ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾಗಿ ಮಟ್ಟಾರು ರತ್ನಾಕರ ಹೆಗ್ಡೆ

ಉಡುಪಿ, ಜೂ.11: ಉಡುಪಿ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರಾಗಿ ಹಾಲಿ ಉಪಾಧ್ಯಕ್ಷ ಹಾಗೂ ಜಿಲ್ಲಾ ವಕ್ತಾರ ಮಟ್ಟಾರು ರತ್ನಾಕರ ಹೆಗ್ಡೆ ನೇಮಕಗೊಂಡಿದ್ದಾರೆ.
ಜೆಡಿಎಸ್‌ನ ಹಿರಿಯ ನಾಯಕರಾಗಿದ್ದ ಮಟ್ಟಾರು,ಎಂಟು ವರ್ಷಗಳ ಹಿಂದೆಯಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಅವಿಭಜಿತ ದ.ಕ.ಜಿಲ್ಲೆಯಲ್ಲಿ, ನಂತರ ಉಡುಪಿ ಜಿಲ್ಲೆಯಲ್ಲಿ 4 ದಶಕಗಳಿಂದ ಸಾಮಾಜಿಕವಾಗಿ, ರಾಜಕೀಯವಾಗಿ ಮತ್ತು ಧಾರ್ಮಿಕ ವಾಗಿ ಗುರುತಿಸಿ ಕೊಂಡಿರುವ ಮಟ್ಟಾರು, ಉಡುಪಿಯ ಖ್ಯಾತ ವಕೀಲರಾಗಿದ್ದು, ಉಡುಪಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ 2 ಬಾರಿ ಆಯ್ಕೆಯಾಗಿದ್ದರು.
Next Story





