ಪುತ್ತೂರು: ಅಕ್ರಮ ಗೋ ಸಾಗಾಟ ಪತ್ತೆ; ಆರೋಪಿಗಳು ಪರಾರಿ
ಪುತ್ತೂರು, ಜೂ.10: ಪಿಕಪ್ ವಾಹನದಲ್ಲಿ ಅಕ್ರಮ ಗೋ ಸಾಗಾಟ ಪ್ರಕರಣವನ್ನು ಶುಕ್ರವಾರ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಚೆನ್ನಾವರ ಎಂಬಲ್ಲಿ ಸಂಪ್ಯ ಪೊಲೀಸರು ಪತ್ತೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಚಾಲಕ ಮತ್ತು ಇನ್ನೋರ್ವ ಆರೋಪಿ ಪರಾರಿಯಾಗಿದ್ದಾರೆ. ಪಾಲ್ತಾಡಿಯ ಚೆನ್ನಾವರ ಕ್ರಾಸ್ ಬಳಿ ಅಕ್ರಮ ಗೋ ಸಾಗಾಟವನ್ನು ಪತ್ತೆ ಹಚ್ಚಿದ ಪೊಲೀಸರು, 7 ಗೋವುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಬೆಳಗ್ಗೆ ಸುಮಾರು 6 ಗಂಟೆ ಹೊತ್ತಿಗೆ ಪಿಕಪನ್ನು ನಿಲ್ಲಿಸಿ, ತಪಾಸಣೆ ನಡೆಸಿದಾಗ ದನ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಪಿಕಪ್‌ನಲ್ಲಿದ್ದ ಚಾಲಕ ಸಹಿತ ಇಬ್ಬರು ಪರಾರಿಯಾಗಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





