ಸುಳ್ಯ: ಸಿಡಿಲು ಬಡಿದು ಮನೆಗೆ ಹಾನಿ

ಸುಳ್ಯ, ಜೂ. 5: ಪಂಜದ ಪೊಳೆಂಜ ನೆಕ್ಕಿಲ ಎಂಬಲ್ಲಿ ಸಿಡಿಲು ಬಡಿದು ಮನೆಗೆ ಹಾನಿಯಾದ ಘಟನೆ ನಡೆದಿದೆ.
ನೆಕ್ಕಿಲ ಬಶೀರ್ ಮಧನಿ ಎಂಬವರ ಮನೆಗೆ ಸಿಡಿಲು ಅಪ್ಪಳಿಸಿದ್ದು, ಮನೆಯ ವಿದ್ಯುತ್ ವಯರಿಂಗ್‌ಗೆ ಸಂಪೂರ್ಣ ಹಾನಿಯಾಗಿದೆ. ಮನೆಯ ಗೋಡೆಯಲ್ಲಿ ಬಿರುಕು ಕಂಡುಬಂದಿದ್ದು ಅಪಾರ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ.
Next Story





