Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿರಿಯ ನಾಗರಿಕರ ಆರೆಕೆಗೆ ಕಾಳಜಿ ವಹಿಸಿ:...

ಹಿರಿಯ ನಾಗರಿಕರ ಆರೆಕೆಗೆ ಕಾಳಜಿ ವಹಿಸಿ: ಎಡಿಸಿ

ವಾರ್ತಾಭಾರತಿವಾರ್ತಾಭಾರತಿ14 Jun 2016 11:33 PM IST
share
ಹಿರಿಯ ನಾಗರಿಕರ ಆರೆಕೆಗೆ ಕಾಳಜಿ ವಹಿಸಿ: ಎಡಿಸಿ

ಚಿಕ್ಕಮಗಳೂರು, ಜೂ.14: ಹಿರಿಯ ನಾಗರಿಕರ ಬಗ್ಗೆ ಕಾಳಜಿ ವಹಿಸಿ ಅವರ ಆರೈಕೆ ಮಾಡುವ ಉದ್ದೇಶದಿಂದ ಯೋಗಕ್ಷೇಮ ಕೇಂದ್ರವನ್ನು ತೆರೆಯಲಾಗಿದ್ದು, ಹಿರಿಯ ನಾಗರಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ ಎಂದು ಕರೆ ನೀಡಿದರು.

ಅವರು ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನಗರದ ಚರ್ಚ್ ರಸ್ತೆಯಲ್ಲಿ ಹಿರಿಯ ನಾಗರೀಕರ ಹಗಲು ಯೋಗಕ್ಷೇಮ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ಹಿರಿಯ ನಾಗರಿಕರು ವಯೋವೃದ್ಧರಾಗಿದ್ದರೂ ಮಾನಸಿಕವಾಗಿ ಅವರು ಬಹಳಷ್ಟು ಪ್ರಬುದ್ಧರಾಗಿದ್ದರೂ, ಅವರ ಮಾರ್ಗದರ್ಶನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿರುತ್ತದೆ ಎಂದ ಅವರುಈ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರ ಆರೈಕೆಯನ್ನು ಹೆಚ್ಚಿನ ಮುತುವರ್ಜಿಯಿಂದ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಆಧುನಿಕತೆಯ ಪ್ರಭಾವದಿಂದಾಗಿ ಇಂದಿನ ಯುವ ಜನತೆ ಹೆತ್ತವರನ್ನು ಕಡೆಗಣಿಸುತ್ತಿದ್ದು, ಅವರನ್ನು ವೃದ್ಧಾಶ್ರಮಕ್ಕೆ ಸೇರಿಸುವ ಪರಿಪಾಠ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ ಎಂದು ವಿಷಾದಿಸಿದರು.

ನಿವೃತ್ತ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಗೋಪಾಲಕೃಷ್ಣ ಮಾತನಾಡಿ, ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗಾಗಿ ರಾಜ್ಯ ಸರಕಾರ ಈ ಕೇಂದ್ರವನ್ನು ತೆರೆದಿದೆ ಎಂದರು.

ವಾರ್ತಾ ಅಧಿಕಾರಿ ಬಿ.ಮಂಜುನಾಥ್ ಮಾತನಾಡಿ, ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಸರಕಾರಗಳು ಹಲವಾರು ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ರೂಪಿಸಿದ್ದು, ಹಿರಿಯ ನಾಗರಿಕರು ಸಂಬಂಧಪಟ್ಟ ಇಲಾಖೆಗೆ ತೆರಳಿ ಸೌಲಭ್ಯಗಳ ಪ್ರಯೋಜನವನ್ನು ಪಡೆಯಬೇಕು ಎಂದು ಮನವಿ ಮಾಡಿದರು.

ಸೊಸೈಟಿ ಫಾರ್ ಪೀಪಲ್ಸ್ ಇಂಟೀಗ್ರೇಟೆಡ್ ಡೆವಲಪ್‌ಮೆಂಟ್ ಸಂಸ್ಥೆಯ ಕಾರ್ಯದರ್ಶಿ ಕೆ. ಪ್ರಕಾಶ್, ನ್ಯಾಯವಾದಿ ಸಿ.ಕೆ.ಲೋಕೇಶ್‌ಗೌಡ, ಕೆನರಾ ಬ್ಯಾಂಕ್‌ನ ನಿವೃತ್ತ ವ್ಯವಸ್ಥಾಪಕ ಮಾಲತೇಶ್, ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರಿಯಾಜ್ ಅಹ್ಮದ್ ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಸವರಾಜಯ್ಯ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಗಂಗಾಧರ್ ಪ್ರಾರ್ಥಿಸಿದರು. ಪಾಲಕರ ಹಾಗೂ ಪೋಷಕರ ಕಾಯ್ದೆಯ ಸದಸ್ಯ ಹೆಚ್.ಎಸ್.ಗಂಗಾಧರ್ ಸ್ವಾಗತಿಸಿದರು. ಡಿಡಿಆರ್‌ಸಿ ನೋಡಲ್ ಅಧಿಕಾರಿ ದರ್ಶನ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X