Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೊಲೀಸ್ ಮುಷ್ಕರ: ಕರಾವಳಿಯಲ್ಲಿ ಶೂನ್ಯ...

ಪೊಲೀಸ್ ಮುಷ್ಕರ: ಕರಾವಳಿಯಲ್ಲಿ ಶೂನ್ಯ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ4 Jun 2016 11:44 PM IST
share
ಪೊಲೀಸ್ ಮುಷ್ಕರ: ಕರಾವಳಿಯಲ್ಲಿ ಶೂನ್ಯ ಪ್ರತಿಕ್ರಿಯೆ

ಉಡುಪಿ, ಜೂ.4: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪೊಲೀಸ್ ಸಿಬ್ಬಂದಿ ಇಂದು ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಸಾಮೂಹಿಕ ರಜೆಯಲ್ಲಿ ಉಡುಪಿ ಜಿಲ್ಲೆಯ ಪೊಲೀಸರು ಪಾಲ್ಗೊಳ್ಳದೆ ಶೇ.100 ಮಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಈ ಸಂಬಂಧ ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳು ಪೊಲೀಸರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಉಡುಪಿ ಅಜ್ಜರಕಾಡಿನ ಹುತಾತ್ಮರ ಸಾರ್ಮಕ ಎದುರು ಧರಣಿ ನಡೆಸಿ ದವು. ಬಳಿಕ ಮಣಿಪಾಲದಲ್ಲಿರುವ ಜಿಲ್ಲಾಕಾರಿ ಕಚೇರಿಗೆ ತೆರಳಿ ಈ ಕುರಿತ ಮನವಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಲಾಯಿತು.

ಕೇಂದ್ರ ಹಾಗೂ ನೆರೆಯ ರಾಜ್ಯಗಳಲ್ಲಿರುವಂತೆ ಪೊಲೀಸ್ ಸಿಬ್ಬಂದಿಯ ವೇತನ ಜಾರಿ ಮಾಡಬೇಕು. ಸಿಬ್ಬಂದಿ ನೇಮಕಾತಿ, ಪಿಎಸ್ಸೆ ಹಾಗೂ ಆರ್‌ಎಸ್ಸೆ ಹುದ್ದೆಗಳು ಶೇ.50ರಷ್ಟು ಸೇವಾನಿರತರಿಗೆ ಮೀಸಲಿರಬೇಕು. ಆರೋಗ್ಯ ಭಾಗ್ಯ ಯೋಜನೆ ಹೊರ ರೋಗಿಗಳಿಗೂ ಅನ್ವಯ ಆಗಬೇಕು. ವಾರದ ರಜೆಯ ದಿನದ ಕರ್ತವ್ಯಕ್ಕೆ ಒಂದು ದಿನದ ಸಂಬಳ ನೀಡಬೇಕು. ಪ್ರಯಾಣ ಭತ್ತೆಯನ್ನು ಹೆಚ್ಚಿಸಬೇಕು. ಪೊಲೀಸರ ವಸತಿಗಳನ್ನು ದುರಸ್ತಿ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ನಾಗರಿಕ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು, ಉಡುಪಿ ಜಿಲ್ಲಾ ನಿವೃತ್ತ ಪೊಲೀಸರ ಸಂಘದ ಸಂದೀಪ್ ಕುಮಾರ್, ಗೌರಿ ಶಂಕರ್, ನಾಗೇಶ್ ಮೇಸ್ತ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಸಂತೋಷ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅನ್ಸಾರ್ ಅಹ್ಮದ್, ಕೆ.ರಮೇಶ್ ಶೆಟ್ಟಿ, ಶ್ರೀಕಾಂತ್ ಶೆಟ್ಟಿ, ಶಿವಾನಂದ, ಮಹೇಶ್, ಕಾರ್ಮಿಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ರವಿ ಶೆಟ್ಟಿ, ವೀರಣ್ಣ, ಶ್ಯಾಮಲಾ ಸುಧಾಕರ್, ಸಿಐಟಿಯು ಮುಖಂಡ ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸುಳ್ಯ, ಬೆಳ್ತಂಗಡಿ: ಕರ್ತವ್ಯಕ್ಕೆ ಹಾಜರಾದ ಪೊಲೀಸರು

ಸುಳ್ಯ, ಜೂ.4: ರಾಜ್ಯ ಪೊಲೀಸ್ ಮಹಾಸಂಘ ಕರೆ ನೀಡಿದ್ದ ಪೊಲೀಸ್ ಮುಷ್ಕರಕ್ಕೆ ಸುಳ್ಯದಲ್ಲಿ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಾ.ಭೂಷಣ ಗುಲಾಬ್‌ರಾವ್ ಬೊರಸೆ ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಮನವಿ ಮಾಡಿದ್ದು, ಸುಳ್ಯ ವೃತ್ತದ ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದ್ದರು.

