Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರವಾರ ನಗರಸಭೆಯ ಸಾಮಾನ್ಯ ಸಭೆ

ಕಾರವಾರ ನಗರಸಭೆಯ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ13 Jun 2016 11:23 PM IST
share
ಕಾರವಾರ ನಗರಸಭೆಯ ಸಾಮಾನ್ಯ ಸಭೆ

ಕಾರವಾರ, ಜೂ.13: ಕಸ ವಿಲೇವಾರಿ ಸಮಸ್ಯೆ, ಕೋಡಿಭಾಗ ರಸ್ತೆ ಅಗಲೀಕರಣ, ಮೀನುಮಾರುಕಟ್ಟೆ ಗೊಂದಲ ನಿವಾರಣೆಯ ಕುರಿತು ನಗರಸಭೆಯಲ್ಲಿ ಸೋಮವಾರ ಸಭೆ ನಡೆದು, ಕೆಲ ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ಹಾಗೂ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು. ಕಾರವಾರ ಕೋಡಿಭಾಗ ರಸ್ತೆ ಅಗಲೀಕರಣ ಹಾಗೂ ಮೀನುಗಾರರಿಗೆ ಶಾಶ್ವತ ಮೀನು ಮಾರುಕಟ್ಟೆ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಸ್ಥಳೀಯ ಶಾಸಕ ಸತೀಶ್ ಸೈಲ್ ಮಧ್ಯಪ್ರವೇಶಿಸಿದರು.

 ಚರ್ಚೆಯ ನಂತರ ರಸ್ತೆ ಅಗಲೀಕರಣ ವಿಷಯದಲ್ಲಿ ಎಲ್ಲರಿಗೂ ಒಂದೇ ಬಗೆಯ ನ್ಯಾಯ ನೀಡಬೇಕು. ಕೆಲವೆಡೆ 14ಮೀ. ಹಾಗೂ ಕೆಲವೆಡೆ 18ಮೀ. ನಂತೆ ರಸ್ತೆ ಅಗಲೀಕರಣ ನಡೆಯುತ್ತಿದ್ದು, ಇದಕ್ಕಾಗಿ ಈಗಾಗಲೇ ಹಲವರ ಮನೆ, ಮಳಿಗೆಗಳನ್ನು ಧ್ವಂಸ ಮಾಡಲಾಗಿದೆ. ಕೆಲವರಿಗೆ ಮಾತ್ರ ವಿನಾಯಿತಿ ನೀಡಲಾಗುತ್ತಿದೆ. ಈ ಬಗೆಯ ತಾರತಮ್ಯ ಸಲ್ಲದು ಎಂದು ಸದಸ್ಯ ಪ್ರೇಮಾನಂದ ಗುನಗಾ ಆಕ್ಷೇಪಿಸಿದರು.

 ಎಲ್ಲ್ಲೆಡೆ 18ಮೀ. ಅಗಲೀಕರಣ ಕಡ್ಡಾಯ ಮಾಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಹೃದಯಭಾಗದಲ್ಲಿರುವ ಮೀನು ಮಾರುಕಟ್ಟೆಯನ್ನು ಧ್ವಂಸ ಮಾಡಲಾಗಿದ್ದು, ಇದೇ ಸ್ಥಳದಲ್ಲಿ ಹೊಸ ಮೀನು ಮಾರುಕಟ್ಟೆ ನಿರ್ಮಿಸುವಂತೆ ಮೀನುಗಾರರು ಒತ್ತಾಯಿಸುತ್ತಿರುವುದು ಪ್ರಸ್ತಾಪಕ್ಕೆ ಬಂದಿತು. ಸದ್ಯ ನಿರ್ಮಿಸಲಾದ ತಾತ್ಕಾಲಿಕ ಮೀನು ಮಾರುಕಟ್ಟೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸುವುದು ಹಾಗೂ ಮೀನುಗಾರರ ಬೇಡಿಕೆಗೆ ತಕ್ಕಂತೆ ಅತ್ಯಾಧುನಿಕ ಸೌಲಭ್ಯದ ಮತ್ಸಮಳಿಗೆ ಸ್ಥಾಪಿಸುವ ಬಗ್ಗೆ ಚರ್ಚೆ ನಡೆಯಿತು. ಹೆಸ್ಕಾಂ ಕಚೇರಿ ಸಮೀಪ ಮೀನು ಮಾರುಕಟ್ಟೆಗೆ ಗುರುತಿಸಲಾದ ಸ್ಥಳದಲ್ಲಿ ತರಕಾರಿ ಹಾಗೂ ಹಣ್ಣು ಮಾರುಕಟ್ಟೆ ನಿರ್ಮಿಸುವ ಬಗ್ಗೆ ಚರ್ಚೆ ನಡೆದವು. ಮೊದಲಿನ ಠರಾವನ್ನು ರದ್ದುಗೊಳಿಸಿ ಹೊಸ ಠರಾವು ಬರೆಯುವಂತೆ ಶಾಸಕ ಸತೀಶ್ ಸೈಲ್ ಸೂಚಿಸಿದರು.

