Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರ ಇಂಟರ್‌ಮೀಡಿಯೇಟ್ ಪರೀಕ್ಷಾ ವಿವಾದ:...

ಬಿಹಾರ ಇಂಟರ್‌ಮೀಡಿಯೇಟ್ ಪರೀಕ್ಷಾ ವಿವಾದ: ಸಿಟ್ ತನಿಖೆಗೆ ಸಿಎಂ ಆದೇಶ

ವಾರ್ತಾಭಾರತಿವಾರ್ತಾಭಾರತಿ7 Jun 2016 11:51 PM IST
share
ಬಿಹಾರ ಇಂಟರ್‌ಮೀಡಿಯೇಟ್ ಪರೀಕ್ಷಾ ವಿವಾದ: ಸಿಟ್ ತನಿಖೆಗೆ ಸಿಎಂ ಆದೇಶ

ಪಾಟ್ನಾ, ಜೂ.7: ಬಿಹಾರದ ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದವರ ಫಲಿತಾಂಶದ ವಿವಾದದ ಕುರಿತು ಕ್ರಿಮಿನಲ್ ಕೋನದಿಂದಲೂ ತನಿಖೆ ನಡೆಸಲಾಗುವುದೆಂಬ ಸೂಚನೆ ನೀಡಿದ ಬಳಿಕ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಸಂಜೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆಯೊಂದನ್ನು ನಡೆಸಿದ್ದಾರೆ. ಸಂಪೂರ್ಣ ಪ್ರಕರಣದ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವೊಂದನ್ನು ರಚಿಸುವಂತೆ ಹಾಗೂ ತಪ್ಪಿತಸ್ಥರೆಂದು ಕಂಡು ಬಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ವಿಶೇಷ ತನಿಖಾ ತಂಡವು (ಸಿಟ್) 10 ದಿನಗಳೊಳಗಾಗಿ ರಾಜ್ಯದ ಪೊಲೀಸ್ ವರಿಷ್ಠ ಪಿ.ಕೆ.ಠಾಕೂರ್‌ಗೆ ತನ್ನ ವರದಿಯನ್ನು ಸಲ್ಲಿಸಬೇಕಿದೆ.

ಇಂಟರ್‌ಮೀಡಿಯೇಟ್ ಅಗ್ರ ಸ್ಥಾನಿಗಳ ಫಲಿತಾಂಶದಲ್ಲಿ ನಡೆದಿರಬಹುದಾದ ಅವ್ಯವಹಾರಗಳ ತನಿಖೆಗಾಗಿ ಬಿಹಾರ ರಾಜ್ಯ ಶಿಕ್ಷಣ ಮಂಡಳಿಯು (ಬಿಎಸ್‌ಇಬಿ) ರಚಿಸಿದ್ದ ತ್ರಿ ಸದಸ್ಯ ನ್ಯಾಯಾಂಗ ಸಮಿತಿಯನ್ನು ಸರಕಾರ ಬರ್ಖಾಸ್ತುಗೊಳಿಸಿದೆ. ಪಾಟ್ನಾ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಘನಶ್ಯಾಂ ಪ್ರಸಾದ್‌ರ ನೇತೃತ್ವದಲ್ಲಿ ನಿವೃತ್ತ ನ್ಯಾಯಾಧೀಶ ಜಿ.ಪಿ.ಸಿನ್ಹಾ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಮಿಥು ಪ್ರಸಾದ್‌ರನ್ನೊಳಗೊಂಡಿದ್ದ ಸಮಿತಿ ಇದಾಗಿತ್ತು.

ಬಿಎಸ್‌ಇಬಿಗೆ ಅಂತಹ ಸಮಿತಿಯನ್ನು ರಚಿಸುವ ಅಧಿಕಾರವಿಲ್ಲ ಹಾಗೂ ಮಂಡಳಿಯ ಅಧ್ಯಕ್ಷ ಲಾಲ್ಕೇಶ್ವರ ಪ್ರಸಾದ್ ಸಿಂಗ್ ತನ್ನ ಮಿತಿಗಿಂತ ಆಚೆಗೆ ಕ್ರಮ ಕೈಗೊಂಡ ಬಗ್ಗೆ ಮುಖ್ಯಮಂತ್ರಿ ಅಸಮಾಧಾನಗೊಂಡಿದ್ದಾರೆಂದು ಹೇಳಿ ಸರಕಾರವು ಆ ಸಮಿತಿಯನ್ನು ಬರ್ಖಾಸ್ತು ಮಾಡಲು ನಿರ್ಧರಿಸಿತ್ತು.

ಫಲಿತಾಂಶ ವಿವಾದವನ್ನು ಸಮರ್ಥವಾಗಿ ನಿಭಾಯಿಸಿದ ಕಾರಣ ಸಿಂಗ್‌ರನ್ನು ಈಗಲ್ಲದಿದ್ದರೆ ಮತ್ತೆಯಾದರೂ ಹುದ್ದೆಯಿಂದ ಕೆಳಗಿಳಿಸುವ ಸಾಧ್ಯತೆಯಿದೆಯೆಂಬ ವದಂತಿ ಹರಿದಿದೆ.

ಸರಕಾರ ನಿರ್ಧಾರ ಕೈಗೊಂಡೊಡನೆಯೇ ಉನ್ನತ ಸ್ಥಾನಿಗಳಾದ ರುಬಿ ರಾಯ್, ಸೌರಭ ಶ್ರೇಷ್ಠ ಹಾಗೂ ರಾಹುಲ್ ಕುಮಾರ್ ಎಂಬವರ ವಿರುದ್ಧ ಪಾಟ್ನಾದ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಒಂದನ್ನು ದಾಖಲಿಸಲಾಗಿದೆ. ಹೆಚ್ಚಿನ ಉನ್ನತ ಸ್ಥಾನಗಳನ್ನು ಗಳಿಸಿದ ವಿದ್ಯಾರ್ಥಿಗಳು ಬಂದಿರುವ ವೈಶಾಲಿ ಜಿಲ್ಲೆಯ ವಿವಾದಿತ ವಿ.ಆರ್.ಕಾಲೇಜ್‌ನ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ.

ಪ್ರೌಢ ಶಿಕ್ಷಣ ಮಂಡಳಿಯ ನಿರ್ದೇಶಕ ರಾಜೀವ್ ಪ್ರಸಾದ್ ಸಿಂಗ್ ರಂಜನ್‌ರ ದೂರಿನಂತೆ ಪ್ರಕರಣ ದಾಖಲಿಸಲಾಗಿದೆಯೆಂದು ಕೊತ್ವಾಲಿ ಪೊಲೀಸ್ ಠಾಣಾಧಿಕಾರಿ ರಮೇಶ್ ಕುಮಾರ್ ಸಿಂಗ್ ಖಚಿತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X