ಪುತ್ತೂರು: ವಿಶ್ವ ಪರಿಸರ ದಿನಾಚಣೆ

ಪುತ್ತೂರು, ಜೂ. 14: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ಪುತ್ತೂರು ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಅರಣ್ಯ ಇಲಾಖೆ ಮತ್ತು ಸುದಾನ ವಸತಿಯುತ ಶಾಲೆ ಇವುಗಳ ಆಶ್ರಯದಲ್ಲಿ ಸುಧಾನ ವಸತಿಯುತ ಶಾಲೆಯ ವಠಾರದಲ್ಲಿ ಮಂಗಳವಾರ ‘ವಿಶ್ವ ಪರಿಸರ ದಿನಾಚರಣೆ’ ಕಾರ್ಯಕ್ರಮ ನಡೆಸಲಾಯಿತು.
ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಪ್ರಧಾನ ಹಿರಿಯ ವ್ಯಾವಹಾರಿಕ ನ್ಯಾಯಾಧೀಶ ಸಿ.ಕೆ. ಬಸವರಾಜ್ ಕಾರ್ಯಕ್ರಮ ಉದ್ಘಾಟಿಸಿದರು.
ವಕೀಲರ ಸಂಘದ ಉಪಾಧ್ಯಕ್ಷ ಜಯಾನಂದ ಕೆ. ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಮಹೇಶ್ ಕಜೆ, ಮಂಜುನಾಥ್ ಎನ್.ಎಸ್, ಸಹಾಯಕ ಸರ್ಕಾರಿ ಅಭಿಯೋಜಕ ತಮ್ಮಣ್ಣ ಸಿ, ಪ್ರತಾಪ್ ಕುಮಾರ್, ವಕೀಲರ ಸಂಘದ ಕಾರ್ಯದರ್ಶಿ ಸಂತೋಷ್ ಕುಮಾರ್ ಎಂ, ಖಜಾಂಜಿ ಮೋನಪ್ಪ ಎಂ., ಸುದಾನ ವಸತಿಯುತ ಶಾಲೆಯ ಸಂಚಾಲಕ ರೆ. ವಿಜಯ ಹಾರ್ವಿನ್, ವಲಯ ಅರಣ್ಯಾಧಿಕಾರಿ ವಿ.ಪಿ. ಕಾರ್ಯಪ್ಪ, ವಕೀಲ ಜನಾರ್ಧನ ಬೆಟ್ಟಂಪಾಡಿ ಮತ್ತಿತರರು ಉಪಸ್ಥಿತರಿದ್ದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಪರಿಸರದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು.





