Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಕ್ರಮವಾಗಿ ತಗ್ಗು ಪ್ರದೇಶದಲ್ಲಿ ಮಣ್ಣು...

ಅಕ್ರಮವಾಗಿ ತಗ್ಗು ಪ್ರದೇಶದಲ್ಲಿ ಮಣ್ಣು ಭರಾವ: ಜಿಲ್ಲಾಡಳಿತಕ್ಕೆ ದೂರು

ವಾರ್ತಾಭಾರತಿವಾರ್ತಾಭಾರತಿ9 Jun 2016 11:05 PM IST
share
ಅಕ್ರಮವಾಗಿ ತಗ್ಗು ಪ್ರದೇಶದಲ್ಲಿ ಮಣ್ಣು ಭರಾವ: ಜಿಲ್ಲಾಡಳಿತಕ್ಕೆ ದೂರು

ಕಾರವಾರ, ಜೂ.9: ಸಿಆರ್‌ಝಡ್ ಕಾನೂನು ಉಲ್ಲಂಘಿಸಿ ತಗ್ಗು ಪ್ರದೇಶದಲ್ಲಿ ಮಣ್ಣು ತುಂಬಿ, ನೀರು ಹರಿಯುವ ಕಾಲುವೆ ಮತ್ತು ಹಿನ್ನೀರು ಪ್ರದೇಶವನ್ನು ಎತ್ತರವನ್ನಾಗಿಸಿ ಸಾರ್ವಜನಿಕರ ಆಸ್ತಿ ಮತ್ತು ಜೀವಕ್ಕೆ ತೊಂದರೆ ಆಗುವಂತೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿದ್ದಾರೆ. ಈ ಬಗ್ಗೆ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಅಂಕೋಲಾದ ಹೊನ್ನೆಕೇರಿ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿದ್ದಾರೆ.

ಹೊನ್ನೆಕೇರಿ ಅಂಕೋ ಲಾದ ಕೇಣಿ ಹಳ್ಳದ ತಟದಲ್ಲಿದೆ. ಇಲ್ಲಿನ 61,62,63 ಮತ್ತು 61/2ಅ 61/1ಕ, 61/1ಅ,61/1ಇ, 61/1ಎಫ್ ಸರ್ವೇ ನಂಬರಿನ ಪ್ರದೇಶಗಳು ಕೇಣಿ ಹಳ್ಳದ ತಟದಲ್ಲಿರುವ ತಗ್ಗು ಪ್ರದೇಶವಾಗಿದೆ. ಈ ಜಮೀನನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ದೂರಿದ್ದಾರೆ.

ಒತ್ತ್ತುವರಿ ಮಾಡಿಕೊಂಡ ಪ್ರದೇಶವನ್ನು ಸಂಪೂರ್ಣವಾಗಿ ಮಣ್ಣು ತುಂಬಿದ್ದರಿಂದ ಜನ ವಸತಿ ಸ್ಥಳಗಳು ಜಲಾವೃತ್ತವಾಗುವ ಭೀತಿಯಲ್ಲಿದೆ. ನೀರು ಹರಿಯಲು ಪಟ್ಟಣ ಪಂಚಾಯತ್‌ನ ಕೊಳವೆ ಪೈಪ್ ಅಳವಡಿಸಿದ್ದಾರೆ. ಮಳೆಗಾಲದಲ್ಲಿ ತುಂಬಿದ ನೀರು ಈ ಪೈಪ್‌ನಿಂದ ಸರಾಗವಾಗಿ ಹರಿಯಲು ಸಾಧ್ಯವಿಲ್ಲ. ಕೆಲವು ತಿಂಗಳ ಹಿಂದೆ ಹೊನ್ನೆಕೇರಿಯ ಸುನೀಲ್ ನಾಯ್ಕ ಗೂಂಡಾಗಳ ಜೊತೆಗೆ ಈ ಪ್ರದೇಶದಲ್ಲಿ ಅಕ್ರಮವಾಗಿ ಮಣ್ಣು ಭರಾವ ಮಾಡಿ ಅನಾದಿಕಾಲದಿಂದ ಇದ್ದ ಕೊಳವೆ ಮಾರ್ಗವನ್ನು ಮುಚ್ಚಿದ್ದಾರೆ. ಈ ಪ್ರದೇಶದಲ್ಲಿ ನೀರು ತುಂಬಿ ಸಾರ್ವಜನಿಕರ ಆಸ್ತಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅನಧಿಕೃತವಾಗಿ ತುಂಬಿದ ಮಣ್ಣನ್ನು ತೆರವುಗೊಳಿಸಲು ಪಟ್ಟಣ ಪಂಚಾಯತ್‌ಗೆ ಜಿಲ್ಲಾಡಳಿತ ಆದೇಶ ನೀಡಬೇಕು. ಜೊತೆಗೆ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ಸಲ್ಲಿಸಿದ ಮನವಿಯಲ್ಲಿ ಕೋರಿದ್ದಾರೆ.

ಮನವಿ ಸಲ್ಲಿಸುವ ನಿಯೋಗದಲ್ಲಿ ಸುಭಾಷ್ ನಾಯ್ಕ, ಮಹೇಶ್ ನಾಯ್ಕ, ಕಿರಣ್ ನಾಯ್ಕ, ಅನಿಲ್ ನಾಯ್ಕ, ರಾಮಾ, ಯೋಗೇಶ್, ಶಿವಾನಂದ, ರಾಜೇಶ್, ಪ್ರಸಾದ್, ದೀಪಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X