Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಎಸ್ಸಾರ್ಟಿಸಿ ಅಧಿಕಾರಿಗಳಿಂದ...

ಕೆಎಸ್ಸಾರ್ಟಿಸಿ ಅಧಿಕಾರಿಗಳಿಂದ ಸರಕಾರಕ್ಕೆ ಲಕ್ಷಾಂತರ ರೂ. ವಂಚನೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ10 Jun 2016 11:22 PM IST
share

ಮೂಡಿಗೆರೆ, ಜೂ.10: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕಮಗಳೂರು ವಿಭಾಗದಿಂದ ಸರಕಾರಕ್ಕೆ ಪ್ರತೀ ತಿಂಗಳು ಲಕ್ಷಾಂತರ ರೂ. ವಂಚನೆಯಾಗುತ್ತಿದೆ ಎಂದು ಆಟೋ ಚಾಲಕರ ಸಂಘದ ಅಧ್ಯಕ್ಷ ಎಂ.ಎಚ್.ಅಮರ್‌ನಾಥ್ ಆರೋಪಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ಹೇಳಿಕೆ ನೀಡಿದ ಅವರು, ಚಿಕ್ಕಮಗಳೂರು ವಿಭಾಗದ ಮೂಡಿಗೆರೆ, ಕಡೂರು, ಸಕಲೇಶಪುರ, ಚಿಕ್ಕಮಗಳೂರು, ಅರಸಿಕೆರೆಯ ಡಿಪೊಗಳಿಂದ ಬೆಂಗಳೂರಿಗೆ ಪ್ರತೀ ನಿತ್ಯ 250ಕ್ಕೂ ಹೆಚ್ಚು ಬಸ್ಸ್‌ಗಳು ಸಂಚರಿಸುತ್ತವೆ. ಈ ಬಸ್ಸುಗಳಿಗೆ ಟೋಲ್ ಶುಲ್ಕಕ್ಕಾಗಿ ಪ್ರತೀ ತಿಂಗಳ ಮೊದಲ ದಿನದಿಂದ ಅಂತ್ಯದವರೆಗೆ ಮಾಸಿಕ ಪಾಸ್ ವಿತರಿಸಲಾಗುತ್ತಿದೆ. ಈ ಪಾಸ್‌ಗಳಿಗೆ ಶುಲ್ಕವನ್ನು 1ವಾರದ ಮೊದಲೆ ಟೋಲ್ ಸಂಸ್ಥೆಗೆ ಪಾವತಿಸಿ ಪಾಸ್‌ಗಳನ್ನು ಪಡೆಯಬೇಕಾಗುತ್ತದೆ ಎಂದಿದ್ದಾರೆ.

ಆದರೆ ಕೆಎಸ್ಸಾರ್ಟಿಸಿ 5ಡಿಪೋಗಳ ವ್ಯವಸ್ಥಾಪಕರು, ಲೆಕ್ಕಾಧಿಕಾರಿಗಳು ಹಾಗೂ ವಿಭಾಗ ಮಟ್ಟದ ಹಿರಿಯ ಅಧಿಕಾರಿಗಳು ಶಾಮಿಲಾಗಿ ಪಾಸ್ ನವೀಕರಣವನ್ನು ಪ್ರತಿ ತಿಂಗಳು 2, 3, 4, ಹಾಗೂ 7ದಿನಗಳ ಕಾಲ ತಡವಾಗಿ ನವೀಕರಣ ಮಾಡುತ್ತಾರೆ. ಈ ಸಂದರ್ಭದಲ್ಲಿ ಟೋಲ್ ಶುಲ್ಕವನ್ನು ನಿರ್ವಾಹಕರು ನಗದು ರೂಪದಲ್ಲಿ ನೀಡುತ್ತಾರೆ. ಒಂದು ಬಸ್ಸ್‌ಗೆ ಕನಿಷ್ಠ 937 ರೂ. ಪಾವತಿಸಿದರೆ ಪ್ರತಿ ದಿನ 2ಲಕ್ಷ ರೂ. ಸಂಸ್ಥೆಗೆ ನಷ್ಟವಾಗುತ್ತದೆ. ಅಂದರೆ ಪ್ರತಿ ತಿಂಗಳು ಕೇವಲ ಚಿಕ್ಕಮಗಳೂರು ವಿಭಾಗದಿಂದ ಸರಕಾರಕ್ಕೆ 15 ಲಕ್ಷ ರೂ. ಗೂ ಹೆಚ್ಚು ನಷ್ಟ ಉಂಟಾಗುತ್ತಿದೆ ಎಂದು ದೂರಿದ್ದಾರೆ.

ಅಲ್ಲದೆ ಮಾಸಿಕ ರೂಪದಲ್ಲಿ ಹಾಗೂ ನಗದು ಲೆಕ್ಕದಲ್ಲಿ 2ಬಾರಿ ಹಣ ಪಾವತಿಯಾಗುತ್ತದೆ. ನಂತರದ ಹೆಚ್ಚುವರಿ ಪಾವತಿ ಹಣವನ್ನು ಸಂಸ್ಥೆಯ ಅಧಿಕಾರಿಗಳು ಟೋಲ್ ಅಧಿಕಾರಿಗಳು ಹಂಚಿಕೊಳ್ಳುತ್ತಿದ್ದಾರೆ. ಪಾಸ್ ನವೀಕರಣ ಕಡ್ಡಾಯವಾಗಿ ತಿಂಗಳ ಯಾವುದೇ ದಿನಾಂಕದಂದು ನವೀಕರಿಸಿದರೂ ಅದರ ಅವಧಿ ಪ್ರತಿ ತಿಂಗಳ 1ರಿಂದ 30ರವರೆಗೆ ಮಾತ್ರ ಇರುತ್ತದೆ. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ ತನಿಖೆ ಕೈಗೊಂಡಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತನಿಖೆ ಕೈಗೊಂಡು ಉಂಟಾಗಿರುವ ನಷ್ಟಕ್ಕೆ ಕಾರಣರಾದ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X