Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದ ಸಮಸ್ಯೆಗಳಿಗೆ ಸ್ವದೇಶಿ ಕೋಮುವಾದವೇ...

ದೇಶದ ಸಮಸ್ಯೆಗಳಿಗೆ ಸ್ವದೇಶಿ ಕೋಮುವಾದವೇ ಮೂಲ ಕಾರಣ: ಬರಗೂರು ರಾಮಚಂದ್ರಪ್ಪ

‘ಸಮಕಾಲೀನ ತಲ್ಲಣಗಳು’ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ14 Jun 2016 10:47 PM IST
share
ದೇಶದ ಸಮಸ್ಯೆಗಳಿಗೆ ಸ್ವದೇಶಿ ಕೋಮುವಾದವೇ ಮೂಲ ಕಾರಣ: ಬರಗೂರು ರಾಮಚಂದ್ರಪ್ಪ

ಬೆಂಗಳೂರು, ಜೂ. 14: ಪ್ರಸ್ತುತ ದೇಶ ಎದುರಿಸುತ್ತಿರುವ ಹಲವು ಸಮಸ್ಯೆ ಹಾಗೂ ತಲ್ಲಣಗಳಿಗೆ ಸ್ವದೇಶಿ ಕೋಮುವಾದ ಹಾಗೂ ವಿದೇಶಿ ಬಂಡವಾಳವೇ ಮೂಲ ಬೇರಾಗಿದೆ ಎಂದು ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ವಿಶ್ಲೇಷಿಸಿದ್ದಾರೆ.
ಮಂಗಳವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ಸಾಹಿತ್ಯ ಪರಿಷತ್ ನಗರದ ಶಿವರಾತ್ರೀಶ್ವರ ಕೇಂದ್ರದ ಸಭಾಂಗಣದಲ್ಲಿ ಆಯೋಜಿಸಿದ್ದ ‘ಸಮಕಾಲೀನ ತಲ್ಲಣಗಳು’ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಸರಕಾರಗಳು ವಿದೇಶಿ ಬಂಡವಾಳಕ್ಕೆ ಮಂಡಿ ಊರಿವೆ. ಇದರ ಪರಿಣಾಮ ಆಹಾರ, ಆರೋಗ್ಯ, ಶಿಕ್ಷಣ ಸೇರಿದಂತೆ ಎಲ್ಲವೂ ಉದ್ಯಮವಾಗಿದೆ. ಕೃಷಿ ಮಾಡುತ್ತಿದ್ದ ಪ್ರದೇಶಗಳಲ್ಲಿ ಬೃಹತ್ ಕಟ್ಟಡಗಳು ತಲೆ ಎತ್ತುತ್ತಿವೆ. ದಿನೇ ದಿನೇ ಕೃಷಿ ಪ್ರದೇಶಗಳು ಕಡಿಮೆಯಾಗುತ್ತಿವೆ ಎಂದು ಬರಗೂರು ರಾಮಚಂದ್ರಪ್ಪ ಆತಂಕ ವ್ಯಕ್ತಪಡಿಸಿದರು.

