ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸಂಜೀವ ಮಟಂದೂರು

ಮಂಗಳೂರು, ಜೂ. 11: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಪುತ್ತೂರಿನ ಸಂಜೀವ ಮಟಂದೂರು ನೇಮಕಗೊಂಡಿದ್ದಾರೆ.
ಹಲವು ವರ್ಷಗಳಿಂದ ಬಿಜೆಪಿಯಲ್ಲಿ ತೊಡಸಿಕೊಂಡಿದ್ದ ಸಂಜೀವ ಮಟಂದೂರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಕಳೆದ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಪುತ್ತೂರಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕ್ಯಾಂಪ್ಕೋ ನಿರ್ದೇಶಕರಾಗಿ ದುಡಿದಿದ್ದ ಅವರು ಕೃಷಿಕರ ಪರವಾಗಿ ಧ್ವನಿ ಎತ್ತುತ್ತಿದ್ದರು.
Next Story





