Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಕಿಸ್ತಾನದೊಂದಿಗೆ ಅವಕಾಶದ ಕಿಂಡಿ...

ಪಾಕಿಸ್ತಾನದೊಂದಿಗೆ ಅವಕಾಶದ ಕಿಂಡಿ ಮುಚ್ಚುತ್ತಿದೆ: ಪಾರಿಕ್ಕರ್

ವಾರ್ತಾಭಾರತಿವಾರ್ತಾಭಾರತಿ4 Jun 2016 10:30 PM IST
share
ಪಾಕಿಸ್ತಾನದೊಂದಿಗೆ ಅವಕಾಶದ ಕಿಂಡಿ ಮುಚ್ಚುತ್ತಿದೆ: ಪಾರಿಕ್ಕರ್

ಹೊಸದಿಲ್ಲಿ, ಜೂ.4: ಪ್ರಧಾನಿ ನರೇಂದ್ರ ಮೋದಿ, ಪಾಕಿಸ್ತಾನದೊಂದಿಗೆ ಸೌಹಾರ್ದ ಹಾಗೂ ಮಾತುಕತೆಯ ಕಿಟಕಿಯನ್ನು ತೆರೆದಿದ್ದರು. ಆದರೆ, ಭಯೋತ್ಪಾದನೆಯನ್ನು ನಿಗ್ರಹಿಸುವ ಪಾಕಿಸ್ತಾನದ ಪ್ರಾಮಾಣಿಕತೆಯ ಬಗ್ಗೆ ಸಂಶಯ ಉಳಿದುದರಿಂದ ಅದೀಗ ಮುಚ್ಚುತ್ತಿದೆಯೆಂದು ರಕ್ಷಣಾ ಸಚಿವ ಮನೋಹರ ಪಾರಿಕ್ಕರ್ ಹೇಳಿದ್ದಾರೆ.

ಪ್ರಧಾನಿ ಮೋದಿ, ಪಾಕಿಸ್ತಾನದ ಪ್ರಧಾನಿ ಯನ್ನು ಭೇಟಿಯಾಗಿದ್ದ ವೇಳೆ ಅವಕಾಶದ ಕಿಂಡಿಯನ್ನು ತೆರೆದಿದ್ದರು. ಅದೀಗ ನಿಧಾನವಾಗಿ ಮುಚ್ಚು ತ್ತಿದೆಯೆಂಬುದು ತನ್ನ ಭಾವನೆಯಾಗಿದೆ. ಕಿಂಡಿ ಮುಚ್ಚಿ ಕೊಳ್ಳುವ ಮೊದಲು, ಪಾಕಿಸ್ತಾನವು ಭಯೋತ್ಪಾದನೆ ನಿಗ್ರಹದ ಕುರಿತಾದ ತನ್ನ ಪ್ರಾಮಾಣಿಕತೆಯ ಬಗ್ಗೆ ಭಾರತಕ್ಕೆ ವಿಶ್ವಾಸವನ್ನು ಮೂಡಿಸುವ ಅಗತ್ಯವಿದೆಯೆಂದು ಅವರು ಸ್ಪಷ್ಟಪಡಿಸಿದ್ದಾರೆ.
ಪಾಕಿಸ್ತಾನವು ಭಯೋತ್ಪಾದಕರನ್ನು ಒಳ್ಳೆಯವರು ಹಾಗೂ ಕೆಟ್ಟವರೆಂದು ವಿಭಾಗಿಸುತ್ತದೆ. ಅದು ಕೆಟ್ಟ ಭಯೋತ್ಪಾದಕರ ಬೆನ್ನಿಗೆ ಬಿದ್ದಿದೆ. ಒಳ್ಳೆಯ ಭಯೋತ್ಪಾದಕರಿಗೆ ಅಫ್ಘಾನಿಸ್ತಾನ ಹಾಗೂ ಭಾರತದಲ್ಲಿ ಕಾರ್ಯಾಚರಿಸಲು ಉತ್ತೇಜನ ನೀಡುತ್ತಿದೆ. ಅದನ್ನು ರಾಜತಾಂತ್ರಿಕ ನೆಲೆಯಲ್ಲೇ ನಿಭಾಯಿಸಬೇಕೆಂಬುದು ತನ್ನ ಭಾವನೆಯಾಗಿದೆಯೆಂದು ಪಾರಿಕ್ಕರ್ ತಿಳಿಸಿದ್ದಾರೆ.
ಸಿಂಗಾಪುರದಲ್ಲಿ ನಡೆದ, ಅಂತಃಸರಕಾರಗಳ ಭದ್ರತಾ ವೇದಿಕೆಯಾಗಿರುವ ಶಾಂಗ್ರಿ-ಲಾ ಮಾತುಕತೆಯಲ್ಲಿ ಅವರು ಈ ರೀತಿ ಹೇಳಿದ್ದಾರೆ.
ಪಾಕಿಸ್ತಾನದ ಪ್ರಧಾನಿಯ ಹೃದಯ ಶಸ್ತ್ರ ಚಿಕಿತ್ಸೆಯ ಮುನ್ನ ಪ್ರಧಾನಿ ಮೋದಿ, ನವಾಝ್ ಶರೀಫ್‌ರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದರು. ಅದರ ಹೊರತಾಗಿಯೂ, ಜನವರಿಯಲ್ಲಿ ನಡೆದ ಪಠಾಣ್‌ಕೋಟ್ ಭಯೋತ್ಪಾದಕ ದಾಳಿಯ ತನಿಖೆಯ ಸಂಬಂಧ, ಇತ್ತೀಚಿನ ವಾರಗಳಲ್ಲಿ ಭಾರತ-ಪಾಕಿಸ್ತಾನಗಳ ನಡುವಿನ ಸಂಬಂಧ ಹಳಸಿದೆ.
ಪಂಜಾಬ್‌ನ ಬಿಗು ಭದ್ರತೆಯ ವಾಯು ನೆಲೆಗೆ ಪಾಕಿಸ್ತಾನದ ತನಿಖೆದಾರರ ತಂಡವೊಂದರ ಭೇಟಿಯ ಬಳಿಕ, ಪಾಕಿಸ್ತಾನಕ್ಕೆ ಎನ್‌ಐವಿಯ ತಂಡದ ಭೇಟಿಯ ಕುರಿತು ಭಾರತದ ಮನವಿಗೆ ಅದು ಇನ್ನೂ ಪ್ರತಿಕ್ರಿಯಿಸಿಲ್ಲ.
ಪಠಾಣ್‌ಕೋಟ್ ವಾಯು ನೆಲೆಗೆ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನಿಯರ ಪಾತ್ರವು ‘ಅಂಗೀಕೃತ ಸಂಗತಿಯಾಗಿದೆ’ ಎಂದು ವಿದೇಶಾಂಗ ಸಚಿವಾಲಯ ನಿನ್ನೆ ಹೇಳಿತ್ತು. ಇದೇ ವೇಳೆ, ಭಯೋತ್ಪಾದಕರಿಗೆ ಸಹಕಾರ ನೀಡುವಲ್ಲಿ ಪಾಕಿಸ್ತಾನದ ಪಾತ್ರವಿಲ್ಲವೆಂದು ತಾನು ಹೇಳಿದ್ದೇನೆಂಬ ವರದಿಯನ್ನು ಎನ್‌ಐಎ ತಳ್ಳಿ ಹಾಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X