ಕಾರ್ಕಳ: ಜೂ.13 ರಂದು ಬೈಲೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭೇಟಿ
ಕಾರ್ಕಳ, ಜೂ. 12 : ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ಅವರು ಕಾಂಗ್ರೆಸ್ ಕಾರ್ಯಕರ್ತರನ್ನು ಜೂ.13ರಂದು ಸಂಜೆ 3 ಗಂಟೆಗೆ ಬೈಲೂರು ರಾಮಮಂದಿರದಲ್ಲಿ ಭೇಟಿ ಮಾಡಲಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ, ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿ ಭಾಗವಹಿಸಲಿರುವ ಈ ಕಾರ್ಯಕ್ರಮದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಧಾಕರ್ ಎನ್. ಕೋಟ್ಯಾನ್ ಮತ್ತು ನೀರೆ ಕೃಷ್ಣ ಶೆಟ್ಟಿ ಜಂಟಿ ಪತ್ರಿಕಾ ಹೇಳಿಕೆ ಯಲ್ಲಿ ತಿಳಿಸಿದ್ದಾರೆ.
Next Story





