ಕೊರಗ ವಿದ್ಯಾರ್ಥಿಗಳಿಗೆ ತರಬೇತಿ
ಉಡುಪಿ, ಜೂ.10: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ಜಿಲ್ಲೆಯ ವಿವಿಧ ಪ್ರೌಢಶಾಲೆಗಳ ಕೊರಗ ವಿದ್ಯಾರ್ಥಿಗಳಿಗೆ ಜೂ.13ರಿಂದ ಜೂ.19ರ ತನಕ ವಿಶೇಷ ಸನಿವಾಸ ತರಬೇತಿ ಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಐಟಿಡಿಪಿಯ ಸಹಕಾರದೊಂದಿಗೆ ಕುಂದಾಪುರ ವಲಯದ ಕುಂಭಾಶಿ ಮಕ್ಕಳ ಮನೆಯಲ್ಲಿ ಏರ್ಪಡಿಸಲಾಗಿದೆ.
ಸಂಬಂಸಿದ ಶಾಲಾ ಮುಖ್ಯಸ್ಥರು ಆ ವಿದ್ಯಾರ್ಥಿಗಳನ್ನು ಸಂಪರ್ಕಿಸಿ, ಕಡ್ಡಾಯವಾಗಿ ಶಿಬಿರಕ್ಕೆ ಕರೆತರುವಂತೆ ಸೂಚಿಸಲಾಗಿದೆ. ಶಿಬಿರಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿಯ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಊಟದ ತಟ್ಟೆ, ಹೊದಿಕೆ ಇತರೆ ಅಗತ್ಯ ಸಾಮಗ್ರಿಗಳನ್ನು ತರು ವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟನೆ ತಿಳಿಸಿದೆ.
Next Story