ಶಾಸಕರ ಆಗಮನಕ್ಕೂ ಮುನ್ನ ನಡೆದ ಚರ್ಚೆಗಳಲ್ಲಿ ನಾಮನಿರ್ದೇಶಿತ ಸದಸ್ಯರ ಮಾತುಗಳು ಜೋರಾಗಿ ಕೇಳಿಸಿದವು. ಕಸ ವಿಲೇವಾರಿ ಅಸಮಪರ್ಕವಾಗಿರುವ ಬಗ್ಗೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಘನತ್ಯಾಜ್ಯ ವಸ್ತ್ತುಗಳ ವಿಲೇವಾರಿ ಹಾಗೂ ಮನೆ ಮನೆ ಕಸ ಸಂಗ್ರಹಣಾ ವಾಹನಗಳಿಗೆ ಜಿಪಿಎಸ್ ಅಳವಡಿಸುವ ವಿಷಯದಲ್ಲಿ ಅವ್ಯವಹಾರದ ದೂರುಗಳು ಕೇಳಿ ಬಂದವು. ಹಿಂದಿನ ಅಧಿಕಾರ ಅವಧಿಯ ಬಗ್ಗೆ ಕೆಲ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದಾಗ ಕೆಲ ಕಾಲ ಗರಂ ಆದ ಉಪಾಧ್ಯಕ್ಷೆ ಲೀಲಾಬಾಯಿ ಠಾಣೆಕರ್, ತಮ್ಮ ಅವಧಿಯಲ್ಲಿ ಒಂದೇ ಒಂದು ರೂ. ಕೂಡ ಅವ್ಯವಹಾರ ನಡೆದಿಲ್ಲ ಎನ್ನುವ ಮೂಲಕ ಸಭೆಯನ್ನು ಸುಮ್ಮನಾಗಿಸಿದರು. ಇನ್ನು ಬಡವರ ಹೆಸರಿನಲ್ಲಿ ಆರೋಗ್ಯ ಸವಲತ್ತು ನೀಡುವಂತೆ ಶ್ರೀಮಂತರು ಅರ್ಜಿ ಸಲ್ಲಿಸುತ್ತಿದ್ದು, ಇದನ್ನು ತಿರಸ್ಕರಿಸುವಂತೆ ಸದಸ್ಯರು ಒತ್ತಾಯಿಸಿದರು. ನಗರಸಭೆ ಕಚೇರಿಗೆ ಸಿಸಿ ಟಿವಿ ಅಳವಡಿಸುವ ಹಾಗೂ ಇನ್ನಿತರ ಅಭಿವೃದ್ಧಿ ವಿಷಯಗಳ ಚರ್ಚೆಗಳು ನಡೆದವು. ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ನೇಹಾ ನಾಯ್ಕ, ಪೌರಾಯುಕ್ತ ಜತ್ತನ್ನ ಹಾಗೂ ವಿವಿಧ ವಾರ್ಡ್‌ನ ಸದಸ್ಯರು ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X