ಸುಳ್ಯ: ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ಸುಳ್ಯ, ಜೂ.13: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪೆರುವಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ, ಕಾನಾವು ದೇಮೂಲೆ ಮೋನಪ್ಪ ನಾಯ್ಕರ ಪುತ್ರ ಲಿಖಿನ್ ಪೆರುವಾಜೆಯ ಕಾನಾವಿನ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರತಿಭಾವಂತ ವಿದ್ಯಾರ್ಥಿಯಾದ ಈತನ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





