ಉಪ್ಪಿನಂಗಡಿ: ಅಕ್ರಮ ಮರಳುಗಾರಿಕೆ ಜಾಮೀನು
ಉಪ್ಪಿನಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಕಳೆದ ಮೇ 5ರಂದು ಉಪ್ಪಿನಂಗಡಿ ಪೊಲೀಸರು 34ನೇ ನೆಕ್ಕಿಲಾಡಿ ಜಂಕ್ಷನ್ ಬಳಿ ಅಕ್ರಮ ಮರಳು ಸಾಗಾಟದ ಎರಡು ಲಾರಿಗಳನ್ನು ವಶಪಡಿಸಿಕೊಂಡು ಲಾರಿ ಮಾಲಕ ಬೆಂಗಳೂರಿನ ನರಸರೆಡ್ಡಿ ಹಾಗೂ ಮರಳು ದಂಧೆಯ ಏಜೆಂಟ್ ಶರವಣ್ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಪೊಲೀಸರ ಬಲೆಗೆ ಬೀಳದ ಅವರಿಗೆ ಇದೀಗ ಮಂಗಳೂರು ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ. ಆರೋಪಿಗಳ ಪರವಾಗಿ ನ್ಯಾಯವಾದಿಗಳಾದ ಅನಿಲ್ ಕುಮಾರ್ ಉಪ್ಪಿನಂಗಡಿ ಹಾಗೂ ಸಂದೇಶ್ ನಟ್ಟಿಬೈಲ್ ವಾದಿಸಿದರು.
Next Story





