ಸರಣಿ ನೃತ್ಯ ಕಾರ್ಯಕ್ರಮ ಉದ್ಘಾಟನೆ

ಉಡುಪಿ, ಜೂ.12: ಪರ್ಯಾಯ ಪೇಜಾವರ ಮಠದ ಆಶ್ರಯದಲ್ಲಿ ಕೊಡವೂರು ನೃತ್ಯನಿಕೇತನ ಸಂಸ್ಥೆಯ ರಜತ ಮಹೋತ್ಸವದ ಅಂಗವಾಗಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಸರಣಿ ಕಾರ್ಯಕ್ರಮವನ್ನು ಪರ್ಯಾಯ ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ರವಿವಾರ ಉದ್ಘಾಟಿಸಿದರು.
ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ಜಿಲ್ಲಾ ಅಧ್ಯಕ್ಷ ಸುರೇಂದ್ರ ಅಡಿಗ, ನೃತ್ಯ ನಿಕೇತನದ ವಿದ್ವಾನ್ ಸುಧೀರ್ ರಾವ್ ಕೊಡವೂರು, ವಿಧುಷಿ ಮಾನಸಿ ಸುಧೀರ್, ಪೇಜಾವರ ಮಠದ ವಿಷ್ಣುಮೂರ್ತಿ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ನಂತರ ವಿಧುಷಿ ಮಾನಸಿ ಸುಧೀರ್ ಇವರಿಂದ ‘ಮಹನಾಯಕಿ ಹಿಡಿಂಬೆ’ ನೃತ್ಯ ಕಾರ್ಯಕ್ರಮ ಜರಗಿತು.
Next Story