ಬಂಡವಾಳಶಾಹಿಗಳು ತೃತೀಯ ರಾಷ್ಟ್ರಗಳ ಮೇಲೆ ಆರ್ಥಿಕ ದಬ್ಬಾಳಿಕೆ ಮಾಡುವ ಮೂಲಕ ಯುದ್ಧವನ್ನು ಸಾರಿವೆ. ಇದರ ಪರಿಣಾಮ ಭಾರತ, ಆಫ್ರಿಕಾ ದೇಶಗಳಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಈ ಬಗ್ಗೆ ಜಾಗೃತಿ ವಹಿಸಬೇಕಾದ ಸರಕಾರಗಳು ಬಂಡವಾಳಶಾಹಿಗಳಿಗೆ ಗುಲಾಮರಾಗಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
 20ನೆ ಶತಮಾನದಲ್ಲಿ ವಿಶ್ವದ ಎಲ್ಲ ಜನರಿಗೂ ಸಮಾನವಾದ ಶಿಕ್ಷಣ, ಆರೋಗ್ಯ, ಆಹಾರ ಸಿಗಬೇಕೆನ್ನುವುದೆ ಪ್ರಮುಖ ಬೇಡಿಕೆಯಾಗಿತ್ತು. ಇದನ್ನು ಸಾಧಿಸುವುದಕ್ಕಾಗಿ ಜಾಗೃತಿ ಕಾರ್ಯಕ್ರಮಗಳು, ಚಳವಳಿಗಳು ನಡೆಯುತ್ತಿದ್ದವು. ಆದರೆ, ಇಂದು ಹಣಕ್ಕಾಗಿ, ಸಾಮ್ರಾಜ್ಯ ವಿಸ್ತರಣೆಗಾಗಿ ಬಂಡವಾಳಶಾಹಿಗಳ ನಡುವೆ ಪೈಪೋಟಿ ನಡೆಯುತ್ತಿದೆ ಎಂದು ಅವರು ವಿಶ್ಲೇಷಿಸಿದರು.
ಯುದ್ಧವೂ ಉದ್ಯಮವಾಗಿದೆ:
ಬಂಡವಾಳಶಾಹಿಗಳು ಪ್ರೀತಿ, ಪ್ರೇಮ, ಸಾವು, ನೋವು ಎಲ್ಲವನ್ನು ಉದ್ಯಮವನ್ನಾಗಿಯೆ ನೋಡುತ್ತಾರೆ. ಹೀಗಾಗಿಯೆ ದೇಶ ಪ್ರೇಮದ ಹೆಸರಿನಲ್ಲಿ ದೇಶ-ದೇಶಗಳ ನಡುವೆ ಯುದ್ಧಕ್ಕೆ ಪ್ರಚೋದನೆ ನೀಡುತ್ತಿದ್ದಾರೆ. ಆ ಮೂಲಕ ಯುದ್ಧ ಶಸ್ತ್ರಾಸ್ತ್ರಗಳನ್ನು ಯುದ್ಧ ಮಾಡುವ ಎರಡು ದೇಶಗಳಿಗೆ ಮಾರಾಟ ಮಾಡುತ್ತಾರೆ ಎಂದು ಅವರು ಹೇಳಿದರು.
ಬಂಡವಾಳದಿಂದ ಸಂಬಂಧ ಹಾಳು: ಬಂಡವಾಳದಿಂದ ಉಂಟಾಗುವ ಭೋಗದ ಕಲ್ಪನೆ ಸಂಬಂಧಗಳ ನಡುವಿರುವ ಅರ್ಥವನ್ನೆ ಇಲ್ಲವಾಗಿಸುತ್ತಿದೆ. ಇದರ ಪರಿಣಾಮವಾಗಿಯೆ ತಂದೆ-ಮಗಳ, ಅಣ್ಣ-ತಂಗಿಯ ನಡುವೆ ಲೈಂಗಿಕ ಪ್ರಕರಣಗಳು ಹೆಚ್ಚಾಗುತ್ತಿವೆ. ಇದು ಕುಟುಂಬ ವ್ಯವಸ್ಥೆಗೆ ಅಪಾಯ ತಂದೊಡ್ಡಿದೆ ಎಂದು ಬರಗೂರು ರಾಮಚಂದ್ರಪ್ಪ ಆತಂಕ ವ್ಯಕ್ತಪಡಿಸಿದರು.
ಸತ್ಯವನ್ನು ಒಬ್ಬರಿಂದ ಒಬ್ಬರಿಗೆ ಮುಟ್ಟಿಸುವಂತಹ ಕೆಲಸ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಸಾಹಿತಿಗಳು, ವಿಚಾರವಾದಿಗಳು ಸೇರಿದಂತೆ ಪ್ರತಿಯೊಬ್ಬರು ತಮ್ಮದೆ ಆದ ರೀತಿಯಲ್ಲಿ ವೈಜ್ಞಾನಿಕ ಸಮಾಜವನ್ನು ಕಟ್ಟಲು ಶ್ರಮಿಸಬೇಕಾಗಿದೆ ಎಂದು ಅವರು ಆಶಿಸಿದರು.
ಕರ್ನಾಟಕ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಾ.ಸಿ.ವೀರಣ್ಣ ಮಾತನಾಡಿ, ದೇಶದ ಸಾಮಾನ್ಯ ಜನತೆ ಹಲವು ಆತಂಕಗಳನ್ನು ಎದುರಿಸುತ್ತಿದ್ದರೆ, ಅದೇ ಹೊತ್ತಿನಲ್ಲಿ ಕೆಲವು ಕೋಟ್ಯಾಧಿಪತಿಗಳು ಸಂಪತ್ತನ್ನೆಲ್ಲ ಕೊಳ್ಳೆ ಹೊಡೆದು ವಿದೇಶಿ ಬ್ಯಾಂಕ್‌ಗಳಲ್ಲಿ ಮುಚ್ಚಿಡುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಸರಕಾರ ವೌನ ವಹಿಸಿರುವುದು ಪ್ರಸ್ತುತ ದೇಶ ಎದುರಿಸುತ್ತಿರುವ ದೊಡ್ಡ ತಲ್ಲಣವಾಗಿದೆ ಎಂದು ಅಭಿಪ್ರಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X