ಪಡುಬಿದ್ರೆ: ವ್ಯಕ್ತಿಗೆ ಮಾರಣಾಂತಿಕ ಹಲ್ಲೆ

ಪಡುಬಿದ್ರೆ, ಜೂ.13: ವ್ಯಕ್ತಿಯೋರ್ವರಿಗೆ ನಾಲ್ವರು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಸಾಂತೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಹಲ್ಲೆಗೊಳಗಾದವರನ್ನು ಸಾಂತೂರು ಫಿಲಿಪ್ ಡಿಸೋಜಾ(45) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರತಿದಿನದಂತೆ ತನ್ನ ಮಕ್ಕಳನ್ನು ಟ್ಯೂಷನ್ ಕ್ಲಾಸ್‌ನಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ, ತಂಡವೊಂದು ತಲವಾರಿನಿಂದ ಹಲ್ಲೆ ನಡೆಸಿದೆ. ಗಂಭೀರ ಗಾಯಗೊಂಡ ಫಿಲಿಪ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಇದನ್ನು ಗಮನಿಸಿದ ಅವರ ಸ್ನೇಹಿತರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪಡುಬಿದ್ರೆ ಪೊಲೀಸರು ತನಿಖೆ ನಡೆಸುತಿದ್ದಾರೆ. ಹಲ್ಲೆಗೆ ಪೂರ್ವ ಧ್ವೇಷವೇ ಕಾರಣ ಎಂದು ತಿಳಿದುಬಂದಿದೆ.
Next Story





