Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ: ಡೆಂಗ್ ರೋಗಿಗಳು ಆಸ್ಪತ್ರೆಯಲ್ಲಿ,...

ಕಡಬ: ಡೆಂಗ್ ರೋಗಿಗಳು ಆಸ್ಪತ್ರೆಯಲ್ಲಿ, ಮುಖ್ಯ ವೈದ್ಯಾಧಿಕಾರಿ ರಜೆಯಲ್ಲಿ

ಮುಗಿಯದ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ಸಮಸ್ಯೆ

ವಾರ್ತಾಭಾರತಿವಾರ್ತಾಭಾರತಿ11 Jun 2016 4:50 PM IST
share
ಕಡಬ: ಡೆಂಗ್ ರೋಗಿಗಳು ಆಸ್ಪತ್ರೆಯಲ್ಲಿ, ಮುಖ್ಯ ವೈದ್ಯಾಧಿಕಾರಿ ರಜೆಯಲ್ಲಿ

ಕಡಬ, ಜೂ.11. ಮಳೆಗಾಲ ಆರಂಭವಾಗುತ್ತಿದ್ದಂತೆ ಜಿಲ್ಲೆಯ ಹಲವೆಡೆ ಡೆಂಗ್ ಜ್ವರದ ಬಾಧೆ ತೀವ್ರಗೊಂಡಿದ್ದು, ಕಡಬ ಪರಿಸರವೂ ಹೊರತಾಗಿಲ್ಲ.

ಕಡಬ ಸಮುದಾಯ ಆರೋಗ್ಯ ಕೇಂದ್ರವು ಕಡಬ, ಕೋಡಿಂಬಾಳ, ಕುಟ್ರುಪ್ಪಾಡಿ, ನೂಜಿಬಾಳ್ತಿಲ, ಬಲ್ಯ, ಮರ್ಧಾಳ, 102 ನೆಕ್ಕಿಲಾಡಿ, ಐತ್ತೂರು ಕೊಣಾಜೆ, ಕೊಂಬಾರು, ಬಿಳಿನೆಲೆ ಗ್ರಾಮ ಪಂಚಾಯತ್‌ಗಳನ್ನೊಳಗೊಂಡ ಕಾರ್ಯ ವ್ಯಾಪ್ತಿಯನ್ನು ಹೊಂದಿದ್ದು, ಪರಿಸರದ ನೂರಾರು ರೋಗಿಗಳು ಈ ಆಸ್ಪತ್ರೆಯನ್ನು ಅವಲಂಬಿಸಿದ್ದಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಪ್ರಾರಂವಾಗಿರುವ ಡೆಂಗ್  ಜ್ವರದಿಂದಾಗಿ ಇದೇ ಆಸ್ಪತ್ರೆಯನ್ನು ನಂಬಿಕೊಂಡು ಅದೆಷ್ಟೋ ರೋಗಿಗಳು ಆಸ್ಪತ್ರೆಗೆ ಆಗಮಿಸಿದರೆ, ವೈದ್ಯಾಧಿಕಾರಿಗಳಿಲ್ಲ ಎಂಬ ಮಾತು ಕೇಳಿ ರೋಗಿಗಳು ಸೇರಿದಂತೆ ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿ ವರ್ಗಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿರುವ ಈ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರು, ಶಿಶು ತಜ್ಞರು ಸೇರಿದಂತೆ 4 ಮಂದಿ ವೈದ್ಯಾಧಿಕಾರಿಗಳು, ಓರ್ವ ದಂತ ವೈದ್ಯರು ಹೀಗೆ ಒಟ್ಟು 34 ಹುದ್ದೆಗಳು ಮಂಜೂರುಗೊಂಡಿದ್ದು, ಆದರೆ ಇಲ್ಲಿ ಓರ್ವ ಮಹಿಳಾ ವೈದ್ಯಾಧಿಕಾರಿ ಸೇರಿದಂತೆ ಒಟ್ಟು 17 ಸಿಬ್ಬಂದಿ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. 5 ಮಂದಿ ಸ್ಟಾಫ್ ನರ್ಸ್‌ಗಳು ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದಾರೆ.

ಈ ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ತ್ರಿಮೂರ್ತಿಯವರನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾಯಿಸಲಾಗಿದ್ದು, ಇದೀಗ ಮಹಿಳಾ ವೈದ್ಯಾಧಿಕಾರಿ ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಾರದಲ್ಲಿ ನಾಲ್ಕು ದಿನ ಪಕ್ಕದ ಆಸ್ಪತ್ರೆಗಳಿಂದ ಆದ್ಯತೆ ಮೇರೆಗೆ ಹಲವು ವೈದ್ಯರು ಭೇಟಿ ನೀಡುತ್ತಿದ್ದರೂ ಜೂನ್ 1ರಂದು ಸ್ಟಾಫ್ ನರ್ಸ್ ಹಾಗೂ ಗುಮಾಸ್ತ ಮಾತ್ರ ಆಸ್ಪತ್ರೆಯಲ್ಲಿ ರೋಗಿಗಳ ಶುಶ್ರೂಷಣೆಯಲ್ಲಿ ನಿರತರಾಗಿದ್ದರು. ಹಲವು ಗ್ರಾಮಗಳಿಗೆ ಹೊಂದಿಕೊಂಡಿರುವ 34 ಹುದ್ದೆಗಳಿರಬೇಕಾದ ಒಂದು ಸಮುದಾಯ ಆಸ್ಪತ್ರೆಯಲ್ಲಿ ಕೇವಲ 2 ಸಿಬ್ಬಂದಿ ಕರ್ತವ್ಯ ನಿರ್ವಹಿಸುವುದಾದರೆ ಆರೋಗ್ಯ ಇಲಾಖೆಯ ಬೇಜವಾಬ್ದಾರಿಯ ಬಗ್ಗೆ ವಿಮರ್ಶಿಸಬೇಕಾಗುತ್ತದೆ. ಡೆಂಗ್ ಪೀಡಿತ ಅದೆಷ್ಟೋ ರೋಗಿಗಳು ಆಗಮಿಸಿದಾಗ ಇರುವ ಎರಡು ಸಿಬ್ಬಂದಿ ಎಲ್ಲವನ್ನೂ ನಿಭಾಯಿಸಬೇಕೆನ್ನುವುದು ಸುಲಭದ ಮಾತಲ್ಲ ಎನ್ನುವ ಮಾತುಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ.

ಇಂತಹ ಸ್ಥಿತಿಯಲ್ಲೂ ಅತಿಥಿ ವೈದ್ಯಾಧಿಕಾರಿಗಳು ಸೇರಿದಂತೆ ವೈದ್ಯಾಧಿಕಾರಿ ರಜೆ ಮಾಡಿರುವುದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ಹಲವು ರೋಗಿಗಳು ನೆಲ್ಯಾಡಿ ಸೇರಿದಂತೆ ಪುತ್ತೂರು ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಮರ್ಪಕ ಚಿಕಿತ್ಸೆಗೆ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿ ಲಭ್ಯವಿಲ್ಲದುದರಿಂದಾಗಿ ರೋಗಿಗಳು ಪರದಾಡುವಂತಾಗಿದೆ.

ಔಷಧಗಳು ಲಭ್ಯವಾಗಿದ್ದರೂ ಸೂಕ್ತ ಚಿಕಿತ್ಸೆ ಮಾತ್ರ ಮರೀಚಿಕೆಯಾಗಿದೆ. 30 ಹಾಸಿಗೆಗಳಿರಬೇಕಾದಲ್ಲಿ ಕೇವಲ 6 ಹಾಸಿಗೆಗಳಿದ್ದು, ರೋಗಿಗಳು ಹೊರಗಡೆ ಕುಳಿತುಕೊಳ್ಳಲು ಹಾಕಿರುವ ಬೆಂಚುಗಳ ಮೇಲೆ ಮಲಗಬೇಕಾದ ಸನ್ನಿವೇಶ ಎದುರಾಗಿದೆ. ಗ್ರಾಮೀಣ ಪ್ರದೇಶದ ಬಡ ಜನರೇ ಹೆಚ್ಚಾಗಿ ಸರಕಾರಿ ಆಸ್ಪತ್ರೆಯನ್ನು ಅವಲಂಬಿಸಿದ್ದು, ಇನ್ನಾದರೂ ಬಡ ಜನರ ಜೀವನದ ಜತೆ ಚೆಲ್ಲಾಟವಾಡುವುದನ್ನು ಅಧಿಕಾರಿಗಳು ಸೇರಿದಂತೆ ಆಡಳಿತ ವರ್ಗ ಕೊನೆಗೊಳಿಸಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕಡಬ ವೈದ್ಯಾಧಿಕಾರಿಯವರನ್ನು ಸಂಪರ್ಕಿಸಿದ್ದು, ಬೇರೆ ವೈದ್ಯರಿಲ್ಲದ ಸಮಯದಲ್ಲಿ ರಜೆ ಮಾಡಬಾರದೆಂದು ಸೂಚಿಸಲಾಗಿದೆ. ಸೋಮವಾರದಂದು ಮೆಡಿಕಲ್ ಕಾಲೇಜಿನವರ ಸಭೆ ಕರೆಯಲಾಗಿದ್ದು, ತಾತ್ಕಾಲಿಕ ನೆಲೆಯಲ್ಲಾದರೂ ವೈದ್ಯರನ್ನು ನೇಮಕ ಮಾಡಲು ಪ್ರಯತ್ನಿಸುತ್ತೇನೆ.

-ಡಾ.ರಾಮಕೃಷ್ಣ ರಾವ್, ಜಿಲ್ಲಾ ಆರೋಗ್ಯಾಧಿಕಾರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X