Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೆಲಂಗಾಣದ ಕೀರ್ತಿಪತಾಕೆ ನಾಲ್ಕೇ...

ತೆಲಂಗಾಣದ ಕೀರ್ತಿಪತಾಕೆ ನಾಲ್ಕೇ ದಿನದಲ್ಲಿ ಬದಲು ದೇಶದ ಅತೀದೊಡ್ಡ ತ್ರಿವರ್ಣ ಧ್ವಜಕ್ಕೆ ಹಾನಿ

ವಾರ್ತಾಭಾರತಿವಾರ್ತಾಭಾರತಿ7 Jun 2016 11:26 PM IST
share

ಹೈದರಾಬಾದ್, ಜೂ.7: ನಗರದ ಸಂಜೀವಯ್ಯ ಪಾರ್ಕ್‌ನಲ್ಲಿ ದೇಶದ ಅತೀದೊಡ್ಡ ತಿರಂಗ ಆರೋಹಣ ಮಾಡಿದ ನಾಲ್ಕೇ ದಿನಗಳಲ್ಲಿ ಅಧಿಕಾರಿಗಳು ಅದನ್ನು ಅವರೋಹಣ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಭೀಕರ ಗಾಳಿಯಿಂದಾಗಿ ಅತಿದೊಡ್ಡ ರಾಷ್ಟ್ರಧ್ವಜ ಹರಿದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ಅನಿವಾರ್ಯ ಕ್ರಮ ಕೈಗೊಂಡರು. ಆದಾಗ್ಯೂ ಮಧ್ಯರಾತ್ರಿ ವೇಳೆ ಧ್ವಜವನ್ನು ಬದಲಿಸಿ, ಹೊಸ ಧ್ವಜ ಹಾರಿಸಲಾಯಿತು.

ರಾಷ್ಟ್ರಧ್ವಜ ಸಂಹಿತೆಗೆ ಅನುಗುಣವಾಗಿಯೇ ಈ ಪ್ರಕ್ರಿಯೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹರಿದ ಅಥವಾ ಬಣ್ಣ ಮಾಸಿದ ಧ್ವಜಗಳನ್ನು ಬದಲಿಸಬೇಕು ಹಾಗೂ ಅದನ್ನು ಸುಡುವ ಅಥವಾ ಇನ್ಯಾವುದೇ ವಿಧಾನದ ಮೂಲಕ ಖಾಸಗಿಯಾಗಿ ಸಂಪೂರ್ಣ ನಾಶಮಾಡಬೇಕು. ಹಾಗೆ ಮಾಡುವಾಗ ರಾಷ್ಟ್ರಧ್ವಜದ ಗೌರವ ಕಾಪಾಡಬೇಕು ಎಂದು ಧ್ವಜಸಂಹಿತೆ ಹೇಳುತ್ತದೆ.
ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ತೆಲಂಗಾಣ ಸಂಸ್ಥಾಪನಾ ದಿನ ಸಮಾರಂಭದ ಅಂಗವಾಗಿ ಈ ಧ್ವಜವನ್ನು ಜೂನ್ 2ರಂದು ಹಾರಿಸಿದ್ದರು. ದೇಶದ ಎರಡನೆ ಅತೀದೊಡ್ಡ ಧ್ವಜಸ್ತಂಭ ಎನಿಸಿದ 291 ಅಡಿ ಎತ್ತರದ ಸ್ತಂಭದಲ್ಲಿ ಇದನ್ನು ಹಾರಿಸಲಾಗಿತ್ತು.
ರಾಷ್ಟ್ರಧ್ವಜ ಹರಿದದ್ದು ಗಮನಕ್ಕೆ ಬಂದ ತಕ್ಷಣ ಬದಲಿಸಲು ವ್ಯವಸ್ಥೆ ಮಾಡಲಾಗಿದೆ. ಅದೇ ಗಾತ್ರದ ಐದು ಧ್ವಜಗಳನ್ನು ಬದಲಿಗಾಗಿ ಮೀಸಲಿಡಲಾಗಿದೆ ಎಂದು ಅಧಿಕೃತ ಮೂಲಗಳು ಹೇಳಿವೆ. ತಜ್ಞರು ಮಾತ್ರ ಧ್ವಜದ ಗಾತ್ರವೇ ಸಮಸ್ಯೆಗೆ ಮೂಲ ಎಂದು ವಿಶ್ಲೇಷಿಸಿದ್ದಾರೆ. ಸ್ತಂಭದ ಎತ್ತರಕ್ಕೆ ಅನುಗುಣವಾಗಿ ಧ್ವಜದ ಉದ್ದ ಇಲ್ಲದಿರುವುದರಿಂದ ಧ್ವಜಕ್ಕೆ ಹಾನಿಯಾಗಿದೆ. ಜತೆಗೆ ಧ್ವಜಕ್ಕೆ ಬಳಸಿದ ಬಟ್ಟೆಯ ಬಗ್ಗೆ ಕೂಡಾ ಅನುಮಾನವಿದೆ. ಕೊಲ್ಕತ್ತಾದ ಸಂಸ್ಥೆಯೊಂದು 1.3 ಕೋಟಿ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಿತ್ತು.
ಮೊದಲು 303 ಅಡಿ ಎತ್ತರದ ಸ್ತಂಭದಲ್ಲಿ ಧ್ವಜಾರೋಹಣಕ್ಕೆ ತೆಲಂಗಾಣ ಸರಕಾರ ನಿರ್ಧರಿಸಿತ್ತು. ಆದರೆ ಇದಕ್ಕೆ ಭಾರತದ ವಿಮಾನ ನಿಲ್ದಾಣಗಳ ಪ್ರಾಧಿಕಾರ ಆಕ್ಷೇಪ ವ್ಯಕ್ತಪಡಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X