Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯಸಭೆ: 27 ಸ್ಥಾನಗಳ ಫಲಿತಾಂಶ -...

ರಾಜ್ಯಸಭೆ: 27 ಸ್ಥಾನಗಳ ಫಲಿತಾಂಶ - ರಾಜಸ್ಥಾನ ಬಿಜೆಪಿ ಕ್ಲೀನ್‌ಸ್ವೀಪ್, ಉ.ಪ್ರ.ದಲ್ಲಿ ಎಸ್ಪಿ ಜಯಭೇರಿ

ವಾರ್ತಾಭಾರತಿವಾರ್ತಾಭಾರತಿ11 Jun 2016 11:51 PM IST
share
ರಾಜ್ಯಸಭೆ: 27 ಸ್ಥಾನಗಳ ಫಲಿತಾಂಶ - ರಾಜಸ್ಥಾನ ಬಿಜೆಪಿ ಕ್ಲೀನ್‌ಸ್ವೀಪ್, ಉ.ಪ್ರ.ದಲ್ಲಿ ಎಸ್ಪಿ ಜಯಭೇರಿ

ನಾಯ್ಡು, ಸಿಬಲ್, ನಖ್ವಿ, ಅಕ್ಬರ್‌ಗೆ ಜಯ

ಹೊಸದಿಲ್ಲಿ, ಜೂ.11: ದೇಶಾದ್ಯಂತ ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಲ್ಲಿ ಶನಿವಾರ ರಾಜ್ಯಸಭೆಯ 27 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು, ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಸೇರಿದಂತೆ ಪ್ರಮುಖ ಅಭ್ಯರ್ಥಿಗಳು ಗೆಲುವು ಸಾಧಿಸುವಲ್ಲಿ ಸಫಲರಾಗಿದ್ದಾರೆ. ರಾಜಸ್ಥಾನದಲ್ಲಿ ಬಿಜೆಪಿಯು ಎಲ್ಲಾ ನಾಲ್ಕು ಸ್ಥಾನಗಳನ್ನು ಗಳಿಸಿದ್ದು, ಪ್ರತಿಪಕ್ಷ ಕಾಂಗ್ರೆಸ್ ಭಾರೀ ಮುಖಭಂಗವುಂಟು ಮಾಡಿದೆ.

ರಾಜ್ಯಸಭೆಯ ಒಟ್ಟು 57 ಸ್ಥಾನಗಳು ಖಾಲಿಬಿದ್ದಿದ್ದು, ಈ ಪೈಕಿ 27 ಸ್ಥಾನಗಳಿಗಷ್ಟೇ ಚುನಾವಣೆ ನಡೆದಿತ್ತು. ಉಳಿದ 30 ಮಂದಿ ಅಭ್ಯರ್ಥಿಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವರಾದ ಸುರೇಶ್ ಪ್ರಭು ಹಾಗೂ ಪಿಯೂಶ್ ಗೋಯಲ್, ಖ್ಯಾತ ನ್ಯಾಯವಾದಿ ರಾಮ್‌ಜೇಠ್ಮಲಾನಿ, ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಪುತ್ರಿ ಮಿಸಾ ಭಾರತಿ ಹಾಗೂ ಮಾಜಿ ಜೆಡಿಯು ಅಧ್ಯಕ್ಷ ಶರದ್ ಯಾದವ್ ಅವಿರೋಧ ವಾಗಿ ಆಯ್ಕೆಯಾದ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

ರಾಜಸ್ಥಾನದಲ್ಲಿ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಸೇರಿದಂತೆ ಬಿಜೆಪಿಯ ಎಲ್ಲಾ ನಾಲ್ಕು ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಪಕ್ಷದ ರಾಜ್ಯಘಟಕದ ಉಪಾಧ್ಯಕ್ಷ ಓಂಪ್ರಕಾಶ್ ಮಾಥುರ್, ಹರ್ಷವರ್ಧನ್‌ಸಿಂಗ್ ಹಾಗೂ ರಾಮ್ ಕುಮಾರ್ ವರ್ಮಾ ಗೆದ್ದ ಇತರ ಮೂವರು ಬಿಜೆಪಿ ಅಭ್ಯರ್ಥಿಗಳಾಗಿದ್ದಾರೆ.

