ದಲಿತ ದೌರ್ಜನ್ಯ ಪ್ರಕರಣದ ಕುರಿತಂತೆ ಜಿಲ್ಲಾಡಳಿತದ ನಿರ್ಲಕ್ಷ: ಲೋಲಾಕ್ಷ ಆರೋಪ

ಮಂಗಳೂರು, ಜೂ.11: ಬೆಳ್ತಂಗಡಿಯ ದಲಿತ ಕುಟುಂಬದ ಮೇಲೆ ದೌರ್ಜನ್ಯ ನಡೆದರೂ ಜಿಲ್ಲಾಡಳಿತ ನಿರ್ಲಕ್ಷ ವಹಿಸಿದೆ ಎಂದು ಸಾಮಾಜಿಕ ಕಾರ್ಯಕರ್ತ ಲೋಲಾಕ್ಷ ಸುದ್ದಿಗೋಷ್ಠಿಯಲ್ಲಿಂದು ಆರೋಪಿಸಿದ್ದಾರೆ.
ಬೆಳ್ತಂಗಡಿಯ ಬಾಬು ಎಂಬವರ ಕುಟುಂಬದ ಮೇಲೆ ಎ.17ರಂದು ದೌರ್ಜನ್ಯ ನಡೆದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಈವರೆಗೆ ಆರೋಪಿಗಳ ಬಂಧನವಾಗಿಲ್ಲ. ನೊಂದ ದಲಿತ ಕುಟುಂಬಕ್ಕೆ ಸೂಕ್ತ ಪರಿಹಾರ ದೊರೆತಿಲ್ಲ. ಸಂತ್ರಸ್ತ ಕುಟುಂಬದ ಸದಸ್ಯರು ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒಗೂ ಲಿಖಿತ ದೂರು ನೀಡಿದ್ದಾರೆ. ಆದರೆ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತರಾದ ಬಾಬು ಹಾಗೂ ಅವರ ಪತ್ನಿ ಸುಂದರಿ ಉಪಸ್ಥಿತದ್ದರು.
Next Story





