ಹಲವು ಪೊಲೀಸ್ ಸಿಬ್ಬಂದಿ ಜೂ. 4ರಂದು ಸಾಮೂಹಿಕ ರಜೆ ಕೋರಿ ಮನವಿ ಸಲ್ಲಿಸುವ ಅಥವಾ ಗೈರು ಹಾಜರಾಗುವ ನಿರ್ಧಾರ ಮಾಡಿದ್ದರು. ಈ ನಿಟ್ಟಿನಲ್ಲಿ ಈಗಾಗಲೇ ಕೆಲ ಪೊಲೀಸ್ ಸಿಬ್ಬಂದಿ ತಂಡ, ತಂಡವಾಗಿ ತಮ್ಮ ಮೇಲಧಿಕಾರಿಗಳಿಗೆ ರಜೆ ಕೋರಿ ಮನವಿ ಪತ್ರ ಕೂಡ ಸಲ್ಲಿಸಿದ್ದಾರೆ. ಮತ್ತೊಂದೆಡೆ ಹಿರಿಯ ಪೊಲೀಸ್ ಅಧಿಕಾರಿಗಳು ಜೂ. 4ರಂದು ಉದ್ದೇಶಪೂರ್ವಕವಾಗಿ ರಜೆ ಹಾಕುವ ಅಥವಾ ಪ್ರತಿಭಟನೆ ನಡೆಸುವ ಪೊಲೀಸ್ ಸಿಬ್ಬಂದಿಯ ವಿರುದ್ಧ ಕಾನೂನು ರೀತಿಯ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರಗಿಸುವ ಕಟ್ಟುನಿಟ್ಟಿನ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಈಗಾಗಲೇ ಪ್ರತ್ಯೇಕವಾಗಿ ಪೊಲೀಸ್ ಸಿಬ್ಬಂದಿಯ ಸಭೆ ನಡೆಸಿ ಮುಷ್ಕರ ನಡೆಸದಂತೆ ತಾಕೀತು ಕೂಡ ಮಾಡಲಾಗಿದೆ. ಮೆಮೋ ಕೂಡ ಹೊರಡಿಸಿದೆ. ಹಿರಿಯ ಅಧಿಕಾರಿಗಳ ಬಿಗಿ ನಿಲುವು, ಕಾನೂನು ಕ್ರಮದ ಎಚ್ಚರಿಕೆಯಿಂದ ಹಲವು ಪೊಲೀಸರು ’ಯೂ ಟರ್ನ್’ ತೆಗೆದುಕೊಂಡಿದ್ದು ತಾವು ಕೊಟ್ಟಿದ್ದ ರಜೆ ಮನವಿ ವಾಪಸ್ ಪಡೆದುಕೊಳ್ಳಲು ಮುಂದಾಗಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ. ಮತ್ತೆ ಕೆಲ ಪೊಲೀಸರು ಗೊಂದಲಕ್ಕೆ ಸಿಲುಕಿ ದ್ದು, ಯಾವ ನಿರ್ಧಾರ ಕೈಗೊಳ್ಳಬೇಕು. ಎಂಬುವುದು ತಿಳಿಯದೆ ಪರಿತಪಿಸುತ್ತಿದ್ದಾರೆ. ಇತರೆ ಕೆಲ ಪೊಲೀಸರು ಮಾತ್ರ ಮುಷ್ಕರದ ಉಸಾಬರಿಯೇ ತಮಗೆ ಬೇಡ ಎಂದು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಗೋಳು ಕೇಳುವವರ್ಯಾರು ಇಲ್ಲವಾಗಿದ್ದಾರೆ. ಹಲವು ವರ್ಷಗಳಿಂದ ಸಮಸ್ಯೆ ಪರಿಹರಿಸಿ ಎಂದು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಮುಷ್ಕರ ಮಾಡುತ್ತೇವೆ ಎಂದ ಕೂಡಲೇ ಕಾನೂನಿಗೆ ವಿರುದ್ಧ ಎಂದು ಬೆದರಿಸಲಾಗಿದೆ.

ಹಿರಿಯ ಅಧಿಕಾರಿಗಳು ಒತ್ತಡ ಹಾಕುತ್ತಿದ್ದ ಶಿಸ್ತುಕ್ರಮ ಜರಗಿಸುವ ಎಚ್ಚರಿಕೆ ನೀಡುತ್ತಿದ್ದಾರೆ. ನಿಜಕ್ಕೂ ಇದು ಅಮಾನವೀಯವಾಗಿದೆ. ಏನೂ ಮಾಡಲು ಆಗದ ಸ್ಥಿತಿಯಲ್ಲಿದ್ದೇವೆ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ಪೊಲೀಸ್ ಸಿಬ್ಬಂದಿಯೋರ್ವರು ಅಸಮಾಧಾನ ವ್ಯಕ್ತಪಡಿಸುತ್ತಾರೆ.

ಅಧಿಕಾರಿಗಳ ಅಂತಿಮ ಕಸರತ್ತು..

.: ಪೊಲೀಸ್ ಸಿಬ್ಬಂದಿಯ ಮನವೊಲಿಕೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ನಡೆಸು ತ್ತಿರುವ ಕಸರತ್ತು ಮುಂದುವರಿದಿದೆ. ಜೂ. 4ರಂದು ಸಿಬ್ಬಂದಿ ಕರ್ತವ್ಯಕ್ಕೆ ಗೈರು ಹಾಜರಾಗದಂತೆ ನೋಡಿಕೊಳ್ಳಲು ಇನ್ನಿಲ್ಲದ ಕಾರ್ಯತಂತ್ರ ನಡೆಸುತ್ತಿದ್ದಾರೆ. ಸಿಬ್ಬಂದಿಯ ಮನವೊಲಿಸುವುದರ ಜೊತೆಗೆ, ಕರ್ತವ್ಯಕ್ಕೆ ಗೈರು ಹಾಜರಾದರೆ ಶಿಸ್ತುಕ್ರಮ ಜರಗಿಸುವ ಎಚ್ಚರಿಕೆಯನ್ನು ಕೂಡ ರವಾನಿಸುತ್ತಿದ್ದಾರೆ. ಠಾಣಾಧಿಕಾರಿಗಳು ತಮ್ಮ ಕೆಳ ಹಂತದ ಪ್ರತಿಯೋರ್ವ ಸಿಬ್ಬಂದಿಯ ಅಭಿಪ್ರಾಯ ಆಲಿಸುತ್ತಿದ್ದಾರೆ. ಯಾರ್ಯಾರು ಕರ್ತವ್ಯಕ್ಕೆ ಗೈರು ಹಾಜರಾಗಬಹುದು ಎಂಬ ಮಾಹಿತಿ ಸಂಗ್ರಹಿಸುವ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಈ ಸಿಬ್ಬಂದಿಯ ಚಲನವಲನಗಳ ಮೇಲೆಯೂ ಸದ್ದಿಲ್ಲದೆ ಕಣ್ಣಿಡಲಾಗಿದೆ ಎಂಬ ಮಾಹಿತಿ ಹರಿದಾಡುತ್ತಿದ್ದು, ಇದು ಪೊಲೀಸ್ ಸಿಬ್ಬಂದಿಯ ನಿದ್ದೆಗೆಡುವಂತೆ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X