ಇಂಡೋನೇಶ್ಯ ಸಮುದ್ರದಲ್ಲಿ ಭೂಕಂಪ: ಸುನಾಮಿ ಎಚ್ಚರಿಕೆಯಿಲ್ಲ

ಜಕಾರ್ತ (ಇಂಡೋನೇಶ್ಯ), ಜೂ. 9: ಮಧ್ಯ ಇಂಡೋನೇಶ್ಯದ ಕರಾವಳಿಯಲ್ಲಿ ಗುರುವಾರ ರಿಕ್ಟರ್ ಮಾಪಕದಲ್ಲಿ 6.2ರ ತೀವ್ರತೆಯ ಪ್ರಬಲ ಸಾಗರದಡಿಯ ಭೂಕಂಪ ಸಂಭವಿಸಿದೆ ಎಂದು ಅಮೆರಿಕದ ಭೂಕಂಪ ಶಾಸ್ತ್ರಜ್ಞರು ತಿಳಿಸಿದ್ದಾರೆ.
ಆದರೆ, ಸುನಾಮಿ ಎಚ್ಚರಿಕೆಯನ್ನು ಹೊರಡಿಸಲಾಗಿಲ್ಲ ಹಾಗೂ ಸಾವು-ನೋವಿನ ಬಗ್ಗೆ ತಕ್ಷಣಕ್ಕೆ ವರದಿಗಳು ಬಂದಿಲ್ಲ.
ಪ್ರಸಿದ್ಧ ವಿಹಾರ ದ್ವೀಪ ಲೊಂಬೊಕ್‌ನಿಂದ ದಕ್ಷಿಣಕ್ಕೆ ಸುಮಾರು 300 ಕಿ.ಮೀ. ದೂರದಲ್ಲಿ 29 ಕಿ.ಮೀ. ಆಳದಲ್ಲಿ ಭೂಕಂಪ ಸಂಭವಿಸಿತು ಎಂದು ಅಮೆರಿಕದ ಜಿಯಾಲಜಿಕಲ್ ಸರ್ವೆ ತಿಳಿಸಿದೆ.
ಭೂಕಂಪ ಯಾವುದಾದರೂ ಪರಿಣಾಮ ಬೀರಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಇಂಡೋನೇಶ್ಯದ ವಿಪತ್ತು ನಿರ್ವಹಣೆ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ಇಂಡೋನೇಶ್ಯದಲ್ಲಿ ಪದೇ ಪದೇ ಭೂಕಂಪಗಳು ಸಂಭವಿಸುತ್ತಿವೆ.
Next Story





