ಚೊಕ್ಕಬೆಟ್ಟು: ನಿವೃತ್ತ ಮುಖ್ಯೋಪಾಧ್ಯಾಯರಿಗೆ ಸನ್ಮಾನ

ಮಂಗಳೂರು, ಜೂ.10: ದ.ಕ ಜಿ.ಪಂ ಮಾ.ಹಿ.ಪ್ರಾ.ಶಾಲೆ ಕಾಟಿಪಳ್ಳ, 8 ನೆ ವಿಭಾಗ, ಚೊಕ್ಕಬೆಟ್ಟು ಇದರ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ನರಸಿಂಹ ಎಚ್. ಅವರನ್ನು ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಝಾಕಿರ್, ಮಾಜಿ ಅಧ್ಯಕ್ಷ ಮುಹಮ್ಮದ್ ಟಿ., ಶಾಲಾಭಿವೃದ್ದಿ ಸಮಿತಿಯ ಎಲ್ಲಾ ಸದಸ್ಯರು, ಮಾಜಿ ಸದಸ್ಯರು, ಶಾಲಾ ಶಿಕ್ಷಕ ವೃಂದ , ಸಿ.ಆರ್.ಪಿ. ಶಾಂತಾ ಸನ್ಮಾನಿಸಿ ಗೌರವಿಸಿದರು.
ಪ್ರಭಾರ ಮುಖ್ಯ ಶಿಕ್ಷಕಿ ವೀಣಾ ಕುಮಾರಿ ಸ್ವಾಗತಿಸಿದರು, ಸಹಶಿಕ್ಷಕಿ ಸುಶೀಲ ಪ್ರಸ್ತಾವನೆಗೈದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಹಶಿಕ್ಷಕಿ ಪ್ರೆಸಿಲ್ಲಾ ವಂದಿಸಿದರು.
Next Story





