ದಕ್ಷಿಣ ಪದವೀಧರರ ಕ್ಷೇತ್ರ; ಜೆಡಿಎಸ್‌ನ ಕೆ.ಟಿ.ಶ್ರೀಕಂಠೇಗೌಡ ಮೇಲುಗೈ
ವಿಧಾನಪರಿಷತ್ ಚುನಾವಣೆ;ಮೊದಲ ಪ್ರಾಶಸ್ತ್ಯದ ಮತಗಳ ಎಣಿಕೆ ಕಾರ್ಯ ಮುಕ್ತಾಯ

ಮೈಸೂರು, ಜೂ.13: ದಕ್ಷಿಣ ಪದವೀಧರರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯ ಮೊದಲ ಪ್ರಾಶಸ್ತ್ಯದ ಮತಗಳ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಜೆಡಿಎಸ್‌ನ ಕೆ.ಟಿ.ಶ್ರೀಕಂಠೇಗೌಡ 308 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಇಲ್ಲಿನ ಊಟಿ ರಸ್ತೆಯ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆಯುತ್ತಿದ್ದು, ಶ್ರೀಕಂಠೇಗೌಡ ಒಟ್ಟು17,161 ಮತ ಪಡೆದಿದ್ದಾರೆ.
ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಅವರಿಗೆ 16,823 ಮತ, ಕಾಂಗ್ರೆಸ್‌ನ ಡಾ.ಎಚ್.ಎನ್.ರವೀಂದ್ರ 8,245 ಮತಗಳನ್ನು ಗಳಿಸಿದ್ದಾರೆ.
Next Story





