ಧರ್ಮಸ್ಥಳ: ಇಂದು ಜಾಗೃತಿ ಸೌಧ ಕಟ್ಟಡ ಉದ್ಘಾಟನೆ
ಬೆಳ್ತಂಗಡಿ, ಜೂ.10: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್ ವತಿಯಿಂದ ಉಜಿರೆಯ ಲಾಯಿಲದ ಕ್ಷಯ ತಪಾಸಣಾ ಆಸ್ಪತ್ರೆ ಬಳಿ ನಿರ್ಮಿಸಿರುವ ಜಾಗೃತಿ ಸೌಧ ಕಟ್ಟಡ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರದ ಉದ್ಘಾಟನೆ ಜೂ.11ರಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಉದ್ಘಾಟಿಸಲಿದ್ದಾರೆ. ಜನಜಾಗೃತಿ ವೇದಿಕೆಯ ಗೌರವಾಧ್ಯಕ್ಷ, ಧರ್ಮಾಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾಭವನದ ಉದ್ಘಾಟನೆಯನ್ನು ರಾಜ್ಯದ ಆರೋಗ್ಯ ಸಚಿವ ಯು. ಟಿ. ಖಾದರ್, ಸ್ವಾಸ್ಥ ಸಂಕಲ್ಪದ ಮಾಹಿತಿ ನೀಡುವ ಕಿರುಚಿತ್ರ ಬಿಡುಗಡೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್, ರಜತ ಸಂಭ್ರಮ ಪುಸ್ತಕವನ್ನು ಶಾಸಕ ಕೆ. ವಸಂತ ಬಂಗೇರ ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





