ಮುಸ್ಲಿಂ ಸೆಂಟ್ರಲ್ ಕಮಿತಿ ವತಿಯಿಂದ ಉಚಿತ ಪುಸ್ತಕ ವಿತರಣೆ

ಮಂಗಳೂರು, ಜೂ.10: ಮುಸ್ಲಿಂ ಸೆಂಟ್ರಲ್ ಕಮಿಟಿ ಸಭಾಂಗಣದಲ್ಲಿ ಇತ್ತೀಚೆಗೆ ಕಮಿಟಿ ಅಧ್ಯಕ್ಷ ಕೆ.ಎಸ್.ಮುಹಮ್ಮದ್ ಮಸೂದ್ ಅಧ್ಯಕ್ಷತೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್, ಅಹ್ಮದ್ ಬಾವ ಬಜಾಲ್, ಹಾಜಿ ಐ.ಮೊದಿನಬ್ಬ, ಸಿತಾರ್ ಮಜೀದ್ ಹಾಜಿ, ಡಿ.ಎಂ.ಅಸ್ಲಂ, ಅದ್ದು ಹಾಜಿ, ಹಾಜಿ ಮುಹಮ್ಮದ್ ಬಪ್ಪಳಿಗೆ ಮೊದಲಾದವರು ಉಪಸ್ಥಿತರಿದ್ದರು.
Next Story