ಇಂದು ನಡೆದ ಚುನಾವಣೆಯಲ್ಲಿ ಜಾರ್ಖಂಡ್‌ನ ಎರಡೂ ರಾಜ್ಯಸಭಾ ಸ್ಥಾನಗಳು ಬಿಜೆಪಿಯ ಪಾಲಾಗಿದೆ. ಅಲ್ಲಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹಾಗೂ ಬಿಜೆಪಿ ಮುಖಂಡ ಮಹೇಶ್ ಪೊದ್ದಾರ್ ಗೆಲುವಿನ ನಗೆಬೀರಿದ್ದಾರೆ. ಉತ್ತರಾಖಂಡದಲ್ಲಿ ಕಾಂಗ್ರೆಸ್‌ನ ಪ್ರದೀಪ್ ತಾಮ್ತಾ ಗೆಲುವು ಸಾಧಿಸಿದ್ದಾರೆ.
ಈ ಸಲದ ರಾಜ್ಯಸಭಾ ಚುನಾವಣೆಯು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರಕ್ಕೆ ಅತ್ಯಂತ ಮಹತ್ವದ್ದಾಗಿದೆ. ರಾಜ್ಯಸಭೆಯಲ್ಲಿ ಅಲ್ಪಮತವನ್ನು ಹೊಂದಿರುವುದರಿಂದ ಸರಕಾರಕ್ಕೆ ಪ್ರತಿಪಕ್ಷಗಳ ಬೆಂಬಲವಿಲ್ಲದೆ ಮಸೂದೆಗಳನ್ನು ಅಂಗೀಕರಿಸಲು ಸಾಧ್ಯವಾಗುತ್ತಿಲ್ಲ..

ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ನಾಯಕ ಕಪಿಲ್‌ಸಿಬಲ್ ಅವರು, ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಪ್ರೀತಿ ಮಹಾಪಾತ್ರ ಅವರನ್ನು ಪರಾಭವಗೊಳಿಸಿದ್ದಾರೆ. ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷವು ರಾಜ್ಯಸಭಾ ಸೀಟುಗಳಿಕೆಯಲ್ಲಿ ಸಿಂಹಪಾಲು ಪಡೆದಿದ್ದು, ಅದರ ಎಲ್ಲಾ ಏಳು ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ.

ಬಹಳ ಸಮಯದ ಬಳಿಕ ಪಕ್ಷದ ತೆಕ್ಕೆಗೆ ಮರಳಿರುವ ಅಮರ್‌ಸಿಂಗ್, ಬೇನಿಪ್ರಸಾದ್ ವರ್ಮಾ, ಕುಮಾರ್ ರೇವತಿ ರಮಣ್ ಸಿಂಗ್, ವಿಶ್ವಂಬರ್ ಪ್ರಸಾದ್ ನಿರ್ಶಾದ್, ಸುಖ್‌ರಾಮ್ ಸಿಂಗ್ ಯಾದವ್, ಸಂಜಯ್ ಸೇಠ್ ಹಾಗೂ ಸುರೇಂದ್ರ ನಾಗರ್ ವಿಜಯಗಳಿಸಿದ ಎಸ್ಪಿ ಅಭ್ಯರ್ಥಿಗಳಾಗಿದ್ದಾರೆ. ಸತೀಶ್‌ಚಂದ್ರ ಹಾಗೂ ಅಶೋಕ್ ಸಿದ್ಧಾಥ್ (ಬಿಎಸ್‌ಪಿ) ಹಾಗೂ ಶಿವಪ್ರತಾಪ್ ಶುಕ್ಲಾ (ಬಿಜೆಪಿ) ಇತರ ವಿಜಯಿ ಅಭ್ಯರ್ಥಿಗಳಾಗಿದ್ದಾರೆ. ಉ.ಪ್ರ.ವಿಧಾನಸಭೆಯಲ್ಲಿ 29 ಶಾಸಕರನ್ನು ಕಾಂಗ್ರೆಸ್ ಹೊಂದಿದ್ದರೂ, ಕಪಿಲ್ ಸಿಬಲ್ ಹೊರತಾಗಿ ಅದರ ಉಳಿದೆಲ್ಲಾ ಅಭ್ಯರ್ಥಿಗಳು ಪರಾಭವ ಗೊಂಡಿರುವುದು ಪಕ್ಷಕ್ಕೆ ಭಾರೀ ಹಿನ್ನಡೆಯುಂಟು ಮಾಡಿದೆ.

