Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅರಣ್ಯ ಅಭಿವೃದ್ಧಿಗೆ ವಾರ್ಷಿಕ 300 ಕೋಟಿ...

ಅರಣ್ಯ ಅಭಿವೃದ್ಧಿಗೆ ವಾರ್ಷಿಕ 300 ಕೋಟಿ ರೂ. ಖರ್ಚು

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ7 Jun 2016 10:41 PM IST
share
ಅರಣ್ಯ ಅಭಿವೃದ್ಧಿಗೆ ವಾರ್ಷಿಕ 300 ಕೋಟಿ ರೂ. ಖರ್ಚು

ಬೆಂಗಳೂರು, ಜೂ.7: ಅರಣ್ಯ ಪ್ರದೇಶದ ವ್ಯಾಪ್ತಿ ದಿನೆ ದಿನೆ ಕಡಿಮೆಯಾಗುತ್ತಿದೆ. ಕಾಡು ಬೆಳೆಸಲು, ಗಿಡಗಳನ್ನು ನೆಡಲು ಪ್ರತೀ ವರ್ಷ 300 ಕೋಟಿ ರೂ. ವೆಚ್ಚ ಮಾಡಲಾ ಗುತ್ತಿದೆ. ಆದರೂ ಕಾಡು ಬೆಳೆಯುತ್ತಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ಶಾಲೆಗಳಲ್ಲಿ ವನ ಮಹೋತ್ಸವ ಆಚರಿಸ ಬೇಕು. ಈ ಕೆಲಸ ಜೂನ್ ಮತ್ತು ಜುಲೈ ತಿಂಗಳಲ್ಲಿ ನೆರವೇರಬೇಕು. ಇದಕ್ಕಾಗಿ ಈ ಬಾರಿ ಎಂಟು ಕೋಟಿ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಅರಣ್ಯ ಪ್ರದೇಶದಲ್ಲಿ 5.5 ಕೋಟಿ ಹಾಗೂ ಅರಣ್ಯೇತರ ಪ್ರದೇಶದಲ್ಲಿ 2.5 ಕೋಟಿ ಸಸಿಗಳನ್ನು ನೆಡುವ ಕಾರ್ಯಕ್ರಮ ದಲ್ಲಿ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳ ಸಹಕಾರಕ್ಕೆ ಮುಖ್ಯಮಂತ್ರಿ ಮನವಿ ಮಾಡಿದರು.