ಬೆಳ್ತಂಗಡಿ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಪೊಲೀಸ್ ಸಿಬ್ಬಂದಿಯ ಸಾಮೂಹಿಕ ಮುಷ್ಕರ ಬೆಳ್ತಂಗಡಿಯಲ್ಲಿ ಯಶಸ್ವಿಯಾಗಿಲ್ಲ. ಬೆಳ್ತಂಗಡಿ, ವೇಣೂರು, ಧರ್ಮಸ್ಥಳ ಹಾಗೂ ಪೂಂಜಾಲಕಟ್ಟೆ ಠಾಣೆಗಳ ಸಿಬ್ಬಂದಿ ಸಾಮೂಹಿಕವಾಗಿ ರಜೆಗಾಗಿ ಮನವಿ ಸಲ್ಲಿಸಿದ್ದರು. ಆದರೆ ಸರಕಾರ ನೀಡಿದ ಆಶ್ವಾಸನೆಯ ಮೇರೆಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಬೆಳ್ತಂಗಡಿ ಪೋಲಿಸ್ ಅಕಾರಿಗಳು ತಿಳಿಸಿದ್ದಾರೆ.


ಬೇಡಿಕೆಗಳ ಈಡೇರಿಕೆಗೆ ಪೊಲೀಸ್ ಕುಟುಂಬಗಳ ಒತ್ತಾಯ

ಮಂಗಳೂರು, ಜೂ.4: ಸಾಮೂಹಿಕ ರಜೆಯ ಮೂಲಕ ಪೊಲೀಸರು ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಶಸ್ವಿಯಾಗಿಲ್ಲ. ಇಲಾಖೆಯ ಎಲ್ಲಾ ಶ್ರೇಣಿಯ ಅಕಾರಿಗಳು ಮತ್ತು ಸಿಬ್ಬಂದಿ ಮುಷ್ಕರವನ್ನು ಕೈ ಬಿಟ್ಟು ಇಂದು ಕರ್ತವ್ಯಕ್ಕೆ ಹಾಜರಾದರು.

ಹಿರಿಯ ಅಕಾರಿಗಳು ಪ್ರತಿಭಟನೆ ಕೈ ಬಿಡುವಂತೆ ಪೊಲೀಸರ ಮನವೊಲಿಸಿದ್ದು, ಇದಕ್ಕೆ ಸ್ಪಂದಿಸಿದ ಜಿಲ್ಲೆಯ ಪೊಲೀಸರು ಮುಷ್ಕರದ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಪ್ರತಿಭಟನೆ ನಡೆಸಿದರೆ ಕರ್ತವ್ಯದಿಂದ ವಜಾಗೊಳಿಸುವುದಾಗಿ ಹಾಗೂ ಆಯಾ ಠಾಣೆಯ ಅಕಾರಿಗಳನ್ನು ಹೊಣೆ ಮಾಡು ವುದಾಗಿ ಸರಕಾರ ನೀಡಿದ ಎಚ್ಚರಿಕೆಯ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ಇದೇ ವೇಳೆ ಪೊಲೀಸರ ಬಹುತೇಕ ಬೇಡಿಕೆಗಳ ಈಡೇರಿಕೆಯ ಭರವಸೆಯೂ ದೊರೆತಿದೆ.
ಮಂಗಳೂರಿನ ಪೊಲೀಸ್ ಲೇನ್‌ನಲ್ಲಿರುವ ಶ್ರೀ ಮುನೀಶ್ವರ ಮಹಾಗಣಪತಿ ದೇವಸ್ಥಾನ ಸಮೀಪದ ಸಭಾಂಗಣದಲ್ಲಿ ಮಂಗಳೂರು ನಗರ ಮತ್ತು ಜಿಲ್ಲೆಯ ಪೊಲೀಸರ ಕುಟುಂಬಸ್ಥರು ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನು ಒತ್ತಾಯಿಸಿದರು. ಆದರೆ ಯಾವುದೇ ಘೋಷಣೆ ಕೂಗಲಿಲ್ಲ.

ಸ್ಥಳಕ್ಕೆ ದ.ಕ. ಜಿಲ್ಲಾಕಾರಿ ಎ.ಬಿ. ಇಬ್ರಾಹೀಂ, ಮಂಗಳೂರು ಪೊಲೀಸ್ ಆಯುಕ್ತ ಎಂ. ಚಂದ್ರಶೇಖರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಭೂಷಣ್ ಗುಲಾಬ್‌ರಾವ್ ಬೊರಸೆ, ಡಿಸಿಪಿ ಕೆ.ಎಂ. ಶಾಂತರಾಜು ಭೇಟಿ ನೀಡಿ ಮನವಿ ಯನ್ನು ಸ್ವೀಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X