ಪಾಕ್‌ನಿಂದ 18 ಭಾರತೀಯ ಮೀನುಗಾರರ ಬಿಡುಗಡೆ
ಕರಾಚಿ,ಜೂ.5: ಸದ್ಭಾವನೆಯ ಕ್ರಮವಾಗಿ ಪಾಕಿಸ್ತಾನವು ರವಿವಾರ 18 ಮಂದಿ ಭಾರತೀಯ ಮೀನುಗಾರರನ್ನು ಬಿಡುಗಡೆಗೊಳಿಸಿದೆ. ಪಾಕಿಸ್ತಾನಕ್ಕೆ ಸೇರಿದ ಸಮುದ್ರದ ಗಡಿಯನ್ನು ಉಲ್ಲಂಘಿಸಿ ಮೀನುಗಾರಿಕೆ ನಡೆಸಿದ ಆರೋಪದಲ್ಲಿ ಇವರನ್ನು ಬಂಧಿಸಲಾಗಿತ್ತು. ಬಂಧಿತ ಮೀನುಗಾರರನ್ನು ಕರಾಚಿಯ ಮಾಲಿರ್ ಜೈಲಿನಿಂದ ಬಿಡುಗಡೆಗೊಳಿಸಲಾಗಿದ್ದು, ಅವರು ರೈಲಿನ ಮೂಲಕ ಲಾಹೋರ್‌ಗೆ ಪ್ರಯಾಣಿಸಲಿದ್ದಾರೆ. ವಾಘಾ ಗಡಿಯಲ್ಲಿ ಅವರನ್ನು ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗುವುದೆಂದು ಸ್ಥಳೀಯ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
Next Story





