Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಇಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ

ಇಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ

ಸಮೀರ್ ದಳಸನೂರುಸಮೀರ್ ದಳಸನೂರು11 Jun 2016 11:18 PM IST
share
ಇಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ

ದೇಶದಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ನಿಷೇಸಲಾಗಿದ್ದು, 14 ವರ್ಷದೊಳಗಿನ ಮಕ್ಕಳನ್ನು ಬಾಲ ಕಾರ್ಮಿಕರು ಎಂದು ಘೋಷಿಸಲಾಗಿದೆ. ಅಲ್ಲದೆ, ಬಾಲ್ಯ ಮಕ್ಕಳನ್ನು ದುಡಿಸಿಕೊಳ್ಳುವುದು ಅಪರಾಧವಾಗಿದೆ. 

ಪ್ರತೀ ವರ್ಷ ವಿಶ್ವ ಬಾಲ ಕಾರ್ಮಿಕ ವಿರೋ ದಿನ ಬರುತ್ತದೆ. ಈ ಬಗ್ಗೆ ಎಲ್ಲರೂ ಮಾತನಾಡುತ್ತಾರೆ, ಬಳಿಕ ಸುಮ್ಮನಾಗುತ್ತಾರೆ.
 ಸಮಾಜ ಬದಲಾವಣೆ ಆಗಬೇಕು ಎಂದು ಭಾಷಣ ಮಾಡಲು ಸಾಧ್ಯವಾಗದಿದ್ದರೂ ಸ್ನೇಹಿತರ ಜತೆಯಾದರೂ ಹಲುಬುತ್ತೇವೆ. ಆದರೆ, ಬಾಲ್ಯದಲ್ಲಿ ತಮ್ಮ ಜೊತೆಯ ಮಕ್ಕಳೊಂದಿಗೆ ಆಟವಾಡುತ್ತಾ ಶಾಲೆಯತ್ತ ಹೋಗಬೇಕಾದ, ತುಂಟಾಟವಾಡುತ್ತಾ ಬೆಳೆಯಬೇಕಾದ ಮಕ್ಕಳು ದುರಾಸೆ, ನಿಷ್ಕರುಣೆಯಿಂದ ಕೂಡಿದ ಧನಿಕರು ಮತ್ತು ವ್ಯಾಪಾರಿಗಳ ಕಪಿಮುಷ್ಟಿಯಲ್ಲಿ ಸಿಲುಕಿ ಬಾಲ ಕಾರ್ಮಿಕರಾಗಿ ಇಂದಿಗೂ ನಲುಗುತ್ತಿರುವುದು ಬಹುದೊಡ್ಡ ವಿಪರ್ಯಾಸವೇ ಸರಿ.

ಅತೀ ಕಡಿಮೆ ಹಣದಲ್ಲಿ ಅಕವಾಗಿ ದುಡಿಸಿಕೊಳ್ಳಬಹುದು ಎಂಬ ದುರುದ್ದೇಶದಿಂದ ಮಾಲಕರು ಇಂತಹ ಬಾಲ ಕಾರ್ಮಿಕರನ್ನು ನೇಮಿಸಿಕೊಂಡು ಅವರನ್ನು ಬೇಕರಿ, ಗ್ಯಾರೇಜ್, ಹೊಟೇಲ್, ಕಾರ್ಖಾನೆಗಳು, ಸಿರಿವಂತರ ಮನೆಗಳಲ್ಲಿ ಕೆಲಸದಾಳುಗಳಾಗಿ, ಕಟ್ಟಡ ನಿರ್ಮಾಣ ಕಾರ್ಮಿಕರಾಗಿ, ಕೃಷಿ ಜಮೀನಿನಲ್ಲಿ ಕೂಲಿಗಳಾಗಿ, ಅಂಗಡಿ ಮಳಿಗೆಗಳಲ್ಲಿ, ಗಾರ್ಮೆಂಟ್ಸ್‌ಗಳಲ್ಲಿ ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯಕ್ಕೆ ಕಷ್ಟವಾಗುವ ಕೆಲಸಗಳನ್ನು ಮಾಡಿಸುತ್ತಿದ್ದು, ಈ ಮಕ್ಕಳು ಅನುಭವಿಸುವ ಕಷ್ಟ ಇಂದಿಗೂ ಯಾರಿಗೂ ತಿಳಿದಿಲ್ಲ.

ಇಂತಹ ದುರಂತ ವ್ಯವಸ್ಥೆಯನ್ನು ತಡೆಯಲು ಹಾಗೂ ಅಗತ್ಯ ರೀತಿಯಲ್ಲಿ ಜಾಗೃತಿ ಮೂಡಿಸಲು ವಿಶ್ವ ಕಾರ್ಮಿಕ ಸಂಘಟನೆಯು 2002ರಿಂದ ವಿಶ್ವದ ಎಲ್ಲೆಡೆ ಶ್ರಮಿಸುತ್ತಿರುವ ಬಾಲ ಕಾರ್ಮಿಕರ ರಕ್ಷಣೆಗಾಗಿ ಜಗತ್ತಿನ ಗಮನ ಸೆಳೆಯುವ ಹಿನ್ನೆಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ದಿನಾಚರಣೆಯನ್ನು ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಜೂನ್ 12 ರಂದು 'ಬಾಲ ಕಾರ್ಮಿಕ ವಿರೋ ದಿನ'ವನ್ನಾಗಿ ಆಚರಿಸಲು ಘೋಷಿಸಿದೆ.

ಬಾಲಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ಈ ದುಷ್ಟ ವ್ಯವಸ್ಥೆಯಿಂದ ಹೊರಬಂದು ತಮ್ಮ ಹಕ್ಕುಗಳ ಕುರಿತು ಜಾಗೃತಿ ಹೊಂದಿ, ದೇಶದ ಉತ್ತಮ ನಾಗರಿಕರಾಗಲಿ ಎಂಬುದೇ ಇದರ ಉದ್ದೇಶ. ಅರ್ಹತೆಗಿಂತ ಕಡಿಮೆ ವಯಸ್ಸಿನ ಬಾಲಕರನ್ನು ದುಡಿಸಿಕೊಳ್ಳುವುದು ಬಾಲ ಕಾರ್ಮಿಕ ಪದ್ಧತಿಯಾಗುತ್ತದೆ. ಬಾಲ ಕಾರ್ಮಿಕರಿಂದ ಕೆಲಸ ಮಾಡಿಸಿಕೊಳ್ಳುವುದು ಅಪರಾಧ ಎಂದು ಕಾನೂನು ಹೇಳಿದೆ.

ಭಾರತ, ದಕ್ಷಿಣ ಆಫ್ರಿಕಾ ಸೇರಿದಂತೆ ಜಗತ್ತಿನ 215 ಮಿಲಿಯನ್‌ನಷ್ಟು ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ ಎಂದು ಕೆಲವು ಸಮೀಕ್ಷೆಗಳು ಹೇಳುತ್ತವೆ., ಇಂತಹ ಮಕ್ಕಳು ತಮ್ಮ ಶಾಲಾ ವಿದ್ಯಾಭ್ಯಾಸದಿಂದ, ಆಟವಾಡುವುದರಿಂದ ವಂಚಿತರಾಗಿದ್ದು, ಬಹಳಷ್ಟು ಮಂದಿ ಸೂಕ್ತ ಪೋಷಕಾಂಶದಿಂದ ಕೂಡಿದ ಆಹಾರ ಸೇವನೆಯಿಂದ ವಂಚಿತರಾಗಿದ್ದಾರೆ ಎಂದು ಗೊತ್ತಾಗಿದೆ.

ದೇಶದಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ನಿಷೇಸಲಾಗಿದ್ದು, 14 ವರ್ಷದೊಳಗಿನ ಮಕ್ಕಳನ್ನು ಬಾಲ ಕಾರ್ಮಿಕರು ಎಂದು ಘೋಷಿಸಲಾಗಿದೆ. ಮಕ್ಕಳನ್ನು ದುಡಿಸಿಕೊಳ್ಳುವುದು ಅಪರಾಧವಾಗಿದೆ. ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಸಂಸ್ಥೆಯ ಮಾಲಕರಿಗೆ 3ರಿಂದ 6 ತಿಂಗಳವರೆಗೆ ಜೈಲು ಶಿಕ್ಷೆ ಹಾಗೂ 10ರಿಂದ 20 ಸಾವಿರ ರೂ.ವರೆಗೆ ದಂಡ ವಿಸುವ ಕಾನೂನಿದೆ. ಆದರೂ ಅದೆಷ್ಟೋ ಬಾಲ ಕಾರ್ಮಿಕರು ದುಡಿಯುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಕೆಲವು ಸಂಘ ಸಂಸ್ಥೆಗಳು ಸ್ವಯಂ ವಸತಿ ಶಾಲೆ ಆರಂಭಿಸುವ ಮೂಲಕ ಬಾಲ ಕಾರ್ಮಿಕರಿಗೆ ಉಚಿತ ಊಟ, ವಸತಿ, ಶಿಕ್ಷಣ ಪೂರೈಸಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಆದರೆ, ನೂರಕ್ಕೆ ನೂರರಷ್ಟು ಬಾಲ ಕಾರ್ಮಿಕ ಪದ್ಧತಿ ತಡೆಯಲು ಎಲ್ಲರಲ್ಲೂ ಜಾಗೃತಿ ಮೂಡಬೇಕು ಜೊತೆಗೆ ಪ್ರಜ್ಞಾವಂತ ನಾಗರಿಕರು ಬಾಲ ಕಾರ್ಮಿಕರಿಗೆ ಸಹಾಯ ಹಸ್ತ ಚಾಚಿ ಶಿಕ್ಷಣ ನೀಡಲು ಮುಂದಾದರೆ ಮಕ್ಕಳ ಬಾಲ್ಯ ಪ್ರಗತಿಯತ್ತ ಸಾಗಲಿದೆ.

share
ಸಮೀರ್ ದಳಸನೂರು
ಸಮೀರ್ ದಳಸನೂರು
Next Story
X