ಬಂಟ್ವಾಳ, ಜೂ.14: ತಾಲೂಕಿನ ಮಾಣಿ ಪಲ್ಲಿಕೆ ರಾಷ್ಟ್ರೀಯ ಹೆದ್ದಾರಿಯ ಬದಿಯ ಕಂದಕವೊಂದಕ್ಕೆ ಲಾರಿಯೊಂದು ಉರುಳಿಬಿದ್ದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಸಂಚಾರಿಸುತ್ತಿದ್ದ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಘಟನೆ ವೇಳೆ ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.