ಈ ಮಧ್ಯೆ ಉತ್ತರಪ್ರದೇಶದ ಬಿಜೆಪಿ ಶಾಸಕ ವಿಜಯ್ ಬಹಾದೂರ್ ಸಮಾಜವಾದಿ ಪಕ್ಷದ ಪರವಾಗಿ ಅಡ್ಡಮತದಾನ ಮಾಡಿದ್ದಾರೆ. ಮುಖ್ಯ ಮಂತ್ರಿ ಅಖಿಲೇಶ್‌ಯಾದವ್ ರಾಜ್ಯದಲ್ಲಿ ನಡೆಸಿರುವ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿ ತಾನು ಅಡ್ಡ ಮತದಾನ ಮಾಡಿದ್ದು, ಯಾವುದೇ ತ್ಯಾಗಕ್ಕೂ ಸಿದ್ಧನಿರುವುದಾಗಿ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಬಿಜೆಪಿ ನಾಯಕರಾದ ಎಂ.ಜೆ.ಅಕ್ಬರ್ ಹಾಗೂ ಅನಿಲ್ ಮಾಧವ್ ದವೆ ಜಯಗಳಿಸಿದ್ದಾರೆ.

  ಹರ್ಯಾಣದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ, ಝೀ ಮಾಧ್ಯಮ ಸಮೂಹದ ವರಿಷ್ಠ ಸುಭಾಶ್‌ಚಂದ್ರ ಅಚ್ಚರಿಯ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ 14 ಶಾಸಕರ ಮತಗಳು ಅಸಿಂಧುವಾದ ಹಿನ್ನೆಲೆಯಲ್ಲಿ ಸುಭಾಶ್‌ಚಂದ್ರಗೆ ಗೆಲುವು ಸಾಧ್ಯವಾಗಿದೆ. ಹರ್ಯಾಣದ ಇನ್ನೊದು ರಾಜ್ಯಸಭಾ ಸ್ಥಾನವನ್ನು ಕೇಂದ್ರ ಸಚಿವ, ಬಿಜೆಪಿಯ ಚೌಧುರಿ ಬೀರೇಂದ್ರ ಸಿಂಗ್ ಗೆದ್ದುಕೊಂಡಿದ್ದಾರೆ.

ಉತ್ತರಪ್ರದೇಶದ 11 ಸ್ಥಾನಗಳಿಗೆ, ಕರ್ನಾಟಕ ಹಾಗೂ ರಾಜಸ್ಥಾನಗಳಲ್ಲಿ ತಲಾ 4, ಮಧ್ಯಪ್ರದೇಶದಲ್ಲಿ 3, ಹರ್ಯಾಣ ಹಾಗೂ ಜಾರ್ಖಂಡ್‌ನಲ್ಲಿ ತಲಾ ಎರಡು ಹಾಗೂ ಉತ್ತರಾಖಂಡದ ಒಂದು ಸ್ಥಾನಕ್ಕೆ ಶನಿವಾರ ಚುನಾವಣೆ ನಡೆದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X