Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದು ಮೊಬೈಲ್ ನ ಖರ್ಚಲ್ಲಿ ಇಡೀ...

ಒಂದು ಮೊಬೈಲ್ ನ ಖರ್ಚಲ್ಲಿ ಇಡೀ ಜೀವಮಾನಕ್ಕೆ ನಿಮ್ಮ ಮನೆಗೆ ಬೇಕಾದಷ್ಟು ವಿದ್ಯುತ್ ಉತ್ಪಾದಿಸಿ !

ವಾರ್ತಾಭಾರತಿವಾರ್ತಾಭಾರತಿ13 Jun 2016 1:24 PM IST
share
ಒಂದು ಮೊಬೈಲ್ ನ ಖರ್ಚಲ್ಲಿ ಇಡೀ ಜೀವಮಾನಕ್ಕೆ ನಿಮ್ಮ ಮನೆಗೆ ಬೇಕಾದಷ್ಟು ವಿದ್ಯುತ್ ಉತ್ಪಾದಿಸಿ !

ತಿರುವನಂತಪುರಂ: ಒಂದು ಐಫೋನ್ ವೆಚ್ಚದಲ್ಲಿ ಇಡೀ ಜೀವಮಾನಕ್ಕೆ ಒಬ್ಬರ ಮನೆಗೆ ಬೇಕಾದಷ್ಟು ವಿದ್ಯುತ್ ಉತ್ಪಾದಿಸಬಹುದೆಂದರೆ ಆಶ್ಚರ್ಯವಾಗುವುದಲ್ಲವೇ ? ಆದರೆ ಇದು ಸಾಧ್ಯವೆಂದು ಹೇಳುತ್ತಾರೆ ಕೇರಳದ ಅರುಣ್ ಮತ್ತು ಅನೂಪ್ ಜಾರ್ಜ್ ಸಹೋದರರು. ಅವಂತ್ ಗಾರ್ಡೆ ಇನ್ನೊವೇಶನ್ಸ್ ಎಂಬ ಸ್ಟಾರ್ಟ್ ಅಪ್ ಸಂಸ್ಥೆಯ ಸ್ಥಾಪಕರಾಗಿರುವ ಇವರು ಪರಿಸರಕ್ಕೆ ಹಾನಿಯಾಗದಂತೆ ವಿದ್ಯುತ್ ತಯಾರಿಸಲು ಒಂದು ಪರಿಹಾರ ಕಂಡುಕೊಂಡಿದ್ದಾರೆ. ಇವರು ಅಭಿವೃದ್ಧಿಪಡಿಸಿರುವ ಕಡಿಮೆ ವೆಚ್ಚದ ವಿಂಡ್ ಟರ್ಬೈನ್  ಒಂದು ಮನೆಗೆ ಜೀವಮಾನಪೂರ್ತಿ ವಿದ್ಯುತ್ ಸರಬರಾಜು ಮಾಡಬಹುದು. ಒಂದು ಸೀಲಿಂಗ್ ಫ್ಯಾನಿನ ಗಾತ್ರದ ಈ ಟರ್ಬೈನ್ ದಿನವೊಂದಕ್ಕೆ 5. ಕಿಲೋವಾಟ್ ವಿದ್ಯುತ್ ಉತ್ಪಾದಿಸುತ್ತದೆ ಹಾಗೂ ಅದರ ಒಟ್ಟು ವೆಚ್ಚ ಕೇವಲ 750 ಅಮೇರಿಕನ್ ಡಾಲರ್, ಅಂದರೆ ಅಂದಾಜು ರೂ 50,000 ಆಗಿದೆ. ಈ ವಿಂಡ್ ಟರ್ಬೈನ್ ಈ ವರ್ಷ ಬಿಡುಗಡೆಯಾಗಲಿದ್ದು ಮನೆಗಳಿಗೆ, ವಾಣಿಜ್ಯ ಮಳಿಗೆಗಳಿಗೆ ಹಾಗೂ ಹಳ್ಳಿಗಳಿಗೆ ಉಪಯುಕ್ತವಾಗಿದೆ.
ಸಾಧಾರಣವಾಗಿ ಒಂದು ಕಿಲೋವಾಟ್ ವಿದ್ಯುತ್ ಉತ್ಪಾದಿಸುವ ವಿಂಡ್ ಟರ್ಬೈನ್  ಬೆಲೆ ರೂ 3ರಿಂದ 7 ಲಕ್ಷದ ತನಕ ಇರುವಾಗ  ಈ ಸಹೋದರರು ಕಳೆದ ವರ್ಷ ಆರಂಭಗೊಂಡ ಅವಂತ್ ಗಾರ್ಡ್ ಎಂಬ ತಮ್ಮ ಕಂಪೆನಿಯ ಮುಖಾಂತರ ಕೇವಲ ರೂ 50,000 ಅಥವಾ ಅದಕ್ಕಿಂತಲೂ ಕಡಿಮೆ ಬೆಲೆಗೆ ವಿಂಡ್ ಟರ್ಬೈನ್ ಒದಗಿಸಲಿದ್ದಾರೆ.
ತನ್ನ ಪ್ರಥಮ ಸ್ಥಾವರವನ್ನು ಕಂಪೆನಿ ಈ ವರ್ಷದ ಜನವರಿಯಲ್ಲಿ ತಿರುವನಂತಪುರಂನಲ್ಲಿ ಆರಂಭಿಸಿತ್ತು. ಮೊದಲಾಗಿ ಸಣ್ಣ ವಿಂಡ್ ಟರ್ಬೈನ್ ಮಾದರಿಯನ್ನು ಅಭಿವೃದ್ಧಿ ಪಡಿಸಿದ ಸಂಸ್ಥೆ ಇದು  300 ಕಿಲೋವಾಟ್ ಹಾಗೂ ಅದಕ್ಕಿಂತ ಹೆಚ್ಚು ವಿದ್ಯುತ್ ಅಗತ್ಯವಿರುವವರಿಗೆ ಸಹಕಾರಿ ಎಂದು ಹೇಳಿತು.
ಈ ಸಹೋದರರ ಕ್ರಾಂತಿಕಾರಿ ಸಾಧನ ಅವರಿಗೆ  ಟಾಪ್ 20 ಕ್ಲೀನ್ಟೆಕ್ ಇನ್ನೊವೇಶನ್ಸ್ ಇನ್ ಇಂಡಿಯಾದಲ್ಲಿ ಸ್ಥಾನವೊಂದನ್ನು ನೀಡಿದೆ. ``ಯುಎನ್ ಸಸ್ಟೇನೇಬಲ್ ಎನರ್ಜಿ ಫಾರ್ ಆಲ್' ಕಾರ್ಯಕ್ರಮದಡಿಯಲ್ಲಿಯೂ  ಪ್ರಥಮ 10 ಕ್ಲೀನ್ ಎನರ್ಜಿ ಕಂಪೆನಿಗಳಲ್ಲಿ ಅದು ಸ್ಥಾನ ಪಡೆದಿದೆ.
ಗ್ಲೋಬಲ್ ವಿಂಡ್ ಎನರ್ಜಿ  ಕೌನ್ಸಿಲ್ ಬಳಿಯಿರುವ ಅಂಕಿಸಂಖ್ಯೆಗಳ ಪ್ರಕಾರ ಪವನ ಯಂತ್ರ ವಿದ್ಯುತ್ ಉತ್ಪಾದನೆಯಲ್ಲಿ  ಭಾರತವು ಚೀನಾ, ಅಮೇರಿಕಾ, ಜರ್ಮನಿ ನಂತರದ ನಾಲ್ಕನೇ ಸ್ಥಾನದಲ್ಲಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X