ಕೆರೆ ಸಂಜೀವಿನಿ ಯೋಜನೆ ಪ್ರಗತಿ ಕುಂಠಿತವಾಗಿರುವ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಇನ್ನು ಮುಂದೆ ಮಳೆಗಾಲಕ್ಕೆ ಮೊದಲೇ ಕೆರೆಗಳ ಹೂಳು ತೆಗೆಯುವ ಕಾರ್ಯ ಆಗಬೇಕು. ಇಲ್ಲದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಅರಣ್ಯ ಪ್ರದೇಶ ಒತ್ತುವರಿ ಮಾಡಿಕೊಂಡಿರುವ ಸಣ್ಣ ರೈತರಿಗೆ ತೊಂದರೆ ನೀಡಬಾರದು ಎಂಬ ಸುತ್ತೋಲೆ ಹೊರಡಿಸಲಾಗಿದೆ. ಆದರೆ ಈಗಲೂ ಕೆಲವೆಡೆ ರೈತರಿಗೆ ಕಿರುಕುಳ ಕೊಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಅರಣ್ಯ ವಾಸಿಗಳಿಗೆ ಹಕ್ಕುಪತ್ರ ನೀಡುವತ್ತ ಗಮನ ಹರಿಸ ಬೇಕು. ಅರಣ್ಯ ಇಲಾಖೆ ಅಧಿಕಾರಿಗಳು ಈ ಕುರಿತು ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು. ಜಿಲ್ಲೆಗಳಿಗೆ ಭೇಟಿ ನೀಡಿದಾಗ ಸರಕಾರದ ಮಹತ್ವಾ ಕಾಂಕ್ಷೆಯ ಯೋಜನೆಗಳಿಗೆ ಒತ್ತು ನೀಡಿ ಅವುಗಳ ಪ್ರಗತಿ ಪರಿಶೀಲಿಸಿ, ಒಂದು ರಾತ್ರಿ ಆಯಾ ಜಿಲ್ಲೆಯಲ್ಲೆ ವಾಸ್ತವ್ಯ ಹೂಡಿ ಜನರ ಸಮಸ್ಯೆಗಳನ್ನು ಅರಿಯುವ ಪ್ರಯತ್ನ ಮಾಡಿ ಎಂದು ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಲಹೆ ನೀಡಿದರು. ಮೈಸೂರು ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ: ಮೈಸೂರಿನ ಮಹಾರಾಣಿ ಕಲಾ ಹಾಗೂ ವಾಣಿಜ್ಯ ಕಾಲೇಜು ವಿದ್ಯಾ ರ್ಥಿನಿಯರ ವಸತಿ ನಿಲಯದಲ್ಲಿನ ಅವ್ಯವಸ್ಥೆ ಕುರಿತು ಸಭೆಯಲ್ಲಿ ತೀವ್ರ ಅಸಮಾಧಾನ ಹೊರ ಹಾಕಿದ ಮುಖ್ಯ ಮಂತ್ರಿ, ಕೂಡಲೇ ಪ್ರಾಂಶುಪಾಲರನ್ನು ಅಮಾನತು ಮಾಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದರು. ಹಾಸ್ಟೆಲ್‌ನ ಸ್ಥಿತಿಗತಿ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯ ದರ್ಶಿ ಭರತ್‌ಲಾಲ್ ಮೀನಾಗೆ ಸೂಚಿಸಿದ ಅವರು, ಈ ಹಾಸ್ಟೆಲ್ ಅವ್ಯವಸ್ಥೆಗಳ ಆಗರವಾಗಿದೆ. ತಾವು ಇತ್ತೀಚೆಗೆ ಮೈಸೂರಿಗೆ ಭೇಟಿ ನೀಡಿದ್ದಾಗ ಅಲ್ಲಿನ ವಿದ್ಯಾರ್ಥಿನಿ ಯರು ತಮಗೆ ಆಗುತ್ತಿರುವ ತೊಂದರೆ ಹೇಳಿಕೊಂಡು ಕಣ್ಣೀರು ಹಾಕಿದರು ಎಂದರು.
ಮುಖ್ಯಮಂತ್ರಿ ಜಿಲ್ಲೆಯಲ್ಲೆ ಈ ರೀತಿ ಆಗಬೇಕೇ? ಅಧಿಕಾರಿಗಳೇಕೆ ಹಾಸ್ಟೆಲ್‌ಗೆ ಭೇಟಿ ನೀಡಿ ಸಮಸ್ಯೆ ಬಗೆಹ ರಿಸುವ ಪ್ರಯತ್ನ ಮಾಡಿಲ್ಲ ಎಂದು ತರಾಟೆಗೆ ತೆಗೆದು ಕೊಂಡ ಮುಖ್ಯಮಂತ್ರಿ, ಊಟದ ವ್ಯವಸ್ಥೆಗೆ ವಿದ್ಯಾರ್ಥಿ ಗಳು ಮೂರು ವರ್ಷದಿಂದ ಹಣ ಪಾವತಿಸುವ ಪರಿಸ್ಥಿತಿ ಅಲ್ಲಿದೆ. ಅವರ ಹಣವನ್ನು ಕೂಡಲೆ ಮರು ಪಾವತಿಸುವ ಕ್ರಮ ಕೈಗೊಳ್ಳಿ ಎಂದು ಆದೇಶಿಸಿದರು.

ನೀವು ಇಂಥದ್ದನ್ನು ಏಕೆ ನೋಡುವುದಿಲ್ಲ. ನಿಮಗೆ ಅನುಭವ ಇದೆ ಎಂಬ ಕಾರಣಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿರುವುದು. ಹೋಗಿ ನೋಡಿದ್ದರೆ ಸಮಸ್ಯೆ ಬಗೆಹರಿಯುತ್ತಿತ್ತು ಎಂದು ಮುಖ್ಯಮಂತ್ರಿ ತರಾಟೆಗೆ ತೆಗೆದುಕೊಂಡರು. ಸಭೆಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯ ದರ್ಶಿ ಅರವಿಂದಜಾಧವ್, ಅಪರ ಮುಖ್ಯ ಕಾರ್ಯ ದರ್ಶಿಗಳಾದ ಲತಾ ಕೃಷ್ಣರಾವ್, ಕೆ.ರತ್ನಪ್ರಭಾ, ಮಹೇಂದ್ರ ಜೈನ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್, ತುಷಾರ್ ಗಿರಿನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X