Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎತ್ತಿನಹೊಳೆ ಯೋಜನೆ: ಮೊಯ್ಲಿಯಿಂದ...

ಎತ್ತಿನಹೊಳೆ ಯೋಜನೆ: ಮೊಯ್ಲಿಯಿಂದ ನ್ಯಾಯಾಂಗ ನಿಂದನೆ ಆರೋಪ

ಕ್ಷಮೆಯಾಚಿಸದಿದ್ದರೆ ಪ್ರಕರಣ ದಾಖಲಿಸುವ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ11 Jun 2016 6:09 PM IST
share
ಎತ್ತಿನಹೊಳೆ ಯೋಜನೆ: ಮೊಯ್ಲಿಯಿಂದ ನ್ಯಾಯಾಂಗ ನಿಂದನೆ ಆರೋಪ

 ಮಂಗಳೂರು, ಜೂ.11: ಎತ್ತಿನಹೊಳೆ ಯೋಜನೆಗೆ ಇದ್ದ ಎಲ್ಲ ಅಡೆತಡೆ ನಿವಾರಣೆಯಾಗಿದೆ ಎಂದು ಚಿಕ್ಕಬಳ್ಳಾಪುರ ಸಂಸದ ವೀರಪ್ಪಮೊಯ್ಲಿ ಹಾಗೂ ಕರ್ನಾಟಕ ನೀರಾವರಿ ನಿಗಮ(ಕೆಎನ್‌ಎನ್‌ಎಲ್)ದ ಮುಖ್ಯ ಇಂಜಿನಿಯರ್ ಹೇಳುವ ಮೂಲಕ ನ್ಯಾಯಾಂಗ ನಿಂದನೆಗೈದಿದ್ದು, ಈ ಬಗ್ಗೆ 15 ದಿನಗಳೊಳಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ ದೂರು ದಾಖಲಿಸುವುದಾಗಿ ಪಶ್ಚಿಮ ಘಟ್ಟ ಸಂರಕ್ಷಣಾ ಸಮಿತಿ ಸಂಚಾಲಕ ಬೆಂಗಳೂರಿನ ಕೆ.ಎನ್.ಸೋಮಶೇಖರ್ ಹೇಳಿದ್ದಾರೆ.

ಶನಿವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆಯಾಗಲೀ, ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದಿಂದಾಗಲೀ ಅನುಮತಿ ದೊರಕಿಲ್ಲ. ನ್ಯಾಯಾಧಿಕರಣವು ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದೆ. ವಿಚಾರಣೆ ಪೂರ್ಣಗೊಳ್ಳುವವರೆಗೆ ಯಥಾಸ್ಥಿತಿಯನ್ನು ಕಾಪಾಡುವಂತೆ ಸೂಚಿಸಿದೆ. ಆದರೆ ಎತ್ತಿನಹೊಳೆ ಪ್ರದೇಶದಲ್ಲಿ ಕಾಮಗಾರಿ ಮುಂದುವರಿದಿದೆ. ಈ ನಡುವೆ, ವೀರಪ್ಪ ಮೊಯ್ಲಿ ಹಾಗೂ ಮುಖ್ಯ ಇಂಜಿನಿಯರ್ ವೇಣುಗೋಪಾಲ್ ಅವರು ಕಾಮಗಾರಿ ನಡೆಸಲು ಅನುಮತಿ ಸಿಕ್ಕಿದೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ಹೀಗೆ ಬಯಲುಸೀಮೆಯ ಜನತೆಯನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಇದಕ್ಕಾಗಿ ಕ್ಷಮೆ ಕೋರುವಂತೆ ವಕೀಲರ ಮೂಲಕ 15 ದಿನಗಳ ಗಡುವು ವಿಧಿಸಿ ಇವರಿಬ್ಬರಿಗೆ ನೋಟಿಸ್ ನೀಡಲಾಗಿದೆ ಎಂದು ಅವರು ಹೇಳಿದರು.

ಈ ವರ್ಷ ಜನವರಿಯಲ್ಲಿ ಎನ್‌ಜಿಟಿಯಲ್ಲಿ ಎತ್ತಿನಹೊಳೆ ವಿಚಾರ ವಿಚಾರಣೆಗೆ ಬಂದಾಗ, ಫೆಬ್ರವರಿಯಲ್ಲಿ ನ್ಯಾಯಾಲಯವು ಯಥಾಸ್ಥಿಯನ್ನು ಕಾಯ್ದುಕೊಳ್ಳುವಂತೆ ಸೂಚಿಸಿತ್ತು. ಆಗ ನಾನು ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಪುರುಷೋತ್ತ ಮ ಚಿತ್ರಾಪುರ, ಯತಿರಾಜು ಮತ್ತು ಕಿಶೋರ್ ಹಾಸನ ಸಲ್ಲಿಸಿದ ಅರ್ಜಿಯನ್ನು ಒಟ್ಟಿಗೆ ವಿಚಾರಣೆ ನಡೆಸುತ್ತಿದೆ. ಮುಂದಿನ ವಿಚಾರಣೆಯನ್ನು ಜು.4ಕ್ಕೆ ಮುಂದೂಡಲಾಗಿದೆ.

ಈ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿರುವುದಾಗಿ ಅರ್ಜಿದಾರರು ಶಂಕೆ ವ್ಯಕ್ತ ಪಡಿಸಿದ್ದರು. ಅಲ್ಲದೆ, ಈ ಯೋಜನೆಯಿಂದ ಬಯಲುಸೀಮೆಗೆ 24 ಟಿಎಂಸಿ ನೀರು ಪೂರೈಸಲು ಸಾಧ್ಯವಾಗದು ಎಂಬುದನ್ನು ನ್ಯಾಯಾಲಯಕ್ಕೆ ಮನದಟ್ಟು ಮಾಡಲಾಗಿತ್ತು. ನ್ಯಾಯಾಧೀಕರಣದಿಂದ ಆದೇಶ ಇನ್ನೂ ಪ್ರಕಟವಾಗದಿದ್ದರೂ ಎನ್‌ಜಿಟಿಯಿಂದ ಅನುಮತಿ ನೀಡಿದೆ ಎನ್ನುವುದು ಅಕ್ಷಮ್ಯ ಅಪರಾಧ ಎಂದವರು ಹೇಳಿದರು.

ಸಹ್ಯಾದ್ರಿ ಸಂಚಯದ ಸಂಚಾಲಕ ದಿನೇಶ್ ಹೊಳ್ಳ, ಸದಸ್ಯರಾದ ಶಶಿಧರ ಶೆಟ್ಟಿ, ಕಟೀಲು ದಿನೇಶ್ ಪೈ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X