Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ದಲಿತ ವಿರೋಧಿ ಹೈದರಾಬಾದ್ ವಿವಿ’...

‘ದಲಿತ ವಿರೋಧಿ ಹೈದರಾಬಾದ್ ವಿವಿ’ ಪ್ರೊಫೆಸರ್ ರಾಜೀನಾಮೆ

ವಾರ್ತಾಭಾರತಿವಾರ್ತಾಭಾರತಿ10 Jun 2016 11:46 PM IST
share

ಹೈದರಾಬಾದ್,ಜೂ.10: ಹೈದರಾಬಾದ್ ವಿವಿಯ ಉಪ ಕುಲಪತಿ(ಪ್ರೋ ವೈಸ್ ಚಾನ್ಸಲರ್)ಯಾಗಿ ಪ್ರೊ.ವಿಪಿನ್ ಶ್ರೀವಾಸ್ತವ ಅವರ ನೇಮಕವನ್ನು ವಿರೋಧಿಸಿ ವಿವಿಯ ಸಾಮಾಜಿಕ ಬಹಿಷ್ಕಾರ ಮತ್ತು ಸೇರ್ಪಡೆ ನೀತಿ ಅಧ್ಯಯನ ಕೇಂದ್ರದ ಮುಖ್ಯಸ್ಥರಾಗಿರುವ ದಲಿತ ಪ್ರೊಫೆಸರ್ ಶ್ರೀಪತಿ ರಾಮುಡು ಅವರು ತನ್ನ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ವಿವಿಯ ಕ್ಯಾಂಪಸ್‌ನಲ್ಲಿ ದಲಿತ ವಿರೋಧಿ ವಾತಾವರಣವಿದೆ ಎಂದೂ ಅವರು ಆರೋಪಿಸಿದ್ದಾರೆ.

  ಗುರುವಾರ ವಿವಿಯ ಕುಲಸಚಿವರಿಗೆ ಸಲ್ಲಿಸಿರುವ ತನ್ನ ರಾಜೀನಾಮೆ ಪತ್ರದಲ್ಲಿ ವಿವಿಯ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ ವೇಮುಲಾರ ಆತ್ಮಹತ್ಯೆಯನ್ನು ಪ್ರಸ್ತಾಪಿಸಿರುವ ಅವರು, ಆ ಘಟನೆಯ ಮುನ್ನ ಮತ್ತು ನಂತರ ಕ್ಯಾಂಪಸ್‌ನಲ್ಲಿಯ ಬೆಳವಣಿಗೆಗಳನ್ನು ತಾನು ಗಮನಿಸುತ್ತಿದ್ದೇನೆ. ಕ್ಯಾಂಪಸ್‌ನಲ್ಲಿಯ ಪ್ರಚಲಿತ ವಾತಾವರಣವು ಹದಗೆಟ್ಟಿದೆ ಮತ್ತು ದಲಿತ ಸಮುದಾಯವು ಬೆದರಿಕೆಯನ್ನು ಅನುಭವಿಸುತ್ತಿದೆ. ತಾವು ತುಂಬ ದುರ್ಬಲರೆಂಬ ಭಾವನೆಗೆ ಪಕ್ಕಾಗಿರುವ ದಲಿತ ವಿದ್ಯಾರ್ಥಿಗಳು ಆಡಳಿತದ ನ್ಯಾಯಪರತೆಯ ಬಗ್ಗೆ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ದಲಿತರ ಭಾವನೆಗಳನ್ನು ಚೆನ್ನಾಗಿ ಅರಿತಿರುವ ದಲಿತ ಬೋಧಕರು ಎಸ್ಸಿ-ಎಸ್ಟಿ ಶಿಕ್ಷಕರ ವೇದಿಕೆಯ ಹಲವಾರು ಪತ್ರಗಳ ಮೂಲಕ ಇದನ್ನು ವ್ಯಕ್ತಪಡಿಸಿದ್ದು, ಆಡಳಿತವು ವಿಶ್ವಾಸ ನಿರ್ಮಾಣ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ತಾನು ಆಶಿಸಿದ್ದೆ. ಆದರೆ ಪ್ರೊ.ವಿಪಿನ್ ಶ್ರೀವಾಸ್ತವ ಅವರನ್ನು ಉಪ ಕುಲಪತಿಯನ್ನಾಗಿ ನೇಮಕಗೊಳಿಸಿರುವ ಕುರಿತ ಸುತ್ತೋಲೆ ತನಗೆ ಆಘಾತವನ್ನುಂಟು ಮಾಡಿದೆ ಎಂದು ತಿಳಿಸಿದ್ದಾರೆ.
ಶ್ರೀವಾಸ್ತವ ಅವರು ವೇಮುಲಾ ಸೇರಿದಂತೆ ಐವರು ದಲಿತ ವಿದ್ಯಾರ್ಥಿಗಳ ವಿರುದ್ಧ ದಂಡನೆಗೆ ಶಿಫಾರಸು ಮಾಡಿದ್ದ ಸಮಿತಿಯ ಅಧ್ಯಕ್ಷರಾಗಿದ್ದರು.
ಈ ಬೆಳವಣಿಗೆಗೆ ಶುಕ್ರವಾರ ಪ್ರತಿಕ್ರಿಯಿಸಿದ ಶ್ರೀವಾಸ್ತವ ಅವರು, ಆಡಳಿತಾತ್ಮಕ ವಿಷಯಗಳಲ್ಲಿ ರಾಮುಡು ಅವರು ಸಹಕರಿಸುತ್ತಿರಲಿಲ್ಲ ಮತ್ತು ಯಾವುದೇ ಕಾರ್ಯಕ್ಕೆ ಹಾಜರಾಗುತ್ತಿರಲಿಲ್ಲ. ತಾನು ಇಂದಿನಿಂದ ರಜೆಯಲ್ಲಿರುವುದರಿಂದ ಅವರ ರಾಜೀನಾಮೆಯ ಬಗ್ಗೆ ತನಗೆ ಮಾಹಿತಿಯಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X