ಕಾರು-ಟಿಪ್ಪರ್ ಢಿಕ್ಕಿ: ಮೂವರಿಗೆ ಗಾಯ
ಹೆಬ್ರಿ, ಜೂ.11: ಮುದ್ರಾಡಿ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿನ ತಿರುವಿನ ಬಳಿ ಜೂ.10ರಂದು ಬೆಳಗ್ಗೆ ಕಾರೊಂದು ಟಿಪ್ಪರ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಗಾಯಗೊಂಡವರನ್ನು ರಾಣಿಬೆನ್ನೂರಿನ ಸುಪುತ್ರ ಯಶವಂತಪ್ಪಮೆಡಲೇರಿ, ಪತ್ನಿ ಮಮತಾ, ಕಾರಿನ ಚಾಲಕ ಮಂಜುನಾಥ್ ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಯುನಿವರ್ಸಿಟಿ ಕಾಲೇಜಿನಲ್ಲಿ ಕಲಿಯುತ್ತಿರುವ ಮಗಳನ್ನು ಕರೆದುಕೊಂಡು ಬರುವುದಕ್ಕಾಗಿ ರಾಣಿಬೆನ್ನೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಮುದ್ರಾಡಿ ಕಡೆಯಿಂದ ಸೋಮೇಶ್ವರ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿಗೆ ಎದುರಿನಿಂದ ಢಿಕ್ಕಿ ಹೊಡೆದಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





