Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಮಾನವ ಹಕ್ಕುಗಳು,ಧಾರ್ಮಿಕ...

ಭಾರತದಲ್ಲಿ ಮಾನವ ಹಕ್ಕುಗಳು,ಧಾರ್ಮಿಕ ಸ್ವಾತಂತ್ರ ಹದಗೆಡುತ್ತಿವೆ: ಅಮೆರಿಕದ ಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ9 Jun 2016 11:33 PM IST
share

ವಾಷಿಂಗ್ಟನ್,ಜೂ.9: ಮೋದಿ ಸರಕಾರದ ಎರಡು ವರ್ಷಗಳ ಆಡಳಿತದಲ್ಲಿ ಭಾರತದಲ್ಲಿ ಮಾನವ ಹಕ್ಕುಗಳು ಮತ್ತು ಧಾರ್ಮಿಕ ಸ್ವಾತಂತ್ರ ದುರವಸ್ಥೆಗೀಡಾಗಿವೆ ಎಂದು ಹೇಳಿರುವ ಅಮೆರಿಕದ ಮಾನವ ಹಕ್ಕುಗಳ ಕಾರ್ಯಕರ್ತರು, ಈ ವಿಷಯವು ಅಮೆರಿಕ-ಭಾರತ ನಡುವಿನ ಮಾತುಕತೆಗಳ ಭಾಗವಾಗಬೇಕು ಎಂದು ಕರೆ ನೀಡಿದ್ದಾರೆ.
 ಎಲ್ಲ ಪ್ರಜೆಗಳಿಗೂ ನ್ಯಾಯ ಮತ್ತು ಉತ್ತರದಾಯಿತ್ವದ ಭರವಸೆ,ದುರ್ಬಲ ಸಮುದಾಯಗಳ ರಕ್ಷಣೆ ಮತ್ತು ವಿಚಾರಗಳು ಹಾಗೂ ಭಿನ್ನಾಭಿಪ್ರಾಯಗಳ ಮುಕ್ತ ವಿನಿಮಯದ ರಕ್ಷಣೆಗೆ ಮೋದಿ ಸರಕಾರವು ಉತ್ತಮ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಭಾರತದಲ್ಲಿ ಮಾನವ ಹಕ್ಕುಗಳ ಕುರಿತಂತೆ ಪ್ರಗತಿಯು ಕುಂಠಿತಗೊಳ್ಳಲಿದೆ ಎಂದು ಹ್ಯೂಮನ್ ರೈಟ್ಸ್ ವಾಚ್‌ನ ಏಷ್ಯಾ ವಿಭಾಗದ ನಿರ್ದೇಶಕ ಜಾನ್ ಸಿಫ್ಟನ್ ಹೇಳಿದರು.
ಭಾರತದಲ್ಲಿ ಮಾನವ ಹಕ್ಕುಗಳ ಕುರಿತು ಟಾಮ್ ಲಾಂಟೋಸ್ ಮಾನವ ಹಕ್ಕುಗಳ ಆಯೋಗವು ಏರ್ಪಡಿಸಿದ್ದ ಕಾಂಗ್ರೆಸ್ ವಿಚಾರಣೆಯಲ್ಲಿ ಮಾತನಾಡಿದ ಅವರು, ಕಾನೂನುಗಳು ಮತ್ತು ನೀತಿಗಳ ಪರಿಣಾಮಕಾರಿ ಅನುಷ್ಠಾನದ ಕೊರತೆಯು ನಿರಂತರ ಸವಾಲಾಗಿದೆ ಎಂದರು. ಭಾರತ ಸರಕಾರದೊಡನೆ ಈ ವಿಷಯಗಳನ್ನು ಆದ್ಯತೆಯೊಂದಿಗೆ ಕೈಗೆತ್ತಿಕೊಳ್ಳುವಂತೆ ಮತ್ತು ಭಾರತ ಸರಕಾರದೊಂದಿಗೆ ಮಾತುಕತೆಯಲ್ಲಿ ನೇರವಾಗಿ ಪ್ರಸ್ತಾಪಿಸುವಂತೆ ಅಮೆರಿಕ ಸರಕಾರದ ಮೇಲೆ ಒತ್ತಡ ಹೇರುವಂತೆ ಕಾಂಗ್ರೆಸ್ ಸದಸ್ಯರನ್ನು ಅವರು ಆಗ್ರಹಿಸಿದರು.
ಈ ಅಪರಾಧಗಳಲ್ಲಿ ಭಾರತ ಸರಕಾರವು ನೇರವಾಗಿ ಭಾಗಿಯಾಗಿಲ್ಲವಾದರೂ ಪ್ರಧಾನಿ ಮೋದಿ ಮತ್ತು ಸರಕಾರಿ ಅಧಿಕಾರಿಗಳು ಗಾಢವೌನ ವಹಿಸಿದ್ದಾರೆ ಎಂದು ಇಂಟರ್‌ನ್ಯಾಷನಲ್ ಕ್ರಿಶ್ಚಿಯನ್ ಕನ್ಸರ್ನ್‌ನ ಅಧ್ಯಕ್ಷ ಜೆಫ್ ಕಿಂಗ್ ಹೇಳಿದರೆ,ವ್ಯೆಹಾತ್ಮಕ ಮತ್ತು ವಾಣಿಜ್ಯ ಮಾತುಕತೆಗಳು ಭದ್ರತೆ,ರಕ್ಷಣೆ,ಆರ್ಥಿಕ ಸಹಕಾರ ಇತ್ಯಾದಿಗಳಾಚೆಗೂ ಸಾಗಬೇಕು ಮತ್ತು ಉಭಯ ರಾಷ್ಟ್ರಗಳು ಪ್ರಜಾಪ್ರಭುತ್ವ,ಧಾರ್ಮಿಕ ಸ್ವಾತಂತ್ರ ಮತ್ತು ಕಾನೂನಿನ ಆಡಳಿತದ ವೌಲ್ಯಗಳನ್ನು ಹಂಚಿಕೊಂಡು ಸಮಾಜ ನಿರ್ಮಾಣ ಮಾಡುವಂತಾಗಬೇಕು ಎಂದು ಭಾರತೀಯ ಅಮೆರಿಕನ್ ಮುಸ್ಲಿಮ್ ಮಂಡಳಿಯ ಮುಸಾದಿಕ್ ಥಂಗೆ ಹೇಳಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X