Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಡಿಪು: ಅರ್ಕಾಣ-ಕಂಬಳಪದವು ಚತುಷ್ಪಥ...

ಮುಡಿಪು: ಅರ್ಕಾಣ-ಕಂಬಳಪದವು ಚತುಷ್ಪಥ ರಸ್ತೆಗೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ13 Jun 2016 9:57 PM IST
share
  • ಮುಡಿಪು: ಅರ್ಕಾಣ-ಕಂಬಳಪದವು ಚತುಷ್ಪಥ ರಸ್ತೆಗೆ ಶಿಲಾನ್ಯಾಸ
  • ಮುಡಿಪು: ಅರ್ಕಾಣ-ಕಂಬಳಪದವು ಚತುಷ್ಪಥ ರಸ್ತೆಗೆ ಶಿಲಾನ್ಯಾಸ

ಕೊಣಾಜೆ, ಜೂ.13: ರಾಜ್ಯ ಸರಕಾರದ ಅನುದಾನದಿಂದ ಮಾಣಿ-ಉಳ್ಳಾಲ ಮುಖ್ಯ ರಸ್ತೆಯ ಅಗಲೀಕರಣದ ಎರಡು ಹಂತದ ಕಾಮಗಾರಿಗಳು ಮುಗಿದಿದ್ದು, ಇದೀಗ ಇನ್ಫೊಸಿಸ್ ಕಂಪೆನಿಯು ಅರ್ಕಾಣ ಜಂಕ್ಷನ್‌ನಿಂದ ಕಂಬಳಪದವಿನವರೆಗಿನ 1ಕಿ.ಮೀ ರಸ್ತೆಯನ್ನು ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ಮಾದರಿ ರಸ್ತೆಯನ್ನಾಗಿ ರೂಪಿಸಲಿದ್ದು, ಕಾಮಗಾರಿಗೆ ಸಚಿವ ಯು.ಟಿ ಖಾದರ್ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು.

ರಾಜ್ಯ ಸರಕಾರದ 14 ಕೋಟಿ ರೂ.ಅನುದಾನದಿಂದ ತೊಕೊಟ್ಟು, ಕೊಣಾಜೆ, ಮುಡಿಪು, ಮೆಲ್ಕಾರ್ ಸಂಪರ್ಕದ ಉಳ್ಳಾಲ-ಮಾಣಿ ರಸ್ತೆಯ ಅಗಲೀಕರಣದ ಎರಡು ಹಂತದ ಕಾಮಗಾರಿಯು ಈಗಾಗಲೇ ಮುಗಿದಿದ್ದು, ಮೂರನೆ ಹಂತದ ಕಾಮಗಾರಿಗೆ ಕಾಯಕಲ್ಪದೊರೆತಿದೆ. ಮುಡಿಪುವಿನ ಕಂಬಳಪದವಿನಲ್ಲಿ ಕಾರ್ಯಾಚರಿಸುತ್ತಿರುವ ಇನ್ಫೊಸಿಸ್ ಶಾಖೆಯ ಎದುರಿನಿಂದ ಹಾದು ಹೋಗುವ ಅರ್ಕಾಣ-ಕಂಬಳಪದವು ರಸ್ತೆಯನ್ನು ಉತ್ಕೃಷ್ಟ ಗುಣಮಟ್ಟದಿಂದ ಚತುಷ್ಪಥಗೊಳಿಸಲು ಇನ್ಫೊಸಿಸ್ ಕಂಪೆನಿಯು 8 ಕೋಟಿ ರೂ. ದೇಣಿಗೆ ನೀಡಿ ಅಭಿವೃದ್ಧಿಗೆ ಸರಕಾರದೊಂದಿಗೆ ಕೈಜೋಡಿಸಿದೆ.

ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಚಿವ ಖಾದರ್, ಅಭಿವೃದ್ಧಿ ಕಾರ್ಯಗಳಲ್ಲಿ ಸರಕಾರದೊಂದಿಗೆ ಖಾಸಗಿ ಸಂಸ್ಥೆಗಳು ಕೈಜೋಡಿಸುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ಮಾಣಿ-ಉಳ್ಳಾಲ ರಸ್ತೆಯನ್ನು ಚತುಷ್ಪಥಗೊಳಿಸಲು ಈಗಾಗಲೇ ಕೇಂದ್ರ ಸರಕಾರಕ್ಕೆ ಪ್ರಸ್ತಾಪ ಸಲ್ಲಿಸಿದ್ದು ಯೋಜನೆಯು ಪ್ರಗತಿಯಲ್ಲಿದೆ. ಅಲ್ಲಿಯವರೆಗೆ ಸುಗಮಸಂಚಾರಕ್ಕೆ ರಾಜ್ಯ ಸರಕಾರದ ಅನುದಾನದಿಂದ ರಸ್ತೆ ಅಗಲೀಕರಣ ನಡೆಸಲಾಗುತ್ತಿದೆ. ಕೇಂದ್ರ ಸರಕಾರದ ಚತುಷ್ಪಥ ಕಾಮಗಾರಿ ಯೋಜನೆಗೆ ಇನ್ಫೋಸಿಸ್‌ನಿಂದ ನಿರ್ಮಾಣಗೊಳ್ಳುತ್ತಿರುವ 1ಕಿ.ಮೀ ಚತುಷ್ಪಥ ರಸ್ತೆಯೇ ಆರಂಭಿಕ ಅಡಿಪಾಯವಾಗಲಿದೆ. ಅಡ್ಯಾರ್-ಹರೇಕಳ ಸಂಪರ್ಕದ ಸೇತುವೆ ನಿರ್ಮಾಣಕ್ಕೂ ಸಿಆರ್‌ಎಫ್ ನಿಧಿಯಿಂದ 80 ಕೋಟಿ ರೂಪಾಯಿ ಅನುದಾನ ಮಂಜೂರಾತಿಗೆ ಪ್ರಯತ್ನ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಇನ್ಫೊಸಿಸ್ ಅಧಿಕಾರಿ ಗೋಪಿ ಕೆ.ಕೆ ಮಾತನಾಡಿ, ಮುಡಿಪುವಿನಲ್ಲಿರುವ ತಮ್ಮ ಕಂಪೆನಿಯ ಶಾಖೆಗೆ ಇದೇ ಮಾರ್ಗವಾಗಿ ಅನೇಕ ಉದ್ಯೋಗಿಗಳು ಪ್ರಯಾಣಿಸುತ್ತಿದ್ದು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕಿಂಚಿತ್ತು ಸಹಾಯ ನೀಡುವುದು ನಮ್ಮದೂ ಜವಾಬ್ದಾರಿಯಾಗಿದೆ. ಇದರ ಜೊತೆಗೆ ಸ್ಥಳೀಯ ಸಂಸ್ಥೆ ಮತ್ತು ಮಕ್ಕಳ ಕೌಶಲ್ಯಾಭಿವೃದ್ಧಿಗೆ ಸಹಾಯ ನೀಡಲೆಂದೇ ಯೋಜನೆಗಳನ್ನು ರೂಪಿಸಲಾಗಿದೆ ಎಂದರು.

ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಸದಸ್ಯರಾದ ಹೈದರ್ ಕೈರಂಗಳ, ಪಜೀರು ಗ್ರಾ.ಪಂ ಅಧ್ಯಕ್ಷ ಸೀತಾರಾಮ ಶೆಟ್ಟಿ, ಮುಖಂಡರಾದ ರಝಾಕ್ ಕುಕ್ಕಾಜೆ, ಕೊಣಾಜೆ ಗ್ರಾ.ಪಂ.ಅಧ್ಯಕ್ಷ ಶೌಕತ್ ಆಲಿ, ಸಂತೋಷ್ ಶೆಟ್ಟಿ, ಪ್ರಶಾಂತ್ ಕಾಜವ, ತಾ.ಪಂ. ಸದಸ್ಯ ಹೈದರ್ ಕೈರಂಗಳ, ಇರಾ ಗ್ರಾ.ಪಂ.ಅಧ್ಯಕ್ಷ ರಝಾಕ್ ಕುಕ್ಕಾಜೆ, ಅಬ್ದುಲ್ ಜಲೀಲ್ ಮೋಂಟುಗೋಳಿ, ಪದನಾಭ ನರಿಂಗಾನ, ನಾಸಿರ್ ನಡುಪದವು, ನಝರ್ ಷಾ, ಸಮೀರ್, ಉಮ್ಮರ್ ಪಜೀರು